ಮಹಾತ್ಮರಿಗೆ ಜಾತಿ ಚೌಕಟ್ಟು ಬೇಡ
Team Udayavani, Nov 16, 2019, 3:20 PM IST
ವಿಜಯಪುರ: ಜಾತೀಯತೆ, ಮೂರ್ತಿ ಪೂಜೆ ವಿರುದ್ಧ ಹೋರಾಡಿ ಅದನ್ನು ಹೋಗಲಾಡಿಸಲು ಕನಕದಾಸರು ಪ್ರಯತ್ನಿಸಿದ್ದಾರೆ. ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ಎಲ್ಲ ಮಹಾನ್ ವ್ಯಕ್ತಿಗಳನ್ನು ನಾವೆಲ್ಲರೂ ಸೇರಿ ಅವರನ್ನು ಒಂದೊಂದು ಜಾತಿಗೆ ಗಂಟು ಹಾಕಿದ್ದು ದೊಡ್ಡ ದುರಂತ ಎಂದು ಬೆಂಗಳೂರಿನ ಮಹಾರಾಣಿ ವಲಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ| ಕೆ.ವೈ. ನಾರಾಯಣಸ್ವಾಮಿ ವಿಷಾದಿಸಿದರು.
ಶುಕ್ರವಾರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕನಕದಾಸರ ಜಯಂತಿ ಅಂಗವಾಗಿ ಕನಕ ಅಧ್ಯಯನ ಪೀಠದಿಂದ ಹಮ್ಮಿಕೊಂಡಿದ್ದ ಚಿಂತನಗೋಷ್ಠಿಯಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಕನಕದಾಸರು ಸೇರಿದಂತೆ ಹಲವಾರು ಮಹಾನ್ ಚಿಂತಕರು ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿ ಗೆದ್ದವರು. ಸಮಾಜದಲ್ಲಿ ಬೇರು ಬಿಟ್ಟಿರುವ ಜಾತೀಯತೆ ತೊಲಗಿಸುವಲ್ಲಿ ಶ್ರಮಿಸಿ ಸಂತ-ಮಹಾತ್ಮರಲ್ಲಿ ಕನಕದಾಸರು ಪ್ರಮುಖರು ಎಂದರು.
ಇಂಥ ಸಂತರ ವೈಜ್ಞಾನಿಕ ಬೋಧನೆ ನಂತರವೂ ಪ್ರಸ್ತುತ ವಿಜ್ಞಾನ-ತಂತ್ರಜ್ಞಾನ ಸಮಾಜದಲ್ಲೂ ಮೂಢನಂಬಿಕೆ, ಮೂರ್ತಿ ಪೂಜೆ ಮಾಡಲಾಗುತ್ತದೆ. ಜಾತೀಯತೆ ತೊಲಗಿಸಿ ಸಮಾಜಕ್ಕೆ ಮಾನವೀಯ ಮೌಲ್ಯ ಬಿತ್ತಿದ ಮಹಾತ್ಮರಿಗೆ ಜಾತಿಯ ಚೌಕಟ್ಟು ಹಾಕುತ್ತಿರುವುದು ನಿಜಕ್ಕೂ ದುರಂತ ಎಂದರು. ಇನ್ನಾದರೂ ನಾವೆಲ್ಲ ಎಚ್ಚೆತ್ತುಕೊಳ್ಳಬೇಕಿದೆ. ಸಂತ-ಮಹಾತ್ಮರನ್ನು ಜಾತಿಯ ಮೂಲದಿಂದ ನೋಡದೇ ಅವರ ತತ್ವಾದರ್ಶ ಮೈಗೂಡಿಸಿಕೊಳ್ಳಬೇಕು. ಸಮಾಜಕ್ಕೆ ಅವರು ಬಿಟ್ಟುಹೋಗಿರುವ ಮೌಲಿಕ ಚಿಂತನೆ ಮನವರಿಕೆ ಮಾಡಿಕೊಂಡು ಬದುಕುವುದನ್ನು ಕಲಿಯಬೇಕಿದೆ ಎಂದರು.
ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಾಮಾಜಿಕ ಕಳಕಳಿ ತೋರಿಸಿದ್ದಾರೆ. ಅವರ ಕೀರ್ತನೆಗಳಲ್ಲಿ ಮೋಸ, ಢಾಂಬಿಕ, ವಂಚನೆ ವಿರುದ್ಧ ಹಾಗೂ ಸಾಮಾಜಿಕ ಸಮಾನತೆ, ಸಮಾಜದ ಅಭಿವೃದ್ಧಿಪರ ಮೂಡಿಬಂದ ಕೀರ್ತನಗಳನ್ನು ನೋಡಬಹುದು. ಆದರೆ ಈ 20ನೇ ಶತಮಾನದಲ್ಲಿ ಕನಕದಾಸರ ಕೀರ್ತನೆ ನೋಡುವ ದೃಷ್ಟಿಯೇ ಬದಲಾಗಿದೆ. ಅವರ ಕೀರ್ತನೆಗಳನ್ನು ಓದುವ ರೀತಿ ಬದಲಿಸಲಾಗಿದೆ. ಇದು ಮಹಾ ಅಪರಾಧವಾಗಿದೆ. ಅವರ ಕೀರ್ತನೆಗಳಲ್ಲಿರುವ ಒಳ ಅರ್ಥ ಎಂದಿಗೂ ಬದಲಿಸಬಾರದು ಎಂದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ| ಎಸ್.ಎ. ಖಾಜಿ ಅಧ್ಯಕ್ಷತೆ ವಹಿಸಿದ್ದರು. ಕನಕ ಅಧ್ಯಯನ ಪೀಠದ ಸಂಯೋಜಕ ಡಾ| ಜಿ.ಎನ್. ಕಿರಣ, ಡಾ| ವಿಷ್ಣು ಶಿಂಧೆ, ಸುಜ್ಞಾನಿ ಶಿಂಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.