ಜಲಶಕ್ತಿ ಅಭಿಯಾನ ಅನುಷ್ಠಾನಕ್ಕೆ ಸಮನ್ವಯ ಅಗತ್ಯ

ಮಾರ್ಗಸೂಚಿಯನ್ವಯ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಿ

Team Udayavani, Sep 8, 2019, 5:50 PM IST

8-Sepctember-23

ವಿಜಯಪುರ: ಯುವ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ ಜರುಗಿತು.

ವಿಜಯಪುರ: ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನವನ್ನು ಆರಂಭಿಕವಾಗಿ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ ಎಂದು ಜಿಲ್ಲಾಕಾರಿ ವೈ.ಎಸ್‌. ಪಾಟೀಲ ಅವರು ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿಗೆ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಯುವ ಕಾರ್ಯಕ್ರಮಗಳು ಹಮ್ಮಿಕೊಳ್ಳುವ ಕುರಿತ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ವಿಜಯಪುರ ಜಿಲ್ಲೆ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿರುವ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಪ್ರಥಮ ಆದ್ಯತೆಯಾಗಿ ಆಯ್ಕೆ ಮಾಡಿಕೊಂಡಿದ್ದು, ಜಲಶಕ್ತಿ ಅಭಿಯಾನ ಮೂಲಕ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುವಂತೆ ಸೂಚಿಸಿದರು.

ಜಿಪಂ ಉಪ ಕಾರ್ಯದರ್ಶಿಗಳು, ಜಿಲ್ಲೆಯ ಎಲ್ಲ ತಾಪಂ ಇಒಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ, ಅರಣ್ಯ, ಜಲ ಸಂಪನ್ಮೂಲಕ್ಕೆ ಸಂಬಂಧಿಸಿದ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿಗಳು ನೇರ ಸಂಪರ್ಕ ಇರಿಸಿಕೊಳ್ಳಬೇಕು. ಯುವ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಸಂಘಟಿಸಬೇಕು. ವಿವಿಧ ಯುವಕ-ಯುವತಿ ಕ್ಲಬ್‌ಗಳ ಅಭಿವೃದ್ಧಿ, ಯುವ ನಾಯಕತ್ವ ಮತ್ತು ಸಮುದಾಯ ಅಭಿವೃದ್ಧಿ, ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ, ವಿವಿಧ ಕಲೆ ಮತ್ತು ಸಂಸ್ಕೃತಿ ಹಾಗೂ ದೇಶಭಕ್ತಿ, ಸ್ವಚ್ಛತಾ ಅಭಿಯಾನ, ಅರಣ್ಯೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಯನ್ವಯ ನಿಗದಿಪಡಿಸಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವವಹಿಸಬೇಕು ಎಂದು ಸೂಚಿಸಿದರು.

ಯುವ ಸಮುದಾಯ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅನೇಕ ರೀತಿ ಬದಲಾವಣೆ ತರಲು ಸಹ ಸಾಧ್ಯವಿದ್ದು, ನೆಹರು ಯುವ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಾರ್ಯಕ್ರಮಗಳನ್ನು ವೇಳಾಪಟ್ಟಿಯನ್ವಯ ಸಿದ್ಧಪಡಿಸಿ ಹಮ್ಮಿಕೊಳ್ಳಬೇಕು. ಗ್ರಾಮಾಂತರ ಪ್ರದೇಶದ ಜನರೊಂದಿಗೆ ನಿರಂತರ ಸಂಪರ್ಕ ಇರಬೇಕಾದ ಹಿನ್ನೆಲೆಯಲ್ಲಿ ಮಾತೃಭಾಷೆಯಲ್ಲಿ ಸಂವಹನ ನಡೆಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ವ್ಯವಸ್ಥಿತ ರೀತಿಯಲ್ಲಿ ಇಲಾಖೆ ಕಾರ್ಯ ಚಟುವಟಿಕೆಗಳನ್ನು ಕ್ರಿಯಾಯೋಜನೆಯನ್ವಯ ಹಮ್ಮಿಕೊಳ್ಳಲು ಸೂಚನೆ ನೀಡಿದರು.

ಸಭೆಯಲ್ಲಿ ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ರಾಹುಲ್ ಡೊಂಗರೆ, ನೆಹರು ಯುವ ಕೇಂದ್ರದಿಂದ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನೆಹರು ಯುವ ಕೇಂದ್ರದಿಂದ 2019-20ನೇ ಸಾಲಿಗಾಗಿ ಸಿದ್ಧಪಡಿಸಲಾದ ಕ್ರಿಯಾಯೋಜನೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಸಮಿತಿ ಮುಂದೆ ಮಂಡಿಸಿ ಅನುಮೋದನೆ ಪಡೆದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಮಹೇಂದ್ರ ಕಾಪ್ಸೆ, ಜಿಪಂ ಮುಖ್ಯ ಯೋಜನಾಧಿಕಾರಿ ಎನ್‌.ಕೆ. ಗೋಠೆ, ವಯಸ್ಕರ ಶಿಕ್ಷಣಾಧಿಕಾರಿ ಅಲ್ಲಾಪುರ, ಎನ್ನೆಸ್ಸೆಸ್‌ ನೋಡಲ್ ಅಧಿಕಾರಿ ಸಜ್ಜಾದೆ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಮಹೇಶ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.