ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ

ಗ್ರಾಮಗಳ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ

Team Udayavani, Mar 20, 2022, 12:59 PM IST

solve

ಕೊಟ್ಟೂರು: ಅಲಬೂರು ಗ್ರಾಮದ ಸಮಸ್ಯೆಗಳನ್ನು ಪರಿಶೀಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸುವಂತಾಗಲು ಸರ್ಕಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌ ಹೇಳಿದರು. ಅಲಬೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅವರು ಮಾತನಾಡಿದರು. ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಮನೆ ಮನೆಗೆ ನೇರ ಭೇಟಿ ಮಾಡಿ ಸಮಸ್ಯೆಗಳನ್ನು ಬಗೆರಹರಿಸುವತ್ತ ಮುಂದಾಗಿದ್ದೇವೆ ಎಂದರು.

ಸರ್ಕಾರದ ನಿರ್ದೇಶನದಂತೆ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿತ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮೀಣ ಸೌಲಭ್ಯಗಳ ಕುರಿತು ಅವಲೋಕನ ಮಾಡಲಾಗುತ್ತದೆ. ಅಲ್ಲದೆ ಇಲಾಖಾ ಮಟ್ಟದಲ್ಲಿ ಬಗೆಹರಿಯುವಂತಹ ಸಮಸ್ಯೆಗಳಿದ್ದಲ್ಲಿ ಸ್ಥಳದಲ್ಲಿಯೇ ಪರಿಹರಿಸಲಾಗುತ್ತದೆ ಎಂದರು. ಗ್ರಾಮದಲ್ಲಿರುವ ಬ್ರಹ್ಮ, ವಿಷ್ಣು, ಮಹೇಶ್ವರ ಹಾಗೂ ಇತರ ದೇವಾಲಯಗಳಿಗೆ ಭೇಟಿ ನೀಡಿ ದೇವಸ್ಥಾನಗಳ ದುರಸ್ತಿ ಕಾರ್ಯ ಇರುವುದರಿಂದ ಕೂಡಲೇ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿ ಹಣ ಮಂಜೂರು ಮಾಡಲು ತಿಳಿಸುವುದಾಗಿ ಹೇಳಿದರು.

ನಂತರ ಅಲಬೂರು ಗ್ರಾಮಕ್ಕೆ ಪ್ರಮುಖವಾಗಿ ಸ್ಮಶಾನ, ಕೆರೆ ದುರಸ್ತಿ, ಪಶು ಆಸ್ಪತ್ರೆ, ಬ್ಯಾಂಕ್‌, ಮತ್ತಿತರ ಬಹುಮುಖ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದರು. ನರೇಗಾ ಯೋಜನೆಯಡಿ ರೈತರಿಗೆ ಕೂಡಲೇ ಕೆರೆ ದುರಸ್ತಿಗೆ ಚಾಲನೆ ನೀಡಲು ಅಧಿಕಾರಿಗಳಿಗೆ ತಿಳಿಸಿದರು. ಈ ಭಾಗದಲ್ಲಿ ಅತಿ ಹೆಚ್ಚು ಬೆಳೆಯುವ ಬೆಳೆಗಳಿಗೆ ಗೋದಾಮುಗಳ ವ್ಯವಸ್ಥೆ ನಂತರ ಕೇಂದ್ರ ತೆರೆಯಲು ಸರ್ಕಾರದ ಅನುಮೋದನೆ ದೊರಕಿದ ಕೂಡಲೇ ಕ್ರಮ ವಹಿಸಲಾಗುವುದು ಎಂದರು. ಸಾಮಾಜಿಕ ಭದ್ರತೆ ಯೋಜನೆ ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು.

ತಾಲೂಕಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಾಪಂ ಅಧ್ಯಕ್ಷ ಶಿವಾನಂದಪ್ಪ, ಉಪಾಧ್ಯಕ್ಷ ಶಿಲ್ಪಾ ವೀರನಗೌಡ ಮತ್ತು ಸದಸ್ಯರು, ತಹಶೀಲ್ದಾರ ಕುಮಾರಸ್ವಾಮಿ, ಇಒ ವಿಜಯಕುಮಾರ ಬೆಣ್ಣಿ, ಶಿಕ್ಷಣ ಇಲಾಖೆ ಇಸಿಒ ಅಜ್ಜಪ್ಪ, ಆಯುಷ್‌ ಇಲಾಖೆ ವಿಜಯಕುಮಾರ, ಕೇಶವಮೂರ್ತಿ, ಶ್ರೀಧರ ಜಂಟಿ ನಿರ್ದೇಶಕರು, ಜೆಡಿ ಶರಣಪ್ಪ, ಗಣಿ ಭೂ ಇಲಾಖೆ ಮಹಾವೀರ, ಪಿಂಚಣಿ ಇಲಾಖೆ ಹೊನ್ನೂರಪ್ಪ, ಅವಿನಾಶ ಹಾಗೂ ಗ್ರಾಮಸ್ಥರು, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎನ್‌. ಭರಮಣ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu

BJP: ರಾಜ್ಯಾಧ್ಯಕ್ಷನಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಿದ್ಧ: ಶ್ರೀರಾಮುಲು

HK-Patil

Hampi Tourism: ಪ್ರವಾಸೋದ್ಯಮ ಇಲಾಖೆ; 27 ಬೃಹತ್‌ ಯೋಜನೆಗಳಿಗೆ ಅಸ್ತು

1-mantra

Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.