Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!
ಡಿಸಿನಾ ನೀನು..ನೀನ್ಯಾಕೆ ಇಲ್ಲಿ ಕೂತಿದ್ದೀಯಾ ಎಂದು ಪ್ರಶ್ನೆ, ಹೀರೋ ಆಗಲು ಹೋದ ಭ್ರಷ್ಟ ಸಿಎಂ: ಬಿಜೆಪಿ ಟೀಕೆ- ವಿಡಿಯೋ ನೋಡಿ
Team Udayavani, Jan 13, 2025, 5:46 PM IST
ಹೊಸಪೇಟೆ: ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವೇದಿಕೆಯಲ್ಲಿ ಭಾಷಣ ಆರಂಭಿಸುವ ಮೊದಲು ಗಣ್ಯರ ಪರಿಚಯಿಸುವ ವೇಳೆ ಮೊದಲ ಸಾಲಿನಲ್ಲಿ ಕುಳಿತಿದ್ದ ಜಿಲ್ಲಾಧಿಕಾರಿಯವರ (ಐಎಎಸ್ ಅಧಿಕಾರಿ) “ನೀನ್ಯಾಕೆ ಇಲ್ಲಿ ಕೂತಿದ್ದೀಯಾ” ಎಂದು ಸಿಎಂ ಸಿದ್ದರಾಮಯ್ಯ ಗದರಿಸಿ ಎಬ್ಬಿಸಿ ಕಳುಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಾಜಿ ಶಾಸಕ ಸಿರಾಜ್ ಶೇಖ್ ಅವರ ಪುತ್ರನ ಆರತಕ್ಷತೆ ಸಮಾರಂಭದಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ನವ ವಿವಾಹಿತರಿಗೆ ಶುಭ ಕೋರಿದರು. ಸಮಾರಂಭದ ವೇದಿಕೆಯಲ್ಲಿ ಸಿದ್ದರಾಮಯ್ಯ ಭಾಷಣದ ವೇಳೆ ಮೊದಲ ಸಾಲಿನ ಕುರ್ಚಿಯಲ್ಲಿ ಕುಳಿತಿದ್ದ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ರನ್ನು ಸಿದ್ದರಾಮಯ್ಯ ಯಾರು ನೀವು…ಎಂದು ಕೇಳಿ ಡಿಸಿನಾ ನೀನು ಡಿಸಿ.. ನೀನ್ಯಾಕೆ ಇಲ್ಲಿ ಕುಳಿತಿದ್ದೀಯಾ.. ಸ್ವಾಮೀಜಿ ಪಕ್ಕದಲ್ಲೇ ಕುಳಿತಿದ್ದೀಯಾ.. ಅಲ್ಲಿ ಹೋಗು ಎಂದು ಗದರಿಸಿ ಕಳುಹಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಎರಡೇ ಮಕ್ಕಳು ಸಾಕು ಎಂದ ಸಿಎಂ
ಇದೇ ಕಾರ್ಯಕ್ರಮದಲ್ಲಿ ಮಾತನಾಡಿ ಜನಸಂಖ್ಯೆಯಲ್ಲಿ ಭಾರತ ಚೀನಾ ದೇಶವನ್ನು ಹಿಂದಿಕ್ಕಿದ್ದು, ದೇಶದ ಜನಸಂಖ್ಯೆ 140 ಕೋಟಿ ತಲುಪಿದೆ. ಹೀಗಾಗಿ ಆರತಿಗೊಂದು, ಕೀರ್ತಿಗೊಂದು ಎರಡು ಮಕ್ಕಳಿಗೆ ಜನ್ಮ ನೀಡಿ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಲ ದಿನಗಳ ಹಿಂದೆ ಸ್ವಾಮೀಜಿಯೊಬ್ಬರು ಹೆಚ್ಚು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕೆಂದು ಸಲಹೆ ನೀಡಿದ್ದಾರೆ. ಈಗಾಗಲೇ ದೇಶದ ಜನಸಂಖ್ಯೆ ನಾಗಾಲೋಟದಲ್ಲಿ ಏರಿಕೆ ಆಗುತ್ತಿದೆ. ಸುಖ ಸಂಸಾರಕ್ಕೆ ಮಕ್ಕಳು ಇಬ್ಬರೇ ಇದ್ದರೆ ಸಾಕು. ಇದನ್ನೇ ಅನುಸರಿಸಿ ಎಂದು ನವ ವಧು-ವರರಿಗೆ ಸಲಹೆ ನೀಡಿದರು.
