ಜಲ ಸಂರಕ್ಷಣೆ ಖುದ್ದು ವೀಕ್ಷಿಸಿದ ಕೇಂದ್ರ ತಂಡ

ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ

Team Udayavani, Jul 19, 2019, 10:49 AM IST

19-July-9

ವಿಜಯಪುರ: ಜಿಲ್ಲೆಯಲ್ಲಿ ಜಲ ಸಂರಕ್ಷಣೆಗೆ ಕೈಗೊಂಡಿರುವ ಯೋಜನಾ ಸ್ಥಳಗಳಿಗೆ ಭೇಟಿ ನೀಡಿದ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಸಮನ್ವಯಾಧಿಕಾರಿ ಅಜಯ ಶ್ರೀವಾಸ್ತವ ಪರಿಶೀಲಿಸಿದರು.

ವಿಜಯಪುರ: ನೀರಿನ ಕೊರತೆ ಹಾಗೂ ಜಲಸಂರಕ್ಷಣಾ ಕ್ರಮಗಳ ಕುರಿತು ವಸ್ತುಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರದ ಜಲಶಕ್ತಿ ಅಭಿಯಾನದ ಸಮನ್ವಯ ಅಧಿಕಾರಿ ಅಜಯ ಶ್ರೀವಾಸ್ತವ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜಿಲ್ಲೆಯ ವಿವಿಧೆಡೆ ಕೈಗೊಂಡಿರುವ ಜಲ ಸಂರಕ್ಷಣೆ ಕ್ರಮಗಳನ್ನು ಖುದ್ದು ವೀಕ್ಷಣೆ ನಡೆಸಿತು.

ಕೃಷಿ, ತೋಟಗಾರಿಕೆ, ಜಲಾನಯನ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ಇಂಡಿ ತಾಲೂಕಿನ ಬರ ಪರಿಸ್ಥಿತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲೇ ಅತಿ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿರುವ ಇಂಡಿ ತಾಲೂಕಿನ ಅಥರ್ಗಾ, ತಡವಲಗಾ, ಗಣವಲಗಾ, ರೂಗಿ, ಬಬಲಾದ, ಹಳಗುಣಕಿ ಗ್ರಾಮಗಳಿಗೆ ಭೇಟಿ ನೀಡಿ ಕೃಷಿಹೊಂಡ, ಬಾವಿಗಳು ಹಾಗೂ ಜಲ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಕೇಂದ್ರದ ವಾಣಿಜ್ಯ ಇಲಾಖೆಯ ಆರ್ಥಿಕ ಸಲಹೆಗಾರರೂ ಆಗಿರುವ ಶ್ರೀವಾಸ್ತವ ಅವರು, ರಾಷ್ಟ್ರದಲ್ಲಿ ತೀವ್ರ ಬರ ಎದುರಿಸುತ್ತಿರುವ ಜಿಲ್ಲೆಗಳ ಪೈಕಿ ಕರ್ನಾಟಕ ರಾಜ್ಯದ ಹಾಸನ, ಬಳ್ಳಾರಿ, ವಿಜಯಪುರ ಜಿಲ್ಲೆಗಳನ್ನು ಜಲಶಕ್ತಿ ಅಭಿಯಾನದಡಿ ಆಯ್ಕೆ ಮಾಡಲಾಗಿದೆ.

ಜಲಶಕ್ತಿ ಅಭಿಯಾನದ ಅನುಷ್ಠಾನಕ್ಕಾಗಿ ಜಿಲ್ಲೆಯ ಪರಿಸ್ಥಿತಿ ಅಧ್ಯಯನ ನಡೆಸಲು ಮುಂದಾಗಿದೆ. ಅಥರ್ಗಾ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಕೃಷಿ ಹೊಂಡ ಪರಿಶೀಲನೆ ನಡೆಸಿ, ಅವಶ್ಯಕ ಮಾಹಿತಿ ಪಡೆದರು. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ತಡವಲಗಾ ಗ್ರಾಮದಲ್ಲಿ ಬೇವಿನತೋಪು ವೀಕ್ಷಣೆ ನಡೆಸಿದರು. ಇಂಡಿ ಸೇರಿದಂತೆ ಜಿಲ್ಲಾದ್ಯಂತ 70 ಬೇವಿನತೋಪು ಬ್ಲಾಕ್ಸ್‌ ನಿರ್ಮಿಸಲಾಗಿದೆ. ಕೊಳವೆಬಾವಿ ತೋಡಲು ಅನುದಾನದ ಅವಶ್ಯಕತೆ ಇದೆ. ಇದಲ್ಲದೇ ತಡವಲಗಾ ಗ್ರಾಮದಲ್ಲಿ 27 ಹೆಕ್ಟೇರ್‌ ಜಮೀನಿನಲ್ಲಿ 5,400 ಬೇವಿನ ಸಸಿಗಳನ್ನು ನೆಡಲಾಗಿದೆ. ಅದರಂತೆ ಜಿಲ್ಲಾದ್ಯಂತ ಈ ಸಸಿಗಳನ್ನು ನೆಡಲಾಗುತ್ತಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದರು.

ಅದರಂತೆ ಗಣವಲಗಾ ಗ್ರಾಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿರ್ಮಿಸಲಾಗಿರುವ ನಾಲಾ ಬಂಡಿಂಗ್‌ ಕಾಮಗಾರಿ ಪರಿಶೀಲಿಸಿದರು. ರೂಗಿ ಗ್ರಾಮದಲ್ಲಿ ಕೃಷಿಭಾಗ್ಯ ಯೋಜನೆಯಡಿ ರೈತರಿಗೆ ನೀಡಲಾದ ಸೌಲಭ್ಯಗಳ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಬಲಾದ ಗ್ರಾಮದಲ್ಲಿ ಕೆರೆ ವೀಕ್ಷಣೆ ನಡೆಸುವ ಸಂದರ್ಭದಲ್ಲಿ ಭೀಮಾ ನದಿಯಿಂದ ನೀರಿನ ಸರಬರಾಜುವಿನಲ್ಲಿ ತೊಂದರೆ ಉಂಟಾಗುತ್ತಿದ್ದು, ಭೀಮಾ ನದಿ ನೀರಿನ ಕೊರತೆ ಉಂಟಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ರೀತಿ ಬಬಲಾದ ಗ್ರಾಮದಲ್ಲಿ ಅರಣ್ಯ ಸಸಿಗಳ ರಕ್ಷಣೆಗಾಗಿ ನಿರ್ಮಿಸಲಾದ ನೀರಿನ ಹೊಂಡವನ್ನು ಪರಿಶೀಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣಾ ಚಟುವಟಿಕೆಗಳು ಹಾಗೂ ತೀವ್ರ ಬರ ಎದುರಿಸುತ್ತಿರುವ ಇಂಡಿ ತಾಲೂಕಿನ ಬರ ಪರಿಸ್ಥಿತಿ, ಕೈಗೊಂಡಿರುವ ಬರ ನಿರ್ವಹಣಾ ಕ್ರಮಗಳ ಬಗ್ಗೆ ವಿವರಿಸಿದರು. ಅದರಂತೆ ಕೃಷ್ಣಾ ನದಿಯ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಸೀಮಿತವಾಗಿ ಜಿಲ್ಲೆಯ ಪ್ರತಿ ಮನೆಗೆ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆ ಜಾರಿಗೊಂಡಲ್ಲಿ ಬಹುತೇಕ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಿದೆ. ಈ ಯೋಜನೆ ಜಾರಿಗೆ ಜನಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ ಎಂದು ವಿವರ ನೀಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.