![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 12, 2022, 2:30 PM IST
ಹೊಸಪೇಟೆ: ಪಂಚಮಸಾಲಿಗೆ 2ಎ ಮೀಸಲಾತಿಗಾಗಿ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಕ್ಜೋತ್ತಾಯ ಸಮಾವೇಶ ನಡೆಯುತ್ತಿದೆ ಎಂದು ಹರಹರ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ವಚನಾನಂದ ಶ್ರೀಗಳು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನಜಾಗೃತಿ ಸಮಾವೇಶ ಮಾಡುತ್ತಿದ್ದೇವೆ. ಇದರ ಭಾಗವಾಗಿ ವಿಜಯನಗರದಲ್ಲಿ ಪಂಚಮಶಾಲಿ ಸಮಾವೇಶ ಮಾಡುತ್ತಿದ್ದು, ಈ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದರು.
ಎರಡು ವರ್ಷದ ಹಿಂದೆಯೇ ಕುಲಶಾಸ್ತ್ರ ಅಧ್ಯಯನ ವರದಿ ಬಂದಿರುವ ಪರಿಣಾಮ SC, ST ಸಮುದಾಯದಕ್ಕೆ ಮೀಸಲಾತಿ ಭಾಗ್ಯ ಸಿಕ್ಕಿದೆ. ಇದೀಗ ವೀರಶೈವ ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿಗಾಗಿ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ. ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ನೀಡಬೇಕಿದೆ. ವರದಿ ಸರ್ಕಾರದ ಕೈ ಸೇರಿದ ಬಳಿಕ ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಭರವಸೆ ನೀಡಿದ್ದಾರೆ.
ಸರ್ಕಾರದಲ್ಲಿ ನಮ್ಮವರೇ, ಸಿಎಂ, ಸಚಿವರು ಇದ್ದಾರೆ. ಅವರ ಮೇಲೆ ನಮಗೆ ನಂಬಿಕೆ ಇದೆ. ಶೀಘ್ರದಲ್ಲೇ 2ಎ ಮೀಸಲಾತಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
You seem to have an Ad Blocker on.
To continue reading, please turn it off or whitelist Udayavani.