ರಸ್ತೆ ಸುರಕ್ಷತೆಗೆ ಯೋಜನೆ ರೂಪಿಸಿ
ಭವಿಷ್ಯದಲ್ಲಿ ಅಪಘಾತ ತಗ್ಗಿಸುವ ಗುರಿ ಹಾಕಿಕೊಳ್ಳಿ•ಅಗತ್ಯವುಳ್ಳ ಕ್ರಿಯಾಯೋಜನೆಗೆ ಸೂಚನೆ
Team Udayavani, Sep 20, 2019, 4:22 PM IST
ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು
ವಿಜಯಪುರ: ಜಿಲ್ಲಾಮಟ್ಟದ ರಸ್ತೆ ಸುರಕ್ಷತೆಯ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಮತ್ತು ಅದರಿಂದ ಉಂಟಾಗುವ ಪ್ರಾಣಹಾನಿ ಹಾಗೂ ಗಾಯಾಳುಗಳ ಪ್ರಮಾಣ ತಗ್ಗಿಸುವ ಅಗತ್ಯವಿದೆ. ಇದಕ್ಕಾಗಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವ್ಯವಸ್ಥಿತವಾದ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುವ, ರಸ್ತೆ ಸುರಕ್ಷತಾ ಗುರುತುಗಳಿಲ್ಲದ ಹಾಗೂ ಅವೈಜ್ಞಾನಿಕ ರೀತಿಯಲ್ಲಿ ಗುರುತಿಸುವ ಜೊತೆಗೆ ಮುಂಬರುವ ದಿನಗಳಲ್ಲಿ ಅಪಘಾತ ತಗ್ಗಿಸುವ ಗುರಿ ಹಾಕಿಕೊಳ್ಳಬೇಕು. ಇದಕ್ಕಾಗಿ ಪೊಲೀಸ್ ಇಲಾಖೆ ಮತ್ತು ವಿವಿಧ ಆಸ್ಪತ್ರೆಗಳ ಅಂಕಿ-ಅಂಶಗಳನ್ನು ಸಂಗ್ರಹಿಸಿ, ಇದರ ಆಧಾರದಲ್ಲಿ ಅವಶ್ಯಕ ವಿಷಯಗಳನ್ನು ಒಳಗೊಂಡ ಕ್ರಿಯಾ ಯೋಜನೆ ರೂಪಿಸುವಂತೆ ಹೇಳಿದರು.
ಈಗಾಗಲೇ ರಸ್ತೆ ಸುರಕ್ಷತೆ ಮೇಲುಸ್ತುವಾರಿ ಹಾಗೂ ನೇತೃತ್ವದ ಅಂಗವಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ರಚಿಸಲಾಗಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಚರ್ಚಿಸಲಾಗುತ್ತದೆ. ಅದರಂತೆ ಕರಡು ಕ್ರಿಯಾ ಯೋಜನೆ ರಾಜ್ಯ ರಸ್ತೆ ಸುರಕ್ಷತಾ ಘಟಕದಿಂದ ಬಂದಿದ್ದು, ಈ ಕುರಿತು ವಿವಿಧ ಇಲಾಖೆಗಳ ಅಭಿಪ್ರಾಯ ಸಂಗ್ರಹಿಸಿ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಿ, ರಾಜ್ಯ ರಸ್ತೆ ಸುರಕ್ಷತಾ ಕೋಶಕ್ಕೆ ಕಳುಹಿಸಲಾಗುವುದು. ನಂತರ ಬಿಡುಗಡೆಯಾಗುವ ಅನುದಾನ ಆಧಾರದ ಮೇಲೆ ರಸ್ತೆ ಸುರಕ್ಷತಾ ಕಾರ್ಯಗಳನ್ನು ಜಿಲ್ಲಾದ್ಯಂತ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.
