ಮೀಸಲಾತಿ ಹೆಚ್ಚಳಕ್ಕೆ ಆಗ್ರಹ
Team Udayavani, Apr 10, 2022, 5:11 PM IST
ಹೊಸಪೇಟೆ: ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಜನಸಂಖ್ಯೆ ಆಧಾರದ ಅನ್ವಯ ಮೀಸಲಾತಿ ಹೆಚ್ಚಿಸಬೇಕು. ನ್ಯಾ. ನಾಗಮೋಹನ ದಾಸ್ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ವತಿಯಿಂದ ಏ. 11ರಿಂದ 17ರವರೆಗೆ ತಹಶೀಲ್ದಾರ್ ಕಚೇರಿ ಎದರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಸಂಚಾಲಕರಾದ ಜಂಬಯ್ಯ ನಾಯಕ, ವೀರಸ್ವಾಮಿ, ಎಂ. ಜಂಬಯ್ಯ ನಾಯಕ, ದುರುಗಪ್ಪ ಪೂಜಾರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಗೆ ಆಗಮಿಸುವ ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಬೇಡಿಕೆ ಆಲಿಸಲು ಧರಣಿ ಸ್ಥಳಕ್ಕೆ ಆಗಮಿಸಿ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ಹೆಚ್ಚಳ ಮಾಡದಿದ್ದರೆ ಸರ್ಕಾರ ಇದರ ಪರಿಣಾಮ ಎದುರಿಸಲಿದೆ. ಸರ್ಕಾರ ವಾಲ್ಮೀಕಿ ಗುರುಪೀಠಕ್ಕೆ ನೀಡಿರುವ ಐದು ಕೋಟಿ ರೂ. ಅನುದಾನವನ್ನೂ ತಿರಸ್ಕರಿಸಲಾಗುವುದು. ಮೊದಲು ನಮಗೆ ಮೀಸಲಾತಿ ಹೆಚ್ಚಳ ಮಾಡಲಿ ಎಂದು ಒತ್ತಾಯಿಸಿದರು.
ಗೋಸಲ ಭರಮಪ್ಪ, ಗುಜ್ಜಲ ನಾಗರಾಜ, ವೀರಭದ್ರ ನಾಯಕ, ನಿಂಬಗಲ್ ರಾಮಕೃಷ್ಣ, ಶೇಷ, ಅಂಕಾಳಿ, ತಾಯಪ್ಪ ನಾಯಕ, ಪಿ.ವಿ. ವೆಂಕಟೇಶ, ಸಣ್ಣ ವೀರಪ್ಪ, ಕೆ. ಮಲ್ಲಪ್ಪ. ಗುಜ್ಜಲ ಚಂದ್ರಶೇಖರ ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.