ಕೃಷ್ಣೆಯಲ್ಲಿ ಹೆಚ್ಚಳ-ಭೀಮೆಯಲ್ಲಿ ಕುಸಿತ

•ಕೃಷ್ಣಾ-ಭೀಮಾ ನದಿ ಪಾತ್ರದ 39 ಹಳ್ಳಿಗಳಲ್ಲಿ ಪ್ರವಾಹ ಸ್ಥಿತಿ•ಇನ್ನೂ 4 ಗ್ರಾಮಗಳಿಗೆ ಮುಳುಗಡೆ ಭೀತಿ

Team Udayavani, Aug 10, 2019, 1:31 PM IST

10-Naveen-12

ವಿಜಯಪುರ: ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹ ಪೀಡಿತ ಕಮಲದಿನ್ನಿ ಗ್ರಾಮದ ಸಂತ್ರಸ್ತರನ್ನು ಯಂತ್ರಚಾಲಿತ ಬೋಟಿಂಗ್‌ನಲ್ಲಿ ಸುರಕ್ಷಿತ ಸ್ಥಳಕ್ಕೆ ಸಾಗಿಸುತ್ತಿರುವದು.

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪ್ರವಾಹ ಸೃಷ್ಟಿಸಿರುವ ಎರಡು ನದಿಗಳಲ್ಲಿ ಕೃಷ್ಣಾ ನದಿ ಪ್ರವಾಹ ಹೆಚ್ಚಳವಾಗಿ ಮೂರು ಗ್ರಾಮಗಳಿಗೆ ನೀರು ನುಗ್ಗಿದೆ. ಇತ್ತ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಇಳಿಮುಖವಾಗಿದೆ.

ಕುಂಭದ್ರೋಣ ಮಳೆ ಸುರಿಯುತ್ತಿರುವ ಮಹಾರಾಷ್ಟ್ರ ರಾಜ್ಯದಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಭಭರ್ತಿಯಾಗಿರುವ ಅಲ್ಲಿನ ಜಲಾಶಯಗಳಿಂದ ಅಧಿಕ ಪ್ರಮಾಣ ನೀರು ಬಿಡಲಾಗುತ್ತಿದೆ. ಪರಿಣಾಮ ಕೃಷ್ಣಾ ಹಾಗೂ ಭೀಮಾ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾಡಳಿತ ನೀಡಿರುವ ಮಾಹಿತಿ ಪ್ರಕಾರ ಅಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದರೂ ಕೃಷ್ಣಾ ನದಿಯ ಉಪ ನದಿಗಳಾದ ಘಟಪ್ರಭಾ, ಮಲಪ್ರಭಾ ನದಿ ಪಾತ್ರಗಳಲ್ಲಿ ಅದರಲ್ಲೂ ಬೆಳಗಾವಿ ಜಿಲ್ಲೆಯ ಸುತ್ತಲೂ ಸುರಿಯುತ್ತಿರುವ ಮಳೆ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಗೊಳ್ಳುವಂತೆ ಮಾಡಿದೆ.

ಆಲಮಟ್ಟಿಯ ಶಾಸ್ತಿ ಜಲಾಶಯಕ್ಕೆ ಒಳ ಹರಿವು ಹೆಚ್ಚುತ್ತಿರುವ ಕಾರಣ ಈ ಜಲಾಶಯದಿಂದ 4.50 ಲಕ್ಷ ಕ್ಯೂಸೆಕ್‌ ನೀರನ್ನು ನದಿ ಮೂಲಕ ಬಸವಸಾಗರ ಜಲಾಶಯಕ್ಕೆ ಹರಿಸಲಾಗುತ್ತಿದೆ. ಬಸವಸಾಗರಕ್ಕೆ ನದಿ ಮೂಲಕ ಹರಿಸುತ್ತಿರುವ ಹೊರ ಹರಿವು ಹಾಗೂ ಬಸವಸಾಗರದ ಹಿನ್ನೀರಿನ ಒತ್ತಡದಿಂದಾಗಿ ಜಮೀನಿಗೆ ನುಗ್ಗಿರುವ ನೀರಿನ ಪ್ರಮಾಣ ಹೆಚ್ಚಾಗಿ ಇದೀಗ ಜನವಸತಿ ಪ್ರದೇಶಕ್ಕೆ ನುಗ್ಗತೊಡಗಿದೆ. ಹೀಗಾಗಿ ಬಸವಸಾಗರ ಜಲಾಶಯಕ್ಕೆ 4.50 ಲಕ್ಷ ಕ್ಯೂಸೆಕ್‌ ಒಳ ಹರಿವು ಇದ್ದು, 4.72 ಲಕ್ಷ ಕ್ಯೂಸೆಕ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಆಲಮಟ್ಟಿಯ ಲಾಲ್ ಬಹಾದ್ದೂರ್‌ ಶಾಸ್ತಿ ಸಾಗರ ಹಾಗೂ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿರುವ ಕಾರಣ ನದಿ ಮುದ್ದೇಬಿಹಾಳ ತಾಲೂಕಿನ ಕಮಲದಿನ್ನಿ, ಗಂಗೂರು, ಮುದೂರ ಗ್ರಾಮಗಳಿಗೆ ಪ್ರವಾಹದ ನೀರು ನುಗ್ಗಿರುವ ಕಾರಣ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮೊದಲ ಬಾರಿಗೆ ಪರಿಸ್ಥಿತಿ ಬಿಗಡಾಯಿಸಲು ಆರಂಭಿಸಿದೆ.

