ವಿಜಯಪುರ ನಗರ ಶೀಘ್ರವೇ ಕೊಳಚೆ-ಗುಡಿಸಲು ಮುಕ್ತ

ವಿವಿಧ ವಸತಿ ಯೋಜನೆಗಳಲ್ಲಿ 10 ಸಾವಿರ ಮನೆಗಳ ನಿರ್ಮಾಣ

Team Udayavani, Jun 9, 2019, 5:07 PM IST

Udayavani Kannada Newspaper

ವಿಜಯಪುರ: ವಿಜಯಪುರ ನಗರವನ್ನು ಕೊಳಚೆ ಪ್ರದೇಶ ಹಾಗೂ ಗುಡಿಸಲು ಮುಕ್ತ ನಗರವಾಗಿ ಮಾದರಿಯಾಗಿ ರೂಪಿಸಲು ವಸತಿ ರಹಿತರಿಗೆ ಸೂರು ಕಲ್ಪಿಸಲು 10 ಸಾವಿರಕ್ಕೂ ಹೆಚ್ಚು ಆಶ್ರಯ ಮನೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಇದು ಜಿಲ್ಲೆಯಲ್ಲೇ ದೊಡ್ಡ ಮಟದrದ ಕ್ರಾಂತಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಯೋಜನೆ ಬಡ ಫಲಾನುಭವಿಗಳಿಗೆ ಮಧ್ಯವರ್ತಿಗಳ ನೆರವಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇಂದಿರಾ ಆವಾಸ್‌ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಲ್ಲಿ 10 ಸಾವಿರ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 3,750 ಮನೆಗಳನ್ನು ಜಿ-ಪ್ಲಸ್‌ ಮಾದರಿಯಲ್ಲಿ ನಿರ್ಮಿಸುವ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಸೂರು ರಹಿತರಿಗೆ ಮನೆ ಕಲ್ಪಿಸಲು ಯೋಜಿಸಲಾಗಿದೆ ಎಂದರು.

ನ‌ಗರದ ಅಥಣಿ ರಸ್ತೆಯಲ್ಲಿ 30 ಎಕರೆ ಜಮೀನಿನಲ್ಲಿ ಈ ಆಶ್ರಯ ಮನೆ ನಿರ್ಮಿಸಲಾಗುತ್ತಿದೆ. ಮನೆ ಪಡೆಯಲು ಫ‌ಲಾನುಭವಿಗಳು ತಮ್ಮ ಪಾಲಿನ ಹಣ ಭರಿಸಬೇಕಿದೆ. ಆದರೆ ಬಡ ಫಲಾನುಭವಿಗಳಿಗೆ ತಕ್ಷಣ ಇದು ಸಾಧ್ಯವಾಗದ ಕಾರಣ ಇವರ ಅನುಕೂಲಕ್ಕೆ ನಮ್ಮ ಸಿದ್ಧಸಿರಿ ಸೌಹಾರ್ದದಲ್ಲಿ ವಿಶೇಷ ಸಾಲ ಸೌಲಭ್ಯದ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಭೂತನಾಳ ಪ್ರದೇಶದಲ್ಲಿ 1,850 ಮನೆ ನಿರ್ಮಿಸಲಾಗುತ್ತಿದೆ. ನಗರದಲ್ಲಿ ಇನ್ನೂ 13 ಕೊಳಚೆ ಪ್ರದೇಶಗಳನ್ನು ಗುರುತಿಸಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಇದಲ್ಲದೇ ಹೆಚ್ಚುವರಿಯಾಗಿ ಕೊಳಚೆ ಮಂಡಳಿ ವತಿಯಿಂದ ಇನ್ನೂ ಹೆಚ್ಚಿನ ಮನೆ ನಿರ್ಮಿಸಲು ಪ್ರಯತ್ನ ನಡೆದಿದೆ ಎಂದರು.

ನಗರದ ನವಭಾಗ ಪ್ರದೇಶದಲ್ಲಿರುವ ಸರ್ಕಾರಿ ಪದವಿ ಕಾಲೇಜು ಯುವತಿಯರ ಓದಿಗೆ ಸುರಕ್ಷಿತವಲ್ಲ. ಹೀಗಾಗಿ ನಗರದ ಹೃದಯ ಭಾಗದಲ್ಲಿ 5 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಯೋಜಿಸಲಾಗುತ್ತಿದೆ. ಸದ್ಯ ನವಬಾಗ ಪ್ರದೇಶದಲ್ಲಿರುವ ಕಾಲೇಜು ಕಟ್ಟಡವನ್ನು ಕೆಡವಿ ಸದರಿ ಪ್ರದೇಶದಲ್ಲಿ ಕಿರು ಬಡಾವಣೆ ನಿರ್ಮಿಸಿ ಈ ಭಾಗದಲ್ಲೇ ಇರುವ ಮನೆ ಇಲ್ಲದವರಿಗೆ ಮನೆ ಹಂಚಿಕೆ ಮಾಡಲಾಗುತ್ತದೆ.

