ಸಿದ್ದು ಜತೆ ನಾನು ಈಗಲೂ ಚೆನ್ನಾಗಿದ್ದೇನೆ: ಸಚಿವ ಎಂ.ಟಿ.ಬಿ ನಾಗರಾಜ್
Team Udayavani, Oct 7, 2022, 9:15 PM IST
ಹೂವಿನಹಡಗಲಿ: ಸಿದ್ದರಾಮಯ್ಯ ಜತೆ ನಾನು ಈಗಲೂ ತುಂಬಾ ಚೆನ್ನಾಗಿದ್ದೇವೆ. ಅವರ ಬಗ್ಗೆ ನನಗೆ ಈಗಲೂ ಅಭಿಮಾನವಿದೆ ಎಂದು ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ ನಾಗರಾಜ್ ಹೇಳಿದರು.
ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಬಿಟ್ಟು ಬಂದಿದ್ದಕ್ಕೆ ನನಗೇನೂ ನೋವಿಲ್ಲ. ಕಾಂಗ್ರೆಸ್ನವರು ನನ್ನನ್ನು ಪುನಃ ಪಕ್ಷಕ್ಕೆ ಕರೆದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲೇ ಉಳಿಯುತ್ತೇನೆ ಎಂದರು.
ಪೇಸಿಎಂ ಬಗ್ಗೆ ವಿಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಯಾತ್ರೆಗಳು ಸಾಮಾನ್ಯ. ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯಲ್ಲೇನೂ ವಿಶೇಷ ಇಲ್ಲ. ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ. ಕೋವಿಡ್ ಸಂದರ್ಭದಲ್ಲಿ ಆಗಿರುವ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.