ಚುನಾವಣಾ ಕರ್ತವ್ಯಕ್ಕೆ ಸೂಕ್ತ ತರಬೇತಿ ಅವಶ್ಯ
ಮತಗಟ್ಟೆ ಅಧಿಕಾರಿಗಳು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ: ಕನಗವಲಿ
Team Udayavani, Apr 8, 2019, 3:41 PM IST
ವಿಜಯಪುರ: ಚುನಾವಣಾ ತರಬೇತಿ ಕೇಂದ್ರಕ್ಕೆ ಚುನಾವಣಾಧಿಕಾರಿ ಎಂ.ಕನಗವಲ್ಲಿ ಹಾಗೂ ಚುನಾವಣಾ ಸಾಮಾನ್ಯ ವೀಕ್ಷಕ ಅಶೋಕ ಶಹಾ ಭೇಟಿ ನೀಡಿ ಪರಿಶೀಲಿಸಿದರು.
ವಿಜಯಪುರ: ಲೋಕಸಭಾ ಚುನಾವಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಚುನಾವಣಾ ಸಾಮಾನ್ಯ ವೀಕ್ಷಕ ಅಶೋಕ ಶಹಾ ಅವರು ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಏರ್ಪಡಿಸಿರುವ ತರಬೇತಿ ಸ್ಥಳಕ್ಕೆ ಭೇಡಿ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಸಾಮಾನ್ಯ ವೀಕ್ಷಕರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಹಾಗೂ ಇತರೆ ಚುನಾವಣಾ ಕಾರ್ಯಚಟುವಟಿಕೆಗಳ ಬಗ್ಗೆ ವಿಚಾರಣೆ ನಡೆಸಿದರು.
ಬಬಲೇಶ್ವರ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಏರ್ಪಡಿಸಲಾದ ತರಬೇತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆಯು ವ್ಯವಸ್ಥಿತ ರೀತಿಯಲ್ಲಿ ನಡೆಸುವ ದಿಸೆಯಲ್ಲಿ ಸೈದ್ಧಾಂತಿಕ ಹಾಗೂ ಇವಿಎಂಗಳ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದರ ಸದುಪಯೋಗ ಪಡೆದು ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಲೋಕಸಭಾ ಚುನಾವಣೆಯು ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಲೋಪವಾಗದಂತೆ ನಿಗಾ ವಹಿಸಲು ತಿಳಿಸಿದ ಅವರು, ಇದೇ ಪ್ರಥಮ ಬಾರಿಗೆ ಸೈದ್ಧಾಂತಿಕ ಮತ್ತು ಇವಿಎಂಗಳ ಪ್ರಾತ್ಯಕ್ಷಿಕೆ ರೂಪದಲ್ಲಿ ತರಬೇತಿ ನೀಡಲಾಗುತ್ತಿದ್ದು, ಎಲ್ಲರೂ ಜಾಗೃತಿಯಿಂದ ಮಾಹಿತಿ ಪಡೆದು, ಮುಂಬರುವ ಸುಗಮ ಚುನಾವಣೆ ನಡೆಯಲು ನೆರವಾಗುವಂತೆ ಸಲಹೆ ನೀಡಿದರು.
ಲೋಕಸಭಾ ಚುನಾವಣೆಗೆ ಒಂದು ದಿನ ಮುಂಚಿತ ಹಾಗೂ ಚುನಾವಣೆ ಸಂದರ್ಭದಲ್ಲಿ ಪ್ರತಿ ಮತಗಟ್ಟೆ ಹಾಗೂ ಸಹಾಯಕ ಮತಗಟ್ಟೆ ಅಧಿ ಕಾರಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಯಾವುದೇ ರೀತಿಯ ತೊಂದರೆಗಳಿದ್ದಲ್ಲಿ ತಕ್ಷಣ ಗಮನಕ್ಕೆ ತರುವಂತೆ ತಿಳಿಸಿದ ಅವರು, ಒಟ್ಟಾರೆ ಚುನಾವಣೆಯು ಪಾರದರ್ಶಕ ರೀತಿಯಲ್ಲಿ ನಡೆಯುವಲ್ಲಿ ಮತಗಟ್ಟೆ ಮಟ್ಟದ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ಜವಾಬ್ದಾರಿಯು ಅತ್ಯಂತ ಪ್ರಮುಖವಾಗಿದ್ದು, ಇಲ್ಲಿ ನೀಡಲಾಗುತ್ತಿರುವ ತರಬೇತಿಯ ಸದುಪಯೋಗ ಪಡೆದು ವ್ಯವಸ್ಥಿತ ರೀತಿಯ ಚುನಾವಣೆಗೆ ಎಲ್ಲರೂ ಸಹಕರಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಬಬಲೇಶ್ವರ ಮತಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಡಾ.ಔದ್ರಾಮ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.