Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
ಹೇಳಿಕೆ ತಿರುಚಲಾಗಿದೆ ಎಂದ ಕಾಂಗ್ರೆಸ್ ಶಾಸಕ, ವಿವಾದದ ಬೆನ್ನಲ್ಲೇ ಸ್ಪಷ್ಟನೆ
Team Udayavani, Nov 27, 2024, 7:35 AM IST
ಹೊಸಪೇಟೆ: “ಬೇಕಾಗಿಲ್ಲದ’ ಗ್ಯಾರಂಟಿ ಯೋಜನೆಗಳನ್ನು ಕೈಬಿಡಬೇಕು ಎಂದು ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಆರ್. ಗವಿಯಪ್ಪ ಆಗ್ರಹಿಸಿದ್ದಾರೆ. ಈ ಹೇಳಿಕೆ ಭಾರೀ ಸದ್ದು ಮಾಡುತ್ತಿದ್ದಂತೆಯೇ ಗ್ಯಾರಂಟಿ ಬಗ್ಗೆ ಮಾತಾಡದಂತೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಗ್ಯಾರಂಟಿಗಳು ರದ್ದಾಗುವುದಿಲ್ಲ’ ಎಂದು ಗವಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಹೊಸಪೇಟೆಯಲ್ಲಿ ಮಾತನಾಡಿದ್ದ ಶಾಸಕ ಗವಿಯಪ್ಪ, ಗ್ಯಾರಂಟಿ ಯೋಜನೆಗಳ ಕಾರಣದಿಂದ ಈಗ ಬಡವರಿಗೆ ಮನೆಗಳನ್ನು ಕೊಡಲು ಕಷ್ಟವಾಗುತ್ತಿದೆ. ಹೀಗಾಗಿ ಶಕ್ತಿ ಸಹಿತ “ಬೇಕಾಗಿಲ್ಲದ’ ಎರಡ್ಮೂರು ಗ್ಯಾರಂಟಿಗಳನ್ನು ರದ್ದು ಮಾಡುವುದರಿಂದ ಅನುದಾನವನ್ನು ಸರಿದೂಗಿಸಿ, ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡಬಹುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು. ತೀರ್ಮಾನ ಅವರಿಗೆ ಬಿಟ್ಟದ್ದು ಎಂದಿದ್ದರು.
ಈ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿತ್ತು. ಇದು ಕಾಂಗ್ರೆಸ್ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಮಂಗಳವಾರ ಸ್ಪಷ್ಟನೆ ನೀಡಿರುವ ಶಾಸಕರು, “ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಗ್ಯಾರಂಟಿ ಯೋಜನೆಗಳು ರದ್ದಾಗುವುದಿಲ್ಲ’ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಳು ಬಡ-ಮಧ್ಯಮ ವರ್ಗದ ಜನರಿಗೆ ವರದಾನವಾಗಿವೆ. ಅಲ್ಲದೆ ಕಾಂಗ್ರೆಸ್ ಸರಕಾರದ ಹೆಮ್ಮೆಯ ಯೋಜನೆಗಳಾಗಿವೆ. ಈ ಗ್ಯಾರಂಟಿಗಳಿಂದಲೇ ರಾಜ್ಯದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ ಎಂದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಗವಿಯಪ್ಪ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ವಿಜಯನಗರ ಜಿಲ್ಲೆಗೆ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.