ಈಗಾಗಲೇ ಸಿದ್ಧಗೊಂಡಿರುವ ಕರಡು ಕ್ರಿಯಾ ಯೋಜನೆ ಅನ್ವಯ ಜಿಲ್ಲಾ ಕ್ರಿಯಾ ಯೋಜನೆ, ಸಾಂದರ್ಭಿಕ ವಿಶ್ಲೇಷಣೆ, ಅಪಘಾತ ತಗ್ಗಿಸಲು ಅಂಕಿ-ಅಂಶಗಳ ಮತ್ತು ಮಾಹಿತಿ ವ್ಯವಸ್ಥೆ ಸುಧಾರಣಾ ಕ್ರಮಗಳು, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ರಸ್ತೆ ಸುರಕ್ಷತಾ ನಿಯಮ ಅನುಷ್ಠಾನ-ಕ್ರಮಗಳು, ರಸ್ತೆಗಳಲ್ಲಿನ ತಗ್ಗು ಗುಂಡಿ ಗುರುತು, ನಿರ್ವಹಣೆ, ಅಪಘಾತ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ವಿವಿಧ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಸಮನ್ವಯದಿಂದ ಕಾರ್ಯನಿರ್ವಹಣೆ, ಜಿಲ್ಲಾದ್ಯಂತ ರಸ್ತೆ ಸುರಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಪ್ರಗತಿ, ರಸ್ತೆ ಸುರಕ್ಷತಾ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮ ಅಳವಡಿಸಿದ್ದು, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಎಸ್ಪಿ ಪ್ರಕಾಶ ನಿಕ್ಕಂ ಮಾತನಾಡಿ, ಜಿಲ್ಲೆಯ ತಾಳಿಕೋಟೆಯಿಂದ ಬಸವನಬಾಗೇವಾಡಿ ವರೆಗಿನ ಮಾರ್ಗದಲ್ಲಿ ರಸ್ತೆ ಸುರಕ್ಷತಾ ಗುರುತುಗಳನ್ನು ಅಳವಡಿಸುವ ಜೊತೆಗೆ ವಿವಿಧ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಬೇಕು. ತಾಳಿಕೋಟೆ-ಮನಗೂಳಿ ರಸ್ತೆ ಮಧ್ಯದಲ್ಲಿ ಅವಶ್ಯಕತೆ ಇರುವ ಕಡೆ ಹಂಪ್ಸ್ (ವೇಗ ನಿಯಂತ್ರಕ) ಗಳಿಗೆ ಚಾಲಕರಿಗೆ ಕಾಣುವಂತೆ ಸುರಕ್ಷತಾ ಗುರುತುಗಳ ಅಳವಡಿಕೆ, ಬಣ್ಣಗಳಿಂದ ಬರೆಯುವ ಕೆಲಸವಾಗಬೇಕು ಎಂದರು.
ವಿಜಯಪುರ-ಕಲಬುರ್ಗಿ ಮಾರ್ಗದಲ್ಲಿನ ದೇವರಹಿಪ್ಪರ-ಸಿಂದಗಿ ರಸ್ತೆ ಮಾರ್ಗಗಳಲ್ಲಿ ಅನೇಕ ಅಪಘಾತಗಳು ನಡೆದು, ಅಪಾರ ಪ್ರಮಾಣದ ಸಾವು, ನೋವು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಅವಶ್ಯಕತೆ ಇರುವ ಕಡೆ ಸ್ಪೀಡ್ ಬ್ರೇಕರ್ ಅಳವಡಿಸುವ, ವೈಜ್ಞಾನಿಕ ರೀತಿಯಲ್ಲಿ ತಿರುವುಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾದ್ಯಂತ ವಿವಿಧ ರಸ್ತೆಗಳಲ್ಲಿರುವ ಎಲ್ಲ ತಗ್ಗುಗಳನ್ನು ವೈಜ್ಞಾನಿಕ ರೀತಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಕರಡು ಕ್ರಿಯಾ ಯೋಜನೆ ಕುರಿತು ವಿವರ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಕಾರಬಾರಿ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.