ಧೋ ಎಂದು ಸುರಿದ ಮಳೆರಾಯ
ಮನೆಗಳಿಗೆ ನೀರು ನುಗ್ಗಿ ಹಾನಿನಾಲ್ಕಾರು ಹಳ್ಳಿ ಹೊರತಾಗಿ ಜಿಲ್ಲೆಯಲ್ಲಿ ಬಹುತೇಕ ಉತ್ತಮ ಮಳೆ
Team Udayavani, Oct 5, 2019, 11:51 AM IST
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಗುರುವಾರ 23.13 ಮಿ.ಮೀ. ಮಳೆಯಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಹಾನಿ ಮಾಡಿದ್ದರಿಂದ ಬಬಲೇಶ್ವರ ನಾಕಾ ಪ್ರದೇಶದ ನಿವಾಸಿಗಳು ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಘಟನೆಯೂ ನಡೆಯಿತು.
ಜಿಲ್ಲೆಯ ಆಲಮಟ್ಟಿ, ಮಟ್ಟಿಹಾಳ, ಸಾಸಬಾಳ, ಬಬಲೇಶ್ವರ, ಮಮದಾಪುರ ಹೊರತು ಪಡಿಸಿದರೆ ಜಿಲ್ಲೆಯ ಬಹುತೇಕ ಎಲ್ಲ ಕಡೆ ಉತ್ತಮ ಮಳೆಯಾಗಿದೆ. ಗುರುವಾರ ಇಡಿ ದಿನ ಭಾರಿ ಬಿಸಿಲಿನ ಝಳ ಇದ್ದು, ಸಂಜೆ ವೇಳೆ ಇದ್ದಕ್ಕಿದ್ದಂತೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ, ಧೋ ಎಂದು ಮಳೆ ಸುರಿಯಲಾರಂಭಿಸಿತು. ಹೀಗೆ ಸುರಿಯತೊಡಗಿದ ಮಳೆ ಶುಕ್ರವಾರ ಬೆಳಗಿನವರೆಗೂ ಸುರಿಯುತ್ತಲೇ ಇತ್ತು.
ಭೀಕರ ಮಳೆಗೆ ನಗರದ ಚಾಲುಕ್ಯ ನಗರ, ಶಾಪೇಟೆ, ಮನಗೂಳಿ ಅಗಸಿ, ಕೀರ್ತಿ ನಗರ, ಹುತಾತ್ಮರ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಮನೆಗಳು, ವ್ಯಾಪಾರಿ ಮಳಿಗೆಗಳಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ. ಭೀಕರ ಮಳೆಗೆ ನಗರ ಎಲ್ಲ ರಸ್ತೆಗಳು ಕೂಡ ತುಂಬಿ ಹರಿಯತೊಡಗಿದ ಕಾರಣ ವಾಹನ ಸಂಚಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ರಸ್ತೆಗಳ ಗುಂಡಿಗಳಲ್ಲಿನ ನೀರಿನ ಆಳ ತಿಳಿಯದೇ ಬೀಳುತ್ತಿದ್ದುದು ಸಾಮಾನ್ಯವಾಗಿತ್ತು.
ಶುಕ್ರವಾರ ಬೆಳಗಿನವರೆಗೂ ನಗರದ ಬಹುತೇಕ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಮನೆಗಳಲ್ಲಿ ತುಂಬಿದ್ದ ನೀರು ಹೊರ ಹಾಕಲು ಕೂಡ ಆಗದ ಸ್ಥಿತಿ ನಿರ್ಮಾಣವಾಗಿತ್ತು. ಇದಲ್ಲದೇ ಶುಕ್ರವಾರ ಮಧ್ಯಾಹ್ನವಾದರೂ ಹಲವು ಬಡಾವಣೆಗಳಲ್ಲಿ ತುಂಬಿಕೊಂಡಿದ್ದ ಮಳೆ ಹಾಗೂ ಕೊಳಚೆ ನೀರು ಹೊರ ಹೋಗಲು ಅನುವಾಗದೇ ನಿಂತಿದ್ದರಿಂದ ಜನರು ಪರಿತಪಿಸುವಂತಾಯಿತು.
ನಗರದ ಲಕ್ಷ್ಮೀ ಚಿತ್ರ ಮಂದಿರದಲ್ಲಿ ಮಳೆ ನೀರಿನಿಂದ ಜಲಾವೃತವಾಗಿದ್ದು, ಶುಕ್ರವಾರ ಬೆಳಗಿನ ಪ್ರಸಾರಕ್ಕೆ ಸಮಸ್ಯೆ ಉಂಟು ಮಾಡಿತ್ತು. ಈ ಮಧ್ಯೆ ಮಳೆ ನೀರಿನಿಂದ ತಮ್ಮ ಮನೆಗಳಿಗೆ ನೀರು ನುಗ್ಗಿ ಹಾನಿ ಮಾಡಿದ್ದರಿಂದ ರೊಚ್ಚಿಗೆದ್ದ ಬಬಲೇಶ್ವರ ನಾಕಾ ಪ್ರದೇಶದ ವಿವಿಧ ಬಡಾವಣೆಗಳ ಜನರು ಶುಕ್ರವಾರ ದಿಢೀರ್ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇಂತಹ ಸಮಸ್ಯೆಗಳ ಹೊರತುಪಡಿಸಿ ಜಿಲ್ಲೆಯಲ್ಲಿ ಸುರಿದ ಮಳೆ ಹಿಂಗಾರು ಹಂಗಾಮಿನ ಬಿತ್ತನೆಗೆ ಉತ್ತಮವಾಗಿದೆ. ಹಿಂಗಾರು ಹಂಗಾಮಿನ ಜೋಳ, ಗೋಧಿ, ಕಡಲೆ, ಹತ್ತಿಯಂಥ ಬಿತ್ತನೆಗೆ ಸೂಕ್ತವಾಗಿದ್ದು, ಮಳೆ ಇಲ್ಲದೇ ಕಂಗಾಗಲಾಗಿದ್ದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.