Hagaribommanahalli: ಜೆಸ್ಕಾಂ ಇಲಾಖೆಯಿಂದ ನಿರ್ಲಕ್ಷ್ಯ, ಟಿಸಿಗಳ ಸುತ್ತ ಗಿಡಗಂಟೆಗಳು
ಬಾಗಿದ ಕಂಬಗಳು ಗ್ರಾಮಸ್ಥರಲ್ಲಿ ಆತಂಕ
Team Udayavani, Oct 13, 2024, 4:35 PM IST
ಹಗರಿಬೊಮ್ಮನಹಳ್ಳಿ : ತಾಲೂಕಿನ ಕೋಳಿ ತಾಂಡಾ (ಶ್ರೀರಾಮನಗರ )ಗ್ರಾಮದಲ್ಲಿ ವಿದ್ಯುತ್ ಕಂಬಗಳು ಬಾಗಿದ್ದು ಒಂದೆಡೆಯಾದರೆ ಇನ್ನು ಕೆಲ ಕಂಬಗಳಲ್ಲಿ ಕಬ್ಬಿಣದ ರಾಡುಗಳು ಕಾಣುತ್ತಿವೆ. ಜೊತೆಗೆ ಕಂಬಗಳ ಕೆಳಗಡೆ ಇರುವ ವಿದ್ಯುತ್ ತಂತಿರುವ ಪೆಟ್ಟಿಗೆಗಳು ಮುಚ್ಚಳಿಕೆ ಇಲ್ಲದಿರುವುದನ್ನು ಕಾಣಬಹುದಾಗಿದೆ.
ಜಯ ಕರ್ನಾಟಕ ಸಂಘಟನೆಯ ಗ್ರಾಮ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿ, ಜೆಸ್ಕಾಂ ಇಲಾಖೆಯ ಸೆಕ್ಷನ್ ಆಫೀಸರ್ ಗೆ ಸೇರಿದಂತೆ ಕಚೇರಿಯಲ್ಲಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರ ಸಮಸ್ಯೆಯನ್ನು ಬಗೆಹರಿಸಲು ತಿಳಿಸಿದರೆ ಇಲ್ಲಿನ ಸೆಕ್ಷನ್ ಆಫೀಸರ್ ಯಮುನಪ್ಪ ಇವರು ನಮ್ಮ ಬಳಿ ಮಾತನಾಡಿ ಜಸ್ಕಾಂ ಇಲಾಖೆ ಬಡತನದಲ್ಲಿದೆ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ದುರಸ್ಥಿ ಕಾರ್ಯ ಮಾಡಲಾಗುವುದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ.
ಸಾರ್ವಜನಿಕರ ಅಧಿಕಾರಿಗಳು ಇಂತಹ ಉತ್ತರದಿಂದ ಬೇಸರವಾಗಿದೆ ವಿದ್ಯುತ್ ಕಂಬಗಳಲ್ಲಿ 11 ಕೆ ವಿ ಇರುತ್ತದೆ ನಾಲ್ಕರಿಂದ ಐದು ವಿದ್ಯುತ್ ತಂತಿಗಳಿರುವ ಸುಮಾರು ಹನ್ನೊಂದು ಸಾವಿರ ವೋಲ್ಟೇಜ್ ವಿದ್ಯುತ್ ಹರಿಯುತ್ತಿರುವುದು ಕಾಣಬಹುದು, ಮುಂದಾಗುವ ದುಷ್ಪರಿಣಾಮಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ.ಮಳೆಗಾಲವಿದೆ ಅಲ್ಲಲ್ಲಿ ಕಂಬಗಳು ಬಾಗಿವೆ ಜೊತೆಗೆ ಟಿಸಿಗಳ ಸ್ವಚ್ಛತೆ ಇಲ್ಲದಿರುವುದು ಕಾಣಬಹುದಾಗಿದೆ. ವಿದ್ಯುತ್ ಪರಿವರ್ತಕಗಳಿಗೆ ಗಿಡಗಂಟೆಗಳು ಮುತ್ತಿಕ್ಕಿವೆ ನಿರ್ವಹಣೆಯನ್ನು ಸರಿಯಾಗಿ ಮಾಡಿ ಎಂದು ಮನವಿ ಮಾಡಿದ್ದೇವೆ ಕೂಡಲೇ ಅಧಿಕಾರಿಗಳು ಶೀಘ್ರ ದುರಸ್ಥಿ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.