ಜಿಗಜಿಣಗಿ-ಸುನೀತಾ ಸಮಬಲ ಹೋರಾಟ

•ಮತದಾನ ಪ್ರಮಾಣ ಅಲ್ಪ ಹೆಚ್ಚಳ•ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಕಮಲ ಅರಳುತ್ತಾ ಎಂಬುದೇ ಚರ್ಚೆ

Team Udayavani, May 6, 2019, 11:05 AM IST

6–May-6

ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ

ವಿಜಯಪುರ: 12ನೇ ಶತಮಾನದ ಕಲ್ಯಾಣ ಕ್ರಾಂತಿಯ ಶರಣರ ಪಡೆಯಲ್ಲಿದ್ದ ಮುಂಚೂಣಿ ವಚನಕಾರ ಮಡಿವಾಳ ಮಾಚಿದೇವರ ತವರು ದೇವರಹಿಪ್ಪರಗಿ ದಶಕದ ಹಿಂದೆ ವಿಧಾನಸಭೆ ಕ್ಷೇತ್ರ ಹೊಂದಿದೆ. ಇದೀಗ ನೂತನ ತಾಲೂಕಿನ ಮಾನ್ಯತೆ ಪಡೆದಿದ್ದು, ವಾಸ್ತವಿಕವಾಗಿ ಈ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳೆಯ ಇಲ್ಲಿ ಕಮಲ ಅರಳಿಸಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ ಮತದಾನದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡು ಬಂದಿಲ್ಲ. ಆದರೆ ಬಿಜೆಪಿ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಮಾತ್ರ ಮತದಾರ ನಮ್ಮ ಪರವಾಗಿದ್ದಾನೆ ಎನ್ನುತ್ತಿದ್ದಾರೆ. ಕಾರಣ ಇಲ್ಲಿನ ಮತದಾರ ಯಾರಿಗೆ ಒಲಿದಿದ್ದಾನೆ ಎಂಬುದು ಕುತೂಹಲ ಮೂಡಿಸಿದೆ.

ಈ ಹಿಂದಿನ ವಿಧಾನಸಭೆಯ ಮೂರ್ನಾಲ್ಕು ಚುನಾವಣೆಗಳನ್ನು ಗಮನಿಸಿದರೆ ಹಿಂದಿನ ದೇವರಹಿಪ್ಪರಗಿ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ. ಬಿ.ಎಸ್‌. ಪಾಟೀಲ ಸಾಸನೂರು ಈ ಕ್ಷೇತ್ರದಲ್ಲಿ ಭದ್ರ ನೆಲೆಯೂರಿ ಸಚಿವರಾಗಿದ್ದರು. ಸತತ ಎರಡು ಬಾರಿ ಕಾಂಗ್ರೆಸ್‌ ಪಕ್ಷದಿಂದ ಈ ಕ್ಷೇತ್ರದಿಂದಲೇ ಆಯ್ಕೆಯಾಗಿದ್ದ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ, ಬಿಜೆಪಿ ಸೇರಿ ಮುದ್ದೇಬಿಹಾಳ ಹಾಲಿ ಶಾಸಕರಾಗಿದ್ದಾರೆ. ಇಂಥ ಕಾಂಗ್ರೆಸ್‌ ಭದ್ರಕೋಟೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಎಸ್‌.ಪಾಟೀಲ ಸಾಸನೂರ ಅವರ ಪುತ್ರ ಸೋಮನಗೌಡ ಪಾಟೀಲ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ದೇವರಹಿಪ್ಪರಗಿ ವಿಧಾನಸಭೆ ಕ್ಷೇತ್ರದಲ್ಲಿದ್ದ 1,83,054 ಮತದಾರರಲ್ಲಿ 1,23,055 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದರಿಂದ ಶೇ. 58.36 ಮತದಾನವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ. 58.31 ಮತದಾನವಾಗಿದ್ದು, ಹಿಂದಿನ ಚುನಾವಣೆಗೆ ಹೋಲಿಸಿದರೆ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಹೀಗಾಗಿ ಕಮಲ ಪಾಳಯದ ಪ್ರಾಬಲ್ಯ ಮುಂದುವರಿದಿದೆಯೇ, ಕಾಂಗ್ರೆಸ್‌ ತನ್ನ ಭದ್ರಕೋಟೆ ಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದೆಯೇ ಎಂಬುದು ಇದೀಗ ಚರ್ಚೆಯ ವಿಷಯವಾಗಿದೆ.

