BJP ಟಿಕೆಟ್ ವಂಚನೆ ಪ್ರಕರಣ: ಆರೋಪಿ ಸೆರೆ
Team Udayavani, Oct 28, 2023, 10:46 PM IST
ಕೊಟ್ಟೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಪಟ್ಟಣದ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಆರೋಪದಲ್ಲಿ ರೇವಣಸಿದ್ದಪ್ಪ ಎಂಬವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ 1.95 ಕೋ. ರೂ.ಗೂ ಹೆಚ್ಚು ಮೊತ್ತ ಪಡೆದು ವಂಚಿಸಿದ್ದ ಬಗ್ಗೆ ರೇವಣಸಿದ್ದಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು.
ತಾಲೂಕಿನ ಬೆನಕನಹಳ್ಳಿ ನಿವಾಸಿಯಾಗಿದ್ದ ಆರೋಪಿಯು ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಅವರನ್ನು ಬಂಧಿಸಲು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ನೇತೃತ್ವದಲ್ಲಿ ಕೂಡ್ಲಿಗಿ ಪೊಲೀಸ್ ಸರ್ಕಲ್ ಇನ್‌ಸ್ಪೆಕ್ಟರ್ ಸುರೇಶ ತಳವಾರ, ಸಬ್‌ಇನ್‌ಸ್ಪೆಕ್ಟರ್‌ಗಳಾದ ಪ್ರಕಾಶ (ಗುಡೇಕೊಟೆ), ಧನಂಜಯ (ಕೂಡ್ಲಿಗಿ), ಕೊಟ್ಟೂರು ಠಾಣೆ ಪೇದೆಗಳಾದ ಬಸವರಾಜ್, ವಿರುಪಾಕ್ಷಿ ಗಡ್ಡಿ, ವೀರೇಶ ಹಾಗೂ ಆರಾಧ್ಯ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಬೆಂಗಳೂರು ಬಳಿ ಆರೋಪಿ ರೇವಣಸಿದ್ದಪ್ಪ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡ, ಅವ ರನ್ನು ವಶಕ್ಕೆ ಪಡೆದು ಶುಕ್ರವಾರ ರಾತ್ರಿ ಕೊಟ್ಟೂರು ಠಾಣೆಗೆ ಕರೆತಂದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
ಹುಲಿಕೆರೆ ಭರ್ತಿ; ಒಂದೆಡೆ ಸಂತಸ, ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರು; ಸಂಕಷ್ಟಕ್ಕೀಡಾದ ಜನ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.