ಕಮಲದಿನ್ನಿ ಗ್ರಾಮವನ್ನು ನೀರು ಸುತ್ತುವರಿದಿರುವ ಕಾರಣ ಸದರಿ ಗ್ರಾಮದಲ್ಲಿ ಯಂತ್ರಚಾಲಿತ ಬೋಟಿಂಗ್‌ ವ್ಯವಸ್ಥೆ ಮಾಡಲಾಗಿದೆ. ಮತ್ತೂಂದೆಡೆ ನಿಡಗುಂದಿ ತಾಲೂಕಿನ ಬಳಬಟ್ಟಿ, ಮಸೂತಿ, ಕಾಸಿನಕುಂಟೆ, ಯಲ್ಲಮ್ಮನಬೂದಿಹಾಳ, ಅರಳದಿನ್ನಿ, ಯಲಗೂರು ನೀರು ನುಗ್ಗುವ ಅಪಾಯವಿದೆ. ಈ ಎರಡೂ ತಾಲೂಕಿನ 26 ಹಳ್ಳಿಗಳಿಗೆ ಪ್ರವಾಹದ ನೀರು ನುಗ್ಗುವ ಭೀತಿ ಇರುವ ಕಾರಣ ಅಧಿಕಾರಿಗಳು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.

ಆಲಮಟ್ಟಿಯ ಶಾಸ್ತಿ ಜಲಾಶಯದ ಹೊರ ಹರಿವಿನ ನೀರಿನ ಒತ್ತಡದಿಂದಾಗಿ ಜಲಾಶಯ ಭಾಗದಲ್ಲಿರುವ ಉದ್ಯಾನವನಗಳು ಹಾಗೂ ಸಂಗೀತ ನೃತ್ಯ ಕಾರಂಜಿಗೂ ನೀರು ನುಗ್ಗಿದ ಕಾರಣ ಹಾನಿಯಾಗಿದೆ. ಇದರಿಂದಾಗಿ ಜಲಾಶಯ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.

ಆದರೆ ಭೀಮಾ ನದಿಯಲ್ಲಿ ಪ್ರವಾಹ ತಗ್ಗತೊಡಗಿದೆ. ಶುಕ್ರವಾರ ಜಿಲ್ಲೆಯ ಗಡಿಯಲ್ಲಿರು ಧೂಳಖೇಡ ಬಳಿ ನದಿ ಹರಿವಿನ ಜಲಮಾಪನ ಕೇಂದ್ರದಲ್ಲಿ ಪ್ರವಾಹ ತಗ್ಗಿರುವ ಸೂಚನೆ ಸಿಕ್ಕಿದೆ. ಧೂಳಖೇಡ ಬಳಿ ಗುರುವಾರ ಸಂಜೆಯ ವರೆಗೆ 14 ಮೀಟರ್‌ ನಷ್ಟಿದ್ದ ನೀರಿನ ಹರಿವಿನ ಪ್ರಮಾಣ, ಶುಕ್ರವಾರ ಮಧ್ಯಾಹ್ನದ ವೇಳೆಗೆ 13 ಮೀಟರ್‌ಗೆ ಳಿದಿದ್ದು, ಪ್ರವಾಹ ತಗ್ಗುವ ಆಶಾಭಾವ ಇದೆ. ಇದರ ಹೊರತಾಗಿಯೂ ಭೀಮಾ ನದಿ ಇಂಡಿ ತಾಲೂಕಿನ ಖೆಡಗಿ ಗ್ರಾಮದ ವಿರಕ್ತ ಮಠಕ್ಕೆ ನುಗ್ಗಿದ್ದು, ಮಠದ ಆವರಣದಲ್ಲಿರುವ ದೇವಸ್ಥಾನ ಜಲಾವ್ರತವಾಗಿದೆ.

ಜಿಲ್ಲೆಯ ಕೃಷ್ಣಾ ನದಿ ಪ್ರವಾಹ ಪ್ರಸಕ್ತ ವರ್ಷ ಪ್ರಥಮ ಬಾರಿಗೆ ಜನವಸತಿಗೆ ನುಗ್ಗುತ್ತಿರುವ ಕಾರಣ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಪ್ರವಾಹ ಬಾಧಿತ ಗ್ರಾಮಗಳಿಗೆ ಸಮನ್ವಯ ಅಧಿಕಾರಿಗಳನ್ನು ನೇಮಿಸಿ, ಅವರ ಅಧೀನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವನ್ನು ರಚಿಸಿದೆ.

ಗುರುವಾರ ಸಂಜೆಯೇ ಜಿಲ್ಲೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್‌ ಮೊಹಸೀನ್‌ ಕೃಷ್ಣಾ ನದಿ ಪಾತ್ರದ ಹಳ್ಳಿಗಳಿಗೆ ಭೇಡಿ ನೀಡಿ ಪರಿಶೀಲಿಸಿ ನಗರದಲ್ಲಿ ಬೀಡು ಬಿಟ್ಟಿದ್ದರು. ಶುಕ್ರವಾರ ಭೀಮಾ ನದಿ ಪಾತ್ರದ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವಂತೆ ಜಿಲ್ಲೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

1-viji

Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.