ಜನರ ಮುಂದೆ ಹೀರೋ ಆಗಲು ಹೋದ ಭ್ರಷ್ಟ ಸಿಎಂ: ವಿಪಕ್ಷ ಬಿಜೆಪಿ ಟೀಕೆ
ಜಿಲ್ಲಾಧಿಕಾರಿಯವರ ವೇದಿಕೆಯಿಂದ ಎಬ್ಬಿಸಿ ಕಳುಹಿಸಿದ ಘಟನೆಗೆ ಸಂಬಂಧಿಸಿ ವಿಪಕ್ಷ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಟುವಾಗಿ ಟೀಕಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ “ಅಧಿಕಾರದ ಅಮಲು ನೆತ್ತಿಗೆ ಏರಿದಾಗ ಈ ರೀತಿಯ ದುರಹಂಕಾರದ ಮಾತುಗಳು ಬರುತ್ತೆ. ವೇದಿಕೆ ಮೇಲೆ ಜನರ ಮುಂದೆ ಹೀರೋ ಆಗಲು ಹೋದ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗೆ ಏಕವಚನದಲ್ಲಿ ಕರೆದು ದುರಹಂಕಾರ ತೋರಿಸಿದ್ದಾರೆ.
ಹಣ ಹಂಚಿ ರಾಜಕೀಯ ಪ್ರಭಾವ ಬಳಸಿ ಚುನಾವಣೆ ಗೆಲ್ಲುವ ಸಿದ್ದರಾಮಯ್ಯನವರೇ, ಅವರು ನಿಮ್ಮಂತೆ ದಲಿತರನ್ನು ತುಳಿದು ದಲಿತರ ಅಧಿಕಾರ ಆಸ್ತಿ ಕಿತ್ತುಕೊಂಡು ಅಧಿಕಾರಿ ಆಗಿಲ್ಲ. ಕಷ್ಟಪಟ್ಟು ಹಗಲುರಾತ್ರಿ ಎನ್ನದೇ ಓದಿ ದೇಶದ ಅತ್ಯುನ್ನತ ಅಧಿಕಾರವನ್ನು ಗಿಟ್ಟಿಸಿಕೊಂಡಿದ್ದಾರೆ. ಗೌರವ ಕೊಟ್ಟು ಗೌರವ ಪಡೆಯುವ ವಿವೇಕ ರಾಜ್ಯದ ಮುಖ್ಯಮಂತ್ರಿಗೆ ಇಲ್ಲ ಎಂದರೆ ಹೇಗೆ? ಎಂದು ಬಿಜೆಪಿ ಪ್ರಶ್ನಿಸಿದೆ.
ಅಧಿಕಾರದ ಅಮಲು ನೆತ್ತಿಗೆ ಏರಿದಾಗ ಈ ರೀತಿಯ ದುರಹಂಕಾರದ ಮಾತುಗಳು ಬರುತ್ತೆ.
ವೇದಿಕೆ ಮೇಲೆ ಜನರ ಮುಂದೆ ಹೀರೋ ಆಗಲು ಹೋದ ಭ್ರಷ್ಟ ಸಿಎಂ @siddaramaiah ಅವರು ಜಿಲ್ಲಾಧಿಕಾರಿಗೆ ಏಕವಚನದಲ್ಲಿ ಕರೆದು ದುರಹಂಕಾರ ತೋರಿಸಿದ್ದಾರೆ.
ಹಣ ಹಂಚಿ ರಾಜಕೀಯ ಪ್ರಭಾವ ಬಳಸಿ ಚುನಾವಣೆ ಗೆಲ್ಲುವ ಸಿದ್ದರಾಮಯ್ಯನವರೇ, ಅವರು ನಿಮ್ಮಂತೆ ದಲಿತರನ್ನು ತುಳಿದು… pic.twitter.com/1a5MUHFwN7
— BJP Karnataka (@BJP4Karnataka) January 13, 2025
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
MUST WATCH
ಹೊಸ ಸೇರ್ಪಡೆ
Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ
Jammu and Kashmir; ಪ್ರಧಾನಿ ಮೋದಿ ಹೊಗಳಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
Shirva: ರಸ್ತೆ ಬದಿ ಕಸ ಎಸೆದವನಿಂದಲೇ ಕಸ ಹೆಕ್ಕಿಸಿದ ಶಿರ್ವ ಗ್ರಾ.ಪಂ. ಸದಸ್ಯೆ
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Udupi: ಮಾದಕ ವಸ್ತು ಮಾರಾಟಕ್ಕೆ ಯತ್ನ… ನಾಲ್ವರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.