ಮೈತ್ರಿ ಅಭ್ಯರ್ಥಿ ಸುನೀತಾ ಶಕ್ತಿ ಪ್ರದರ್ಶನ
ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಿದ ಚವ್ಹಾಣ ಉಭಯ ಪಕ್ಷದ ನಾಯಕರ ಸಾಥ್-ಮೆರವಣಿಗೆ
Team Udayavani, Apr 5, 2019, 4:07 PM IST
ವಿಜಯಪುರ: ಡಾ| ಸುನೀತಾ ಚವ್ಹಾಣ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಪಾಲ್ಗೊಂಡ ಪಕ್ಷದ ಕಾರ್ಯಕರ್ತರು.
ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ| ಸುನೀತಾ ದೇವಾನಂದ ಚವ್ಹಾಣ ಗುರುವಾರ ನಾಮಪತ್ರ ಸಲ್ಲಿಸಿದರು.
ನಗರದ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾ ಧಿಕಾರಿಗಳ ಕಚೇರಿಗೆ ತೆರಳಿ ಸುನಿತಾ ನಾಮಪತ್ರ ಸಲ್ಲಿಸಿದರು.
ಡಾ| ಸುನಿತಾ ಅವರು ನಾಮಪತ್ರ ಸಲ್ಲಿಕೆಯೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೃಹ ಸಚಿವ ಎಂ.ಬಿ. ಪಾಟೀಲ, ಆರೋಗ್ಯ ಸಚಿವ ಶಿವಾನಂದ ಪಾಟೀಲ, ಜೆಡಿಎಸ್ ಪಕ್ಷದ ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಸಚಿವ ಬಂಡೆಪ್ಪ ಕಾಶಂಪೂರ, ಉಭಯ ಪಕ್ಷಗಳ ಶಾಸಕರಾದ ಬಸವರಾಜ ಹೊರಟ್ಟಿ, ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ, ಶಿಕ್ಷಣ ಇಲಾಖೆ ಸಂಸದೀಯ ಕಾರ್ಯದರ್ಶಿದ ಜೆಡಿಎಸ್ ಅಭ್ಯರ್ಥಿ ಸುನಾತಾ ಅವರ ಪತಿ ಡಾ|ದೇವಾನಂದ ಚವ್ಹಾಣ, ಮೇಲ್ಮನೆ ಸದಸ್ಯರಾದ ಸುನಿಲಗೌಡ ಪಾಟೀಲ, ಪ್ರಕಾಶ ರಾಠೊಡ, ಮಾಜಿ ಸಚಿವ ಸಿ.ಎಸ್. ನಾಡಗೌಡ, ವಿಠಲ ಕಟಕಧೋಂಡ, ರಾಜು ಆಲಗೂರ, ಸೋಮನಗೌಡ ಪಾಟೀಲ ಮನವೂಳಿ, ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ, ನಾನಾಗೌಡ ಪಾಟೀಲ, ದಿಲಾವರ ಖಾಜಿ, ಚಂದ್ರಶೇಖರ ಹಿರೇಮಠ, ರಾಜು ಹಿಪ್ಪರಗಿ, ಮಲ್ಲಿಕಾರ್ಜುನ ಯಂಡಿಗೇರಿ ಇವರೆಲ್ಲ ಒಂದೇ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.
ಮೆರವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಜಂಟಿ ಧ್ವಜಗಳನ್ನು ಹಿಡಿದಿದ್ದ ಕಾರ್ಯಕರ್ತರು ಉಭಯ ಪಕ್ಷಗಳು ಹಾಗೂ ಅವುಗಳ ನಾಯಕರ ಪರವಾಗಿ ಘೋಷಣೆ ಕೂಗಿದರು. ಮೆರವಣಿಗೆಯಲ್ಲಿದ್ದ ಎರಡು ತೆರೆದ ವಾಹನಗಳ ಎಡ-ಬಲದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ಅಧ್ಯಕ್ಷ ಎಚ್.ಡಿ. ದೇವೇಗೌಡ, ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಅವರ ಭಾವಚಿತ್ರಗಳಿದ್ದ ಕಟೌಟುಗಳು ರಾರಾಜಿಸುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.