![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 14, 2023, 7:27 PM IST
ಹೊಸಪೇಟೆ: ಮಕ್ಕಳು ಮಾತು ಕೇಳುತ್ತಿಲ್ಲ ಅಂತ ಮಗಳನ್ನು ಕೊಲೆ ಮಾಡಿ ತಾಯಿಯೂ ನೇಣು ಬಿಗಿದುಕೊಂಡು ಸಾವನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ಲೇಟ್ ಶಫಿಸಾಬ್ ಎಂಬುವರರ ಪತ್ನಿ ಬೇಗಂ (5೦) ಮಾತು ಕೇಳಲ್ಲಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರೂ ಮಕ್ಕಳ ತಲೆಗೆ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾಳೆ. ಮಗಳು ಶಮಾಬಾನು (18) ಸ್ಥಳದಲ್ಲಿ ಮೃತಪಟ್ಟರೆ, ಮಗ ಅಮಾನುಲ್ಲಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾನೆ. ತನ್ನ ಇಬ್ಬರೂ ಮಕ್ಕಳು ಮೃತಪಟ್ಟಿದ್ದಾರೆ ಎಂದು ಭಾವಿಸಿ ತಾನು ಕೂಡ ನೇಣಿಗೆ ಕೊರಳೊಡ್ಡಿ ಸಾವನಪ್ಪಿದ್ದಾಳೆ.
ಘಟನೆಯಲ್ಲಿ ಗಾಯಗೊಂಡ ಅಮಾನುಲ್ಲಾನನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತ ಬೇಗಂ ಅವರ ಗಂಡನ ತಮ್ಮ ಅಬ್ದುಲ್ ಸಾಬ್, ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಮುಂದುವರೆದಿದೆ.
ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಹೆಚ್ಚಿನ ಸಾಕ್ಷ್ಯವನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿಬಾಬು ತಿಳಿಸಿದ್ದಾರೆ.
ಗ್ರಾಮಕ್ಕೆ ಎಸ್ಪಿ ಭೇಟಿ:
ಘಟನಾ ಸ್ಥಳಕ್ಕೆ ಎಸ್ಪಿ ಹರಿಬಾಬು ಹಾಗೂ ಡಿವೈಎಸ್ಪಿ ವೆಂಕಟಪ್ಪ ನಾಯಕ, ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತನಿಖಾಧಿಕಾರಿಗಳಾದ ನಾಗರಾಜ ಎಂ ಕಮ್ಮಾರ, ಪಿ.ಎಸ್.ಐ ಶಂಭುಲಿಅಗ ಹಿರೇಮಠ ಇತರರು ಇದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.