![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Apr 19, 2019, 3:19 PM IST
ಮುದ್ದೇಬಿಹಾಳ: ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ತಹಶೀಲ್ದಾರ್ ವಿನಯ್ ಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಮುದ್ದೇಬಿಹಾಳ: ಚುನಾವಣೆ ಪ್ರಚಾರದ ವೇಳೆ ಮಂಡ್ಯದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೈನಿಕರ ಬಗ್ಗೆ
ಅವಹೇಳನಕಾರಿ ಹೇಳಿಕೆ ನೀಡಿದ್ದು ಇವರನ್ನು ಕೂಡಲೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕೆಂದು ಆಗ್ರಹಿಸಿ ಮಾಜಿ ಸೈನಿಕ ಸಂಘದ ಸದಸ್ಯರು ಗುರುವಾರ ರಾಜ್ಯಪಾಲರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಬೇಜವಾಬ್ದಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು ದೇಶದ ಯೋಧರ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಅವರು ಆಡಿದ ಮಾತುಗಳು ಇಡೀ ಭಾರತೀಯ ಸೇನೆಗೆ ಅವಮಾನ ಮಾಡಿದಂತಾಗಿದೆ. ರಾಜಸ್ತಾನದ ಪ್ರತಿಷ್ಠಿತ ರಾಠೊಡ ಮನೆತನದ ಈಗಿನ ಕೇಂದ್ರ ಮಂತ್ರಿ ಕರ್ನಲ್ ರಾಜವರ್ಧನ್ ಸಿಂಗ್ ರಾಠೊಡ, ಕೇರಳದ ತ್ರಿವೆಂದ್ರಂ ಅರಸು ಮನೆತನದ ಕರ್ನಲ್ ಎಸ್.ಆನಂದಕುಮಾರ್, ಕರ್ನಾಟಕೆ ಹೆಮ್ಮೆಯ ಪುತ್ರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಂತಹ ಸಾವಿರಾರು ಪ್ರತಿಷ್ಠಿತ ಮನೆತನದವರು ಸೇನೆಯಲ್ಲಿ ಕೆಲಸ ಮಾಡಿದವರೇ ಎನ್ನವುದನ್ನು ಸಿಎಂ ತಿಳಿದುಕೊಳ್ಳಬೇಕಿತ್ತು
ಎಂದು ಮನವಿಯಲ್ಲಿ ಹೇಳಲಾಗಿದೆ.
ಭಾರತೀಯ ಸೇನೆಯ ಬಗ್ಗೆ ಆಗಲಿ ಅಥವಾ ಸೇನೆಯ ಇತಿಹಾಸದ ಬಗ್ಗೆ ಆಗಲಿ ಎಳ್ಳಷ್ಟು ಜ್ಞಾನವಿಲ್ಲದ ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದಾರೆ. ಕಂಡಕಂಡಲ್ಲಿ ಯೋಧರು, ಸೇನೆ, ವೀರ ನಾರಿಯರ ಬಗ್ಗೆ ಅಗೌರವದ ಮಾತುಗಳನ್ನಾಡುವ ಕುಮಾರಸ್ವಾಮಿ ಅವರನ್ನು ತಕ್ಷಣವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕೆಂದು ರಾಜ್ಯಪಾಲರಿಗೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಂಘದ ಅಧ್ಯಕ್ಷ ಎಸ್.ಆರ್. ಕುಲಕರ್ಣಿ, ಉಪಾಧ್ಯಕ್ಷ ನಾನಪ್ಪ ನಾಯಕ, ಪದಾ ಧಿಕಾರಿಗಳಾದ ಎಸ್.ಕೆ. ಕತ್ತಿ, ಪಿ.ಜಿ. ಬಿರಾದಾರ, ಬಿ.ಸಿ. ಹುನಗುಂದ, ಎನ್.ಆರ್. ವಿಜಾಪುರ, ಎಸ್.ಸಿ. ಹಿರೇಮಠ, ಬಿ.ಎಂ. ಬಿರಾದಾರ, ಬಸಪ್ಪ ಮಾದರ, ಎಂ.ಬಿ. ವಾಲಿಕಾರ, ಬಿ.ಎಚ್. ನಾಗರಬೆಟ್ಟ ಇತರರು ಇದ್ದರು.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.