ಮತ್ತೆ ಜಿಗಜಿಣಗಿ ಹೊತ್ತು ಮೆರೆದ ಮತದಾರ ಪ್ರಭುಗಳು
Team Udayavani, May 24, 2019, 1:25 PM IST
ವಿಜಯಪುರ: ಅದೃಷ್ಟವಂತ ರಾಜಕೀಯ ನಾಯಕ ಎಂದೇ ಜಿಲ್ಲೆಯಲ್ಲಿ ಜನಜನಿತವಾಗಿರುವ ಕೇಂದ್ರ ಸಚಿವ ರಮೇಶ ಜಿಗಜಿಣಗಿ ವಿಜಯಪುರ ಕ್ಷೇತ್ರದಲ್ಲಿ ಮೂರನೇ ಬಾರಿಗೆ ವಿಜಯ ಸಾಧಿಸಿದ್ದಾರೆ. ಹ್ಯಾಟ್ರಿಕ್ ಗೆಲುವು ತಂದುಕೊಟ್ಟಿರುವ ಬಸವನಾಡಿನ ಮತದಾರ ಮತ್ತೂಮ್ಮೆ ಹೆಗಲ ಮೇಲೆ ಹೊತ್ತು ಮೆರೆಸಿದ್ದಾನೆ. ಜಿಗಜಿಣಗಿ ಗೆಲುವು ಹಾಗೂ ಕೇಂದ್ರದಲ್ಲಿ ಮತ್ತೂಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರುತ್ತಿರುವ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಜಿಲ್ಲೆಯಾದ್ಯಂತ ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ನಗರದ ಸೈನಿಕ ಶಾಲೆಯಲ್ಲಿ ಬಹುತೇಕ ಜಿಲ್ಲೆಯ ಪ್ರಮುಖ ಎಲ್ಲ ಚುನಾವಣೆಗಳ ಮತ ಎಣಿಕೆ ನಡೆಯುತ್ತವೆ. ಹಿಂದೆಲ್ಲ ಮತ ಎಣಿಕೆ ದಿನ ಬೆಳಗಿನಿಂದಲೇ ವಿವಿಧ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳ ಬೆಂಬಲಿಗರು ಹತ್ತಾರು ಸಾವಿರ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಮುಂದೆ ಜಮಾಯಿಸುತ್ತಿದ್ದರು. ಆದರೆ ಗುರುವಾರ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಮಧ್ಯಾಹ್ನ 12 ಗಂಟೆವರೆಗೂ ಯಾವುದೇ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳ ಬೆಂಬಲಿಗರು ಕಾಣಿಸಿಕೊಳ್ಳದೇ ಅಚ್ಚರಿ ಮೂಡಿಸಿದ್ದರು.
ಚುನಾವಣೆಯ ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದ್ದ ಕಾರಣ ಎಣಿಕೆ ಕೇಂದ್ರದಿಂದ ಬರುತ್ತಿದ್ದ ಏಜೆಂಟರ ಬಳಿಗೆ ಧಾವಿಸಿ ಹೋಗಿ, ಕುತೂಹಲದಿಂದ ಫಲಿತಾಂಶಗಳ ಬಗ್ಗೆ ಮಾಹಿತಿ ಪಡೆಯುವುದು ಸಾಮಾನ್ಯವಾಗಿತ್ತು.
ಇನ್ನು ಮತ ಎಣಿಕೆ ಕೇಂದ್ರದಲ್ಲೂ ಏನೇನೋ ನೆಪ ಹೇಳಿಕೊಂಡು, ಕೊರಳಲ್ಲಿ ಯಾರ್ಯಾರದೋ ಪಾಸ್ ಹಾಕಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಹಾಗೂ ಮಾಧ್ಯಮ ಕೇಂದ್ರಕ್ಕೆ ನುಗ್ಗುತ್ತಿದ್ದ ರಾಜಕೀಯ ಕಾರ್ಯಕರ್ತರು ಈ ಬಾರಿ ಮತ ಎಣಿಕೆ ಕೇಂದ್ರದಲ್ಲೂ ಕಾಣಿಸಿಕೊಳ್ಳಲಿಲ್ಲ. ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿದ್ದ ನಾಯಕರು ಹಾಗೂ ಏಜೆಂಟರನ್ನು ಬಿಟ್ಟರೆ ಇಡಿ ಮತ ಎಣಿಕೆ ಕೇಂದ್ರ ನಿರುಮ್ಮಳ ಸ್ಥಿತಿಯಲ್ಲಿ ಪ್ರಶಾಂತವಾಗಿತ್ತು. ಹಾಗೇ ನೋಡಿದರೆ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗಿಂತ ಖಾಕಿ ಸರ್ಪಗಾವಲಿನ ಸಂಖ್ಯೆಯೇ ಹೆಚ್ಚಿಗೆ ಕಂಡು ಬಂತು.
