Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
Team Udayavani, Oct 24, 2024, 7:09 PM IST
ಹರಪನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಉರುಳಿ ಬಿದ್ದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, 6ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲೂಕಿನ ಸತ್ತೂರು ಗ್ರಾಮದ ಬಳಿ ಗುರುವಾರ ನಡೆದಿದೆ.
ಸುಮಾರು 45 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ದಾವವಣಗೆರೆಯಿಂದ ಹರಪನಹಳ್ಳಿ ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸತ್ತೂರು ಗ್ರಾಮದ ಬಳಿ ಕೆರೆ ಹತ್ತಿರ ಈ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಸತ್ತೂರು ಗ್ರಾಮದ ಹನುಮಕ್ಕ (51)ಎಂಬ ಮಹಿಳೆ ಮೃತಪಟ್ಟಿದ್ದು, ಸುಮಾರು 6ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ದಾವಣಗೆರೆ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಸ್ಥಳಕ್ಕೆ ಹರಪನಹಳ್ಳಿ ಡಿವೈಎಸ್‌ಪಿ ವೆಂಕಟಪ್ಪ ನಾಯಕ, ಸಿಪಿಐ ನಾಗರಾಜ ಎಂ.ಕಮ್ಮಾರ, ಅರಸಿಕೇರಿ ಪಿಎಸ್‌ಐ ರಂಗಯ್ಯ, ಹರಪನಹಳ್ಳಿ ಸಾರಿಗೆ ವ್ಯವಸ್ಥಾಪಕಿ ಮಂಜುಳಾ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ
Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!
Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ
Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!
Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