ಕಳೆದ ವಿಧಾನಸಭೆ ಚುನಾವಣೆ ಫ‌ಲಿತಾಂಶದ ಅಧಾರದಲ್ಲಿ ಬಿಜೆಪಿ ನಾಯಕರು ಈ ಲೋಕಸಭೆ ಚುನಾವಣೆಯಲ್ಲಿ ಮತದಾರ ತಮ್ಮ ಪರವಾಗಿದ್ದಾನೆ ಎಂಬ ವಿಶ್ವಾಸ ಹೊಂದಿದ್ದಾರೆ. ಅಲ್ಲದೇ ಕಳೆದ ಒಂದು ವರ್ಷದ ಅವಧಿಯಲ್ಲಿ ಶಾಸಕ ಸೋಮನಗೌಡ ಅವರು ಕ್ಷೇತ್ರದ 130 ಹಳ್ಳಿಗಳಲ್ಲಿ ಸುಮಾರು ಅರ್ಧಕ್ಕೂ ಹೆಚ್ಚು ಹಳ್ಳಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಯಾವುದಾದರೂ ಯೋಜನೆ ಹಾಗೂ ಅನುದಾನ ತಂದಿದ್ದು ಇದು ಬಿಜೆಪಿ ಅಭ್ಯರ್ಥಿಗೆ ವರವಾಗಿದೆ.

ಅಲ್ಲದೇ ದೇಶದಲ್ಲೆಡೆ ಮೂಡಿರುವ ಮೋದಿ ಅಲೆಯೂ ಕ್ಷೇತ್ರದಲ್ಲಿ ಹೆಚ್ಚು ಬಲ ತಂದುಕೊಟ್ಟಿದೆ. ಯುವ ಮತದಾರರು ಹಾಗೂ ದೇಶದ ಹಿತದೃಷ್ಟಿಯಿಂದ ಸಾಮಾನ್ಯ ಮತದಾರ ಕೂಡ ಮೋದಿ ಮತ್ತೂಮ್ಮೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇಷ್ಟಕ್ಕೂ ಸಂಸದರಾಗಿ ನೇರವಾಗಿ ಹಳ್ಳಿಗಳಿಗೆ ಯೋಜನೆ ಹಾಗೂ ಕಾಮಗಾರಿ ಮಾಡುವ ಅಧಿಕಾರ ಇರುವುದಿಲ್ಲ. ಕೇಂದ್ರ ಸರ್ಕಾರ ರೂಪಿಸುವ ಯೋಜನೆಗಳ ಅನುಷ್ಠಾನದ ಹೊಣೆ ಅಯಾ ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತದ ಹೊಣೆ. ಹೀಗಾಗಿ ಜಿಲ್ಲೆಯಲ್ಲಿ ಕೇಂದ್ರದ ಯೋಜನೆಗಳನು ಸಮರ್ಥವಾಗಿ ಅನುಷ್ಠಾನ ಮಾಡಿಲ್ಲ ಎಂದಾದರೆ ಅದು ರಾಜ್ಯ ಸರ್ಕಾರ ಹಾಗೂ ಜಿಲ್ಲೆ ಸಚಿವರ ಆಡಳಿತ ವ್ಯೆಫ‌ಲ್ಯದ ಪ್ರತೀಕವೇ ಹೊರತು ಸಂಸದರ ನಿರ್ಲಕ್ಷ್ಯ ಇದರಲ್ಲೇನಿದೆ.

