ಸಂವಿಧಾನ ಓದು ಅಭಿಯಾನ ಕಾರ್ಯಾಗಾರಕ್ಕೆ ಚಾಲನೆ
ಭಾರತೀಯ ಸಂವಿಧಾನ ವಿಶ್ವಮಾನ್ಯ: ನ್ಯಾ| ನಾಗಮೋಹನದಾಸ್
Team Udayavani, Aug 2, 2019, 5:02 PM IST
ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಓದು ಕಾರ್ಯಾಗಾರಕ್ಕೆ ನ್ಯಾ| ನಾಗಮೋಹನದಾಸ್ ಚಾಲನೆ ನೀಡಿದರು.
ವಿಜಯಪುರ: ಭಾರತದ ಸಂವಿಧಾನ ಇಡೀ ಪ್ರಪಂಚದ ಗಮನವನ್ನೇ ಸೆಳೆದಿರುವುದು ನಮಗೆ ಹೆಮ್ಮೆ ತರುವ ವಿಷಯ ಎಂದು ನಿವೃತ್ತ ನ್ಯಾಯಾಧೀಶ ಎಚ್.ಎನ್ ನಾಗಮೋಹನ್ ದಾಸ್ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಆರ್.ವಿ. ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ ಸಮುದಾಯ ಕರ್ನಾಟಕ ಇವರ ಸಹಯೋಗದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಪ್ರಚಾರ ಅಭಿಯಾನದಡಿ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಓದು ಎಂಬ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನ ಎಂಬುವುದು ಜೀವನದ ಪ್ರಮುಖ ಘಟ್ಟ, ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವುದು ಹಾಗೂ ಸಂವಿಧಾನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದರು.
ಭಾರತದ ಆಡಳಿತ ವ್ಯವಸ್ಥೆ ಸಂವಿಧಾನದ ಮೇಲೆ ಅವಲಂಬಿತವಾಗಿದ್ದು, ದೇಶ ಅತೀ ವೇಗದಲ್ಲಿ ಆರ್ಥಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ, ಮುಂತಾದ ಎಲ್ಲಾ ರಂಗಗಳಲ್ಲಿಯೂ ಬೆಳೆಯುತ್ತಿರಲು ಸಂವಿಧಾನ ಬಹುಮುಖ್ಯ ಪಾತ್ರ ವಹಿಸುತ್ತಿದೆ. ದೇಶದಲ್ಲಿ ಅಭಿವೃದ್ಧಿ ಸಾಧಿಸಲು, ನಮ್ಮ ಸಂವಿಧಾನ ಭಾತೃತ್ವ, ಸಹೋದರತೆ, ಸಮಾನತೆಯ ನೆಲೆಯಿಂದ ಕೂಡಿದೆ. ಮಹಿಳೆಯರು, ದಲಿತರು, ಬುಡಕಟ್ಟು ಸಮುದಾಯ ಸೇರಿ ಎಲ್ಲ ವರ್ಗೀಯ ಜನರು ತಲೆ ಎತ್ತಿ ಬದುಕಲು ಸಂವಿಧಾನ ಅವಕಾಶ ಕಲ್ಪಸಿಕೊಟ್ಟಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಸಬಿಹಾ ಭೂಮಿಗೌಡ ಮಾತನಾಡಿ, ಸಂವಿಧಾನ ಧ್ವನಿ ಇರದವರಿಗೆ, ಧ್ವನಿಯಾಗುವ ಮೂಲಕ ಅವರ ಹಕ್ಕುಗಳನ್ನು ತಂದುಕೊಟ್ಟಿದೆ. ಇಂಥ ಸಂವಿಧಾನ ಕೊಡುಗೆಯಾಗಿ ನೀಡಿದ ಡಾ| ಅಂಬೇಡ್ಕರ ಅವರಿಗೆ ಭಾರತೀಯರಾದ ನಾವೆಲ್ಲ ಸದಾ ಋಣಿಯಾಗಿರಬೇಕು. ದೇಶದಲ್ಲಿ ಹಲವಾರು ಜಾತಿ, ಧರ್ಮ, ಮತ, ಪಂಗಡಗಳಿದ್ದರೂ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸ್ವತಂತ್ರವಾಗಿ ಸಂತಸದಿಂದ ಬದುಕಲು ಸಂವಿಧಾನವೇ ಕಾರಣವಾಗಿವೆ ಎಂದರು.
ಸಂವಿಧಾನ ಓದು ಅಭಿಯಾನದ ನೋಡಲ್ ಅಧಿಕಾರಿ ಡಾ| ವಿಠuಲ್ ಭಂಡಾರಿ ಮಾತನಾಡಿದರು. ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ ಪ್ರೊ| ಬಿ.ಎಲ್.ಲಕ್ಕಣ್ಣವರ ಸ್ವಾಗತಿಸಿದರು. ಸಮಾಜಕಾರ್ಯ ವಿಭಾಗದ ಡಾ| ಕಲಾವತಿ ಕಾಂಬಳೆ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sullia: ಅಸೌಖ್ಯದಿಂದ ಮಹಿಳೆ ಸಾವು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.