ಮದ್ಯ ಮಾರಾಟ-ಜೂಜಾಟ ತಡೆಗೆ ಕ್ರಮ
Team Udayavani, Apr 25, 2022, 5:46 PM IST
ಕೂಡ್ಲಿಗಿ: ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ತಡೆಗಟ್ಟುವುದರ ಜೊತೆಗೆ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಪಿಎಸ್‌ಐ ಧನಂಜಯ್.ಎಂ ತಿಳಿಸಿದರು.
ಅವರು ಪೊಲೀಸ್ ಠಾಣೆ ವತಿಯಿಂದ ಅಮ್ಮನಕೇರಿ ಗ್ರಾಮದಲ್ಲಿ ಏರ್ಪಡಿಸಿದ್ದ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.
ಅಜ್ಞಾನದ ಅಂಧಕಾರದಿಂದ ಹೊರಬಂತು ಒಳ್ಳೆಯ ಶಿಕ್ಷವನ್ನು ಪಡೆದು ಮಾದರಿ ವ್ಯಕ್ತಿಗಳಾಗಿ ಹೊರಬರಬೇಕಾಗಿದೆ ಎಂದರು. ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡುವುದು ತಂದೆ ತಾಯಿಗಳ ಆದ್ಯ ಕರ್ತವ್ಯವೆಂದು ನುಡಿದರು. ಮಹಿಳಾ ದೌರ್ಜನ್ಯದ ಬಗ್ಗೆ ದೂರುಗಳು ಬಂದಲ್ಲಿ ಅತಿ ತುರ್ತಾಗಿ ಕ್ರಮವಹಿಸಲಾಗುವುದು. ರಸ್ತೆ ಸುರಕ್ಷತೆ ಸೇರಿದಂತೆ ಸಂಚಾರ ನಿಯಮಗಳ ಬಗ್ಗೆ ಈಗಾಗಲೆ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯ ಸಿಬ್ಬಂದಿ ಹಂಪಣ್ಣ, ತಿಪ್ಪಸ್ವಾಮಿ, ಮಹೇಶ ದುರಗಪ್ಪ, ಬಸವ, ನಿಂಗಪ್ಪ, ಗ್ರಾಮದ ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.