ವಿರೋಧಿಗಳು ಏನೇ ಸುಳ್ಳು ಹೇಳಿದರೂ ಸಾಮಾನ್ಯ ಮತದಾರನಿಗೆ ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಯವ್ಯಾಪ್ತಿ ಕನಿಷ್ಠ ಜ್ಞಾನ ಸ್ಪಷ್ಟವಾಗಿದೆ. ಕಾರಣ ಕೇಂದ್ರದ ಮೋದಿ ಸರ್ಕಾರದ ಹಲವು ಕ್ರಾಂತಿಕಾರಕ ಕಾರ್ಯಕ್ರಮಗಳಿಂದಾಗಿ ನಮ್ಮ ಭಾಗದ ಮತದಾರ ಕೂಡ ಘರ್‌ ಘರ್‌ ಮೋದಿ, ಫಿರ್‌ ಭೀ ಮೋದಿ ಎನ್ನುವ ಘೋಷಣೆಗೆ ಧ್ವನಿಯಾಗಿದ್ದಾನೆ ಎಂದು ಬಿಜೆಪಿ ನಾಯಕರು ವಿಶ್ಲೇಷಣೆ ಮಾಡುತ್ತಾರೆ.

ಆದರೆ ಕಾಂಗ್ರೆಸ್‌-ಜೆಡಿಎಸ್‌ ಮಿತ್ರ ಪಕ್ಷಗಳ ನಾಯಕರು ಮಾತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬ ಇತಿಹಾಸವನ್ನು ದೇವರಹಿಪ್ಪರಗಿ ಕ್ಷೇತ್ರದಲ್ಲಿ ಬಿಟ್ಟು ಕೊಡುವುದಿಲ್ಲ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೂಡ ಕೆಲವೇ ತೀವ್ರ ಪೈಪೋಟಿ ನೀಡಿದ್ದೇವೆ. ಅಲ್ಪಸಂಖ್ಯಾತರು ಹೆಚ್ಚಿರುವ ಈ ಕ್ಷೇತ್ರದಲ್ಲಿ ಸಹಜವಾಗಿ ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ಗೆ ಹೆಚ್ಚಿನ ಮತಗಳು ಬರಲಿವೆ. ಅಲ್ಲದೇ ದೇವರಹಿಪ್ಪರಗಿ ಹಾಗೂ ಹೂವಿನಹಿಪ್ಪರಗಿ ಬ್ಲಾಕ್‌ಗಳಲ್ಲಿ ಕಾಂಗ್ರೆಸ್‌ ಸಮರ್ಥ ಹೋರಾಟ ನೀಡಿದೆ. ಜೆಡಿಎಸ್‌ ಎರಡನೇ ಸ್ಥಾನದಲ್ಲಿತ್ತು. ಇದೀಗ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಉಭಯ ಪಕ್ಷಗಳ ನಾಯಕರ ಸಮನ್ವಯದ ಪ್ರಚಾರ ಕಾರ್ಯ ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇರಿಸಿಕೊಂಡಿದ್ದಾರೆ.

ಇದಲ್ಲದೇ ಎರಡು ಅವಧಿಗೆ ಸಂಸದರಾಗಿ, ಕಳೆದ ಕೆಲವು ವರ್ಷಗಳಿಂದ ಮೋದಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರೂ ರಮೇಶ ಜಿಗಜಿಣಗಿ ಅವರು ಕನಿಷ್ಠ ಕುಡಿಯುವ ನೀರಿನ ಇಲಾಖೆ ಹೊಂದಿದ್ದರೂ ನೀರಿನ ಸಮಸ್ಯೆ ನೀಗಿಸಲು ಯಾವುದೇ ಯೋಜನೆ ರೂಪಿಸುವಲ್ಲಿ ವಿಫ‌ಲವಾಗಿದ್ದಾರೆ. ಅಧಿಕಾರ ದಲ್ಲಿದ್ದಾಗ ಏನನ್ನೂ ಮಾಡದ ಜಿಗಜಿಣಗಿ ಅವರು ಚುನಾವಣೆಯಲ್ಲಿ ನನ್ನ ಮುಖ ನೋಡಬೇಡಿ, ಮೋದಿ ಮುಖ ನೋಡಿ ಮತ ಹಾಕಿ ಎನ್ನುವ ಮೂಲಕ ತಮ್ಮ ವ್ಯೆಫ‌ಲ್ಯವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ದೇವರಹಿಪ್ಪರಗಿ ಕ್ಷೇತ್ರದ ಮತದಾರ ಅಭಿವೃದ್ಧಿ ಹೀನ ಬಿಜೆಪಿಯನ್ನು ಬೆಂಬಲಿಸಲಾರ ಎಂಬ ಅದಮ್ಯ ವಿಶ್ವಾಸ ಮಿತ್ರ ಪಕ್ಷಗಳ ನಾಯಕರಿಗೆ ಇದೆ.