ಇದಲ್ಲದೇ ವಿಜಯಪುರ ನಗರವನ್ನು ಸಮಗ್ರ ಅಭಿವೃದ್ಧಿ ಮೂಲಕ ಮಾದರಿ ನಗರವಾಗಿ ಮಾಡಲು ಯೋಜಿಸುತ್ತಿದ್ದೇನೆ. ಆದರೆ ಮಹಾನಗರ ಪಾಲಿಕೆ ಕೆಲ ಸದಸ್ಯರು ಅಭಿವೃದ್ಧಿ ಸಹಿಸದೇ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮತ್ತೆ ಕೆಲವರು ರಸ್ತೆ ಆಗಲೀಕರಣಕ್ಕೆ ವಿರೋಧಿಸುತ್ತಿದ್ದಾರೆ. ಇದೆಲ್ಲಕ್ಕೂ ಮಿಗಿಲಾಗಿ ನಗರದಲ್ಲಿ ಪಾಲಿಕೆ ಸ್ಥಳದಲ್ಲಿ ಪಾಲಿಕೆ ಸದಸ್ಯರೇ ಅಕ್ರಮವಾಗಿ ಕಟ್ಟಡ ನಿರ್ಮಿಸಿ ನಿಯಮ ಬಾಹೀರವಾಗಿ ಬಾಡಿಗೆ ಹಣ ಪಡೆಯುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಿದ್ದು ಅಕ್ರಮ ಕಟ್ಟಡದಿಂದ ಪಡೆದಿರುವ ಬಾಡಿಗೆ ಹಣ ಮರುಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾಗಿ ಹೇಳಿದರು.

ನಗರದ ಸರ್ಕಾರಿ ಆಸ್ಪತ್ರೆಯ 20 ಎಕರೆ ಜಾಗವನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸುವ ಹುನ್ನಾರ ನಡೆಯುತ್ತಿದೆ. ಜಿಲ್ಲೆಯವರೇ ಆಗಿರುವ ಆರೋಗ್ಯ ಸಚಿವ ಶಿವಾನಂದ ಪಾಟೀಲ ಈ ವಿಷಯದಲ್ಲಿ ಗಮನ ಹರಿಸಿ ಸರ್ಕಾರಿ ತಮ್ಮ ಇಲಾಖೆ ಆಸ್ತಿಯನ್ನು ರಕ್ಷಿಸಿಕೊಳ್ಳಲು ಮುಂದಾಗಲಿ ಎಂದು ಆಗ್ರಹಿಸಿದರು. ಮೇಯರ್‌ ಶ್ರೀದೇವಿ ಲೋಗಾವಿ, ಪಾಲಿಕೆ ಸದಸ್ಯರಾದ ಉಮೇಶ ವಂದಾಲ, ರಾಜೇಶ ದೇವಗಿರಿ, ಪರಶುರಾಮ ರಜಪೂತ, ರಾಹುಲ್ ಜಾಧವ, ಎಂ.ಎಸ್‌. ಕರಡಿ, ಮುಖಂಡರಾದ ಶಿವು ಭುಯ್ನಾರ ಇದ್ದರು.

ಈಜುಕೊಳ ಕನಸು ನನಸು
ವಿಜಯಪುರ: ನಗರದ ಐತಿಹಾಸಿಕ ಗಗನ್‌ ಮಹಲ್ ಉದ್ಯಾನವನದಲ್ಲಿ ಮೈಸೂರಿನ ಬೃಂದಾವನ ಉದ್ಯಾನವನಲ್ಲಿ ವರ್ಣರಂಜಿತ ಕಾರಂಜಿ ಹಾಗೂ ಪಕ್ಕದಲ್ಲಿರುವ ಕಂದಕದ ನೀರು ಮಲೀನಗೊಂಡು ದುರ್ವಾಸನೆ ಹರಡಿಕೊಂಡಿದೆ. ಹೀಗಾಗಿ ಕಂದಕವನ್ನು ಸ್ವಚ್ಛಗೊಳಿಸಿ ಬೋಟಿಂಗ್‌ ವ್ಯವಸ್ಥೆಗೆ ಅನುಮತಿಸಲು ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೇ ದಶಕದ ಹಿಂದೆ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ನಗರದಲ್ಲಿ ಈಜುಗೊಳ ನಿರ್ಮಿಸುವ ಯೋಜನೆ ಇದೀಗ ನನಸಾಗುತ್ತಿದೆ. ಕನಕದಾಸ ಬಡಾವಣೆಯಲ್ಲಿ ಇದಕ್ಕಾಗಿ ಮೀಸಲಿದ್ದ ನಿವೇಶನವನ್ನು ಕಬಳಿಸುವ ಹುನ್ನಾರದ ಕುರಿತು ನಾನು ಮೇಲ್ಮನೆ ಸದಸ್ಯನಾಗಿದ್ದ ಸಂದರ್ಭದಲ್ಲಿ ಪ್ರತಿರೋಧ ವ್ಯಕ್ತಪಡಿಸಿದ್ದೆ. ಇದೀಗ 5 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಗೊಳ ನಿರ್ಮಿಸುವ ಕೆಲಸಕ್ಕೂ ಚಾಲನೆ ದೊರೆಯಲಿದೆ ಎಂದು ಯತ್ನಾಳ ಹೇಳಿದರು.

ಕೇಂದ್ರದ ಮೋದಿ ಸರ್ಕಾರದ ಸಂಪುಟದಲ್ಲಿ ಲಿಂಗಾಯತ ಸಮುದಾಯದ ಸಂಸದರಿಗೆ ಆವಕಾಶ ಸಿಕ್ಕಿಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಧ್ವನಿ ಎತ್ತಿರುವುದು ಸರಿಯಾಗಿದೆ. ಲಿಂಗಾಯತರು ಮಾತ್ರವಲ್ಲ ಮೋದಿ ಸರ್ಕಾರದಲ್ಲಿ ದಲಿತರು ಹಾಗೂ ಇತರೆ ಸಮುದಾಯಗಳಿಗೂ ಹೆಚ್ಚಿನ ಆದ್ಯತೆ ದೊರೆಯಬೇಕು.
ಬಸನಗೌಡ ಪಾಟೀಲ ಯತ್ನಾಳ,
ವಿಜಯಪುರ ಶಾಸಕ

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.