ಜಾತ್ರೆ-ರಥೋತ್ಸವದಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ಬೇಡ
Team Udayavani, Mar 29, 2022, 5:44 PM IST
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ರಥೋತ್ಸವ ಇತರೆ ಯಾವುದೇ ಹಿಂದೂ ಕಾರ್ಯಕ್ರಮಗಳಲ್ಲಿ ಹಿಂದೂಗಳಲ್ಲದ ಅನ್ಯಧರ್ಮಿಯರಿಗೆ ವ್ಯಾಪಾರ, ವಹಿವಾಟು ಇತರೆ ಚಟುವಟಿಕೆ ನಡೆಸಲು ಅವಕಾಶ ನೀಡದಿರುವಂತೆ ಒತ್ತಾಯಿಸಿ ನಗರದ ಭಜರಂಗದಳದ ತಾಲೂಕು ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು.
ವಿಜಯನಗರ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ಹಿಂದೂ ದೇವರುಗಳ ಜಾತ್ರೆ, ರಥೋತ್ಸವ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಅಧಿನಿಯಮ ಪ್ರಕಾರ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂಗಳಲ್ಲದವರಿಗೆ ವ್ಯಾಪಾರ ಮಳಿಗೆ, ವಸತಿಗೃಹ, ವ್ಯಾಪಾರ, ವಹಿವಾಟು ಇತರೆ ಚಟುವಟಿಕೆ ನಡೆಸಲು ಅನುಮತಿ ನೀಡಬಾರದು. ಈ ಹಿಂದೆ ಹಿಂದೂಗಳಲ್ಲದ ಅನ್ಯಧರ್ಮಿಯರಿಗೆ ವ್ಯಾಪಾರ ವಹಿವಾಟು ನಡೆಸಲು ನೀಡಿರುವ ಅನುಮತಿ, ಗುತ್ತಿಗೆಯನ್ನು ಕೂಡಲೇ ರದ್ದುಗೊಳಿಸಬೇಕು. ಈ ಮೂಲಕ ಹಿಂದೂಗಳಿಗೆ ಪರವಾನಿಗೆ ನೀಡುವ ಮೂಲಕ ಸರ್ಕಾರದ ಆದೇಶ ಪಾಲಿಸಬೇಕು ಎಂದು ಮನವಿ ಮಾಡಿದರು.
ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಅನ್ಯಧರ್ಮಿಯರಿಗೆ ಹಿಂದೂ ದೇವಾಲಯಗಳ ಹತ್ತಿರ ವ್ಯಾಪಾರ-ವಹಿವಾಟು ನಡೆಸಲು ಹಿಂದೂವೇತರಿಗೆ ಯಾವುದೇ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ಮುಖಂಡರಾದ ನರಸಿಂಹ ಮೂರ್ತಿ, ತಿಪ್ಪೇಸ್ವಾಮಿ, ಗಂಗಾಧರ,ನಾಗರಾಜ, ಅಶ್ವಿನ್ ಕುಮಾರ್, ಮಂಚಯ್ಯ, ಸತೀಶ್, ಮಾಹಾಂತೇಶ್, ನಾಗಾರ್ಜುನ ಹಾಗೂ ಪ್ರಸನ್ನ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.