ಹೀಗಾಗಿ ಕಾಂಗ್ರೆಸ್‌ ಭದ್ರಕೋಟೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಿರುವ ಇಲ್ಲಿನ ಮತದಾರ, ಈ ಲೋಕಸಭೆ ಚುನಾವಣೆಯಲ್ಲೂ ಕೇಸರಿ ಪಾಳೆಯಕ್ಕೆ ಒಲಿದಿದ್ದಾನೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ದೇವರಹಿಪ್ಪರಗಿ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಲ್ಲೋ ವ್ಯತ್ಯಾಸವಾಗಿ ಸೋತಿದ್ದೇವೆ. ಆದರೆ ಈ ಲೋಕಸಭೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜೊತೆಯಾಗಿದ್ದು, ಮಿತ್ರ ಪಕ್ಷಗಳ ಅಭ್ಯರ್ಥಿಗೆ ಹೆಚ್ಚಿನ ಮತಗಳ ಅಂತರ ದೊರೆಯಲಿದೆ. ಮೋದಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳದ ಕಾರಣ ಆಡಳಿತ ವಿರೋಧಿ ಅಲೆ ಇದ್ದು, ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿಗೆ ಈ ಕ್ಷೇತ್ರದಲ್ಲಿ ಕನಿಷ್ಠ 10 ಸಾವಿರ ಮತಗಳ ಅಂತರ ದೊರೆಯುವ ವಿಶ್ವಾಸವಿದೆ.
ನಿಂಗನಗೌಡ ಪಾಟೀಲ,
ಅಧ್ಯಕ್ಷರು, ದೇವರಹಿಪ್ಪರಗಿ ಬ್ಲಾಕ್‌ ಕಾಂಗ್ರೆಸ್‌

ಬಿಜೆಪಿ ಅಭ್ಯರ್ಥಿ ಸರಳ, ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದು, ಅಧಿಕಾರದ ದುರ್ಬಳಕೆ ಮಾಡಿಕೊಂಡಿಲ್ಲ. ಬದಲಾಗಿ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ಹಲವು ಕ್ರಾಂತಿಕಾರಕ ಯೋಜನೆಗಳನ್ನು ರೂಪಿಸಿದೆ. ಇದಲ್ಲದೇ ನಮ್ಮ ಶಾಸಕ ಸಾಸನೂರು ಸೋಮನಗೌಡ ಪಾಟೀಲ ಅವರು ಒಂದೇ ವರ್ಷದಲ್ಲಿ ಬಹುತೇಕ ಹಳ್ಳಿಗಳಿಗೆ ಹಲವು ಯೋಜನೆಗಳಿಗೆ ಅನುದಾನ ತಂದಿದ್ದಾರೆ.
•ಚಿದಾನಂದ ಹಚ್ಯಾಳ
ಅಧ್ಯಕ್ಷರು, ದೇವರಹಿಪ್ಪರಗಿ ಬಿಜೆಪಿ ಮಂಡಲ

ಜಿ.ಎಸ್‌. ಕಮತರ

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.