ಗ್ರಾಪಂ ನೌಕರರ ಪ್ರತಿಭಟನೆ

ವೇತನ ವಿಷಯದಲ್ಲಿ ಪಿಡಿಒಗಳು ಸರ್ಕಾರಿ ಆದೇಶ ಪಾಲಿಸುತ್ತಿಲ್ಲ

Team Udayavani, Aug 30, 2019, 11:17 AM IST

30-Agust-7

ವಿಜಯಪುರ: ಗ್ರಾಮ ಪಂಚಾಯ್ತಿ ನೌಕರರು ಜಿ.ಪಂ ಸಿಇ ವಿಕಾಸ ಸುರಳಕರ ಅವರಿಗೆ ಮನವಿ ಸಲ್ಲಿಸಿದರು.

ವಿಜಯಪುರ: ಗ್ರಾಮ ಪಂಚಾಯ್ತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರ ಸಂಘದ ನೇತೃತ್ವದಲ್ಲಿ ಗ್ರಾಪಂ ನೌಕರರು ಪ್ರತಿಭಟನಾ ರ್ಯಾಲಿ ನಡೆಸಿ, ಜಿ.ಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಮಾತನಾಡಿ, ಗ್ರಾಮ ಪಂಚಾಯ್ತಿ ನೌಕರರು ಅನೇಕ ರೀತಿಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರ ನ್ಯಾಯಯುತವಾದ ಬೇಡಿಕೆಗಳೂ ಸಹ ಇಂದಿಗೂ ಈಡೇರಿಲ್ಲ. ಸರ್ಕಾರ ಕೂಡಲೇ ಗ್ರಾಪಂ ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಕರೆ ನೀಡಿದರು. ಕರ್ನಾಟಕ ಗ್ರಾಮೀಣಾಭಿವೃದ್ಧಿ ಪಂಚಾಯ್ತಿ ರಾಜ್ಯ ಇಲಾಖೆಯಿಂದ ಬಂದ ಆದೇಶಗಳನ್ನು ಅನುಷ್ಠಾನಗೊಳಿಸುವ ಮೂಲಕ ಗ್ರಾಪಂ ನೌಕರರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ನಾಯಕ ಅಣ್ಣಾರಾಯ ಈಳಗೇರ ಮಾತನಾಡಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಸರ್ಕಾರದ ಆದೇಶವನ್ನು ಸರಿಯಾಗಿ ಪಾಲಿಸುತ್ತಿಲ್ಲ. ಗ್ರಾಮ ಪಂಚಾಯ್ತಿ ನೌಕರರಿಗೆ ವೇತನ ಮೊದಲಾದ ವಿಷಯವಾಗಿ ಸರ್ಕಾರ ನೀಡಿದ ಆದೇಶವನ್ನು ಸ್ಪಷ್ಟವಾಗಿ ಪಾಲನೆ ಮಾಡುವಂತೆ ಪಿಡಿಒಗಳಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಎಸ್‌ಎಸ್‌ಎಲ್ಸಿ ಉತ್ತೀರ್ಣರಾಗಿ 5 ವರ್ಷ ಸೇವೆ ಸಲ್ಲಿಸಿದ ವಾಟರ್‌ಮನ್‌ ಹಾಗೂ ಇತರೆ ನೌಕರರಿಗೆ ಕ್ಲರ್ಕ್‌ ಹುದ್ದೆ ಬಡ್ತಿ ನೀಡಬೇಕು. ಒಂದು ವರ್ಷದಿಂದ ಬಾಕಿ ಉಳಿದ ವೇತನ ಇಎಫ್‌ಎಂಎಸ್‌ಗೆ ಸೇರಿಸಿ ವೇತನ ತೆರಿಗೆ ಸಂಗ್ರಹದಲ್ಲಿ ಹಣದಲ್ಲಿ ವೇತನ ನೀಡುವಂತೆ ಕ್ರಮಕೈಗೊಳ್ಳಬೇಕು. ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ಉಪಧನ ಕೊಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕ ತೆರೆಯುವುದು, ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸೇವಾ ನಿಯಮಾವಳಿ ರಚಿಸಬೇಕು, ಸರ್ಕಾರಿ ನೌಕರರಿಗೆ ನೀಡಲಾಗುವ ಎಲ್ಲ ಬಗೆಯ ಸೌಲಭ್ಯ ಗ್ರಾಮ ಪಂಚಾಯ್ತಿ ನೌಕರರಿಗೆ ವಿಸ್ತರಣೆ ಮಾಡಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

ಮುಖಂಡರಾದ ವಿಠ್ಠಲ ಹೊಮನೋರೆ, ಎಂ.ಕೆ. ಚೆಳ್ಳಗಿ, ಕುಮಾರ ರಾಠೊಡ, ಅಬ್ದುಲ್ ತಮದಡ್ಡಿ, ಯಲ್ಲನಗೌಡ ಬಿರಾದಾರ, ರಾಜು ಬನ್ನಟ್ಟಿ, ಮುರಘೇಂದ್ರ ಹುಣಶ್ಯಾಳ, ಶಾಂತಪ್ಪ ಕಟ್ಟಿಮನಿ, ಅಜೀಜ ಶೇಖ, ಮಲಕಾರಿ ನರಳೆ ಉಪಸ್ಥಿತರಿದ್ದರು.

ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಸಿಇಒ ವಿಕಾಸ ಸುರಳಕರ, ಗ್ರಾಮ ಪಂಚಾಯ್ತಿ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸೆ.2ರಂದು ಈ ವಿಷಯವಾಗಿ ಗ್ರಾ.ಪಂ ನೌಕರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆಯುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.