ರಫ್ತು ಉದ್ಯೋಗಕ್ಕಿದೆ ವಿಫುಲ ಅವಕಾಶ
ರಫ್ತು ಮಾಡುವ ಉದ್ಯಮಿಗಳಿಗಿದೆ ಸರ್ಕಾರದಿಂದ ವಿವಿಧ ಸೌಲಭ್ಯ: ಸಿದ್ದಣ್ಣ
Team Udayavani, Sep 15, 2019, 3:13 PM IST
ವಿಜಯಪುರ: ನಗರದಲ್ಲಿ ಹಮ್ಮಿಕೊಂಡಿದ್ದ ರಫ್ತ್ತು ಜಾಗೃತಿ ಕಾರ್ಯಕ್ರಮಕ್ಕೆ ಎಪಿಎಂಸಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಚಾಲನೆ ನೀಡಿದರು.
ವಿಜಯಪುರ: ಈ ಭಾಗದಲ್ಲಿ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳನ್ನು ಸಂಸ್ಕರಿಸಿ ಆಕರ್ಷಕ ಪ್ಯಾಕೆಜಿನೊಂದಿಗೆ ರಫ್ತು ಮಾಡಲು ವಿಫುಲ ಅವಕಾಶಗಳಿದ್ದು ಇದರ ಸದುಪಯೋಗ ಪಡೆಯುವಂತೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಸಲಹೆ ನೀಡಿದರು.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಡಿಜಿಎಫ್‌ಟಿ ಬೆಳಗಾವಿ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಫ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ಬೆಳೆಸಲಾಗುತ್ತಿದ್ದು ಈ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಲು ರಫ್ತು ಬಹಳ ಅವಶ್ಯಕವಾಗಿದ್ದು, ರಫ್ತು ವ್ಯವಹಾರದ ಸದುಪಯೋಗ ಪಡೆಯುವಂತೆ ರೈತರು ಹಾಗೂ ಯುವ ಉದ್ಯಮಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ಸಿದ್ದಣ್ಣ ಮಾತನಾಡಿ, ರಫ್ತು ಮಾಡುವ ಉದ್ಯಮಿಗಳಿಗೆ ಸರ್ಕಾರದಿಂದ ಅನೇಕ ಉತ್ತೇಜನಕಾರಿ ಸೌಲಭ್ಯಗಳಿವೆ. ಸರಕಾರದ ಸೌಲಭ್ಯಗಳ ಸದ್ಬಳಕೆ ಮೂಲಕ ಜಿಲ್ಲೆ ಹಾಗೂ ರಾಜ್ಯದ ಉದ್ಯಮ ಅಭಿವೃದ್ಧಿಗೆ ಕೊಡುಗೆ ನೀಡಿ ಎಂದರು.
ಜಿಲ್ಲಾ ಕೈಗಾರಿಕೆ ಮಾಲೀಕರ ಸಂಘದ ಅಧ್ಯಕ್ಷ ಎಸ್.ವಿ. ಪಾಟೀಲ ಮಾತನಾಡಿ, ಜಗತ್ತಿನಲ್ಲಿ ವೈವಿದ್ಯಮಯ ಕೃಷಿ ಉತ್ಪನ್ನಗಳಿಗೆ ಭಾರತ ಹೆಸರು ಪಡೆದಿದೆ. ಸಂಶೋಧನೆ, ತಾಂತ್ರಿಕ ಅಭಿವೃದ್ಧಿ ಹಾಗೂ ವಿದೇಶಗಳಿಗೆ ಬೇಕಾಗಿರುವಂತಹ ಪ್ಯಾಕೇಜಿಂಗ್ ಸೌಲಭ್ಯಗಳೊಂದಿಗೆ ರಫ್ತು ಮಾಡಲು ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಡಿಜಿಎಫ್‌ಟಿ ಬೆಳಗಾವಿಯ ವಿದೇಶ ವ್ಯಾಪಾರ ಅಭಿವೃದ್ಧಿ ಅಧಿಕಾರಿ ಪಿ.ಎಸ್.ಬಿ. ಶಾಸ್ತ್ರಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಕಲ್ಪಿಸಲು ಜಾರಿಗೆ ತಂದ ವಿದೇಶಿ ರಫ್ತು ನೀತಿ 2015-20 ತುಂಬಾ ಅನುಕೂಲಕರವಾಗಿದ್ದು, ವಿದೇಶಿ ವ್ಯಾಪಾರ ನೀತಿ, ರಫ್ತು ಮಾಡಲು ಬೇಕಾಗಿರುವ ಪರವಾನಿಗೆಗಳು, ಬೇರೆ ಬೇರೆ ದೇಶಗಳಿಗಿರುವ ಆಮದು ನೀತಿ ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ವಾಣಿಜ್ಯ, ಉದ್ಯಮ ಮತ್ತು ಕೃಷಿ ಸಂಸ್ಥೆ ಅಧ್ಯಕ್ಷ ಡಿ.ಎಸ್. ಗುಡ್ಡೋಡಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಕೈಗಾರಿಕೋದ್ಯಮಿಗಳು, ವರ್ತಕರು ಹಾಗೂ ಪ್ರಗತಿಪರ ರೈತರು ಭಾಗವಹಿಸಿದ್ದರು.
ಧಾರವಾಡ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಹಾಯಕ ನಿರ್ದೇಶಕ ಪದ್ಮಕಾಂತ ಸ್ವಾಗತಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಅರ್ಜುನ ಭಜಂತ್ರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.