ಇನ್ನೇನು ಮತ ಎಣಿಕೆ ಮುಕ್ತಾಯದ ಹಂತಕ್ಕೆ ಬಂದ ಸಂದರ್ಭದಲ್ಲಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ವಿಜಯ ಸಾಧಿಸುವುದು ಖಚಿತವಾಗಿತ್ತು. ಈ ಹಂತದಲ್ಲಿ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಬಿಜೆಪಿ ಧ್ವಜಗಳನ್ನು ಹಿಡಿದು, ಬೈಕ್ ಏರಿ ಜಯ ಘೋಷ ಹಾಕುತ್ತ ಮತ ಎಣಿಕೆ ನಡೆಯುತ್ತಿದ್ದ ಸೈನಿಕ ಶಾಲೆ ಮುಂದೆ ಜಮಾಯಿಸಿದ್ದರಿಂದ ಅಥಣಿ ಮಾರ್ಗದಲ್ಲಿ ಕೆಲಸ ಕಾಲ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವಂತಾಯಿತು.
ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿ ಇರುವ ಜೊತೆಗೆ, ಪೊಲೀಸ್ ಬಿಗಿ ಬಂದೋಬಸ್ತ್ ಕಾರಣಕ್ಕೆ ಸಂಭ್ರಮದಲ್ಲಿದರೂ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸದ್ದು ಕೇಳಿಸಲು ಅವಕಾಶ ದೊರೆಯಲಿಲ್ಲ. ಆದರೆ ಜಿಗಜಿಣಗಿ ಅವರು ವಿಜಯ ಸಾಧಿಸುತ್ತಲೇ ಬಿಜೆಪಿ ಕೆಲ ನಾಯಕರು ಗುಲಾಲಿನೊಂದಿಗೆ ಕೇಂದ್ರಕ್ಕೆ ಆಗಮಿಸಿ ಬಣ್ಣ ಎರಚಿಕೊಂಡು ಸಂಭ್ರಮಿಸಿದರು.
ಮತ ಎಣಿಕೆ ಅರ್ಧ ಪೂರ್ಣಗೊಳ್ಳುವ ಹಂತದಲ್ಲಿ ಮತ ಎಣಿಕೆ ಕೇಂದ್ರದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಡಾ| ಸುನೀತಾ ಚವ್ಹಾಣ ಒಬ್ಬರೇ ಬೇಸರದ ಮುಖ ಮಾಡಿಕೊಂಡು ಕುಳಿತಿದ್ದರು. ಸೋಲು ಖಚಿತವಾಗುತ್ತಲೇ ಒಂಟಿಯಾಗಿಯೇ ಎಣಿಕೆ ಕೇಂದ್ರದಿಂದ ಹೊರ ನಡೆದರು.
ಆದರೆ ವಿಜೇತ ಅಭ್ಯರ್ಥಿ-ಕೇಂದ್ರ ಸಚಿವ ರಮೇಶ ಜಿಗಜಿಣಗಿ ಮಾತ್ರ ಮತ ಎಣಿಕೆ ಪೂರ್ಣಗೊಂಡ ಬಳಿಕವೂ ಪಕ್ಷದ ಶಾಸಕರಾದ ಆರುಣ ಶಹಾಪುರ, ಸೋಮನಗೌಡ ಪಾಟೕಲ, ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ, ವಿಜುಗೌಡ ಪಾಟೀಲ ಸೇರಿದಂತೆ ಇತರೆ ಗಣ್ಯರೊಂದಿಗೆ ಮತ ಎಣಿಕೆ ಕೇಂದ್ರದಲ್ಲೇ ಠಿಕಾಣಿ ಹೂಡಿದ್ದರು.
ಗೆಲುವಿನ ಸಂಭ್ರಮದಲ್ಲಿದ್ದ ಅವರು ಮಾಧ್ಯಮ ಕೇಂದ್ರಕ್ಕೆ ಬಂದು ವಿಜಯದ ಸಂಭ್ರಮ ಹಂಚಿಕೊಂಡರು. ನಂತರ ಸುಮಾರು ಒಂದು ಗಂಟೆ ಕಾಲ ತಮ್ಮ ಪಕ್ಷದ ಗಣ್ಯರೊಂದಿಗೆ ಮಾಧ್ಯಮ ಕೇಂದ್ರದ ಹೊರ ಭಾಗದ ಮೆಟ್ಟಿಲುಗಳ ಮೇಲೆ ಕುಳಿತು ದೇಶದ ಚುನಾವಣೆ ಫಲಿತಾಂಶದ ಕುರಿತು ಹರಟಿದರು.
ಇದಾದ ಬಳಿಕ ಮತ ಎಣಿಕೆ ಕೇಂದ್ರದಿಂದ ಹೊರ ಬಂದ ರಮೇಶ ಜಿಗಜಿಣಗಿ ಅವರನ್ನು ಹೆಗಲ ಮೇಲೆ ಹೊತ್ತು ಸಂಭ್ರಮ ಆಚರಿಸಿದ ಬಿಜೆಪಿ ಕಾರ್ಯಕರ್ತರು, ನಂತರ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆದೊಯ್ದರು. ಮಹಾತ್ಮ ಗಾಂಧೀಜಿ ವೃತ್ತದ ಮಾರ್ಗದಲ್ಲಿರುವ ಚುನಾವಣಾ ಪ್ರಚಾರ ಕಚೇರಿ, ನಂತರ ಭೂತನಾಳ ಕೆರೆ ಬಳಿ ಇರುವ ತಮ್ಮ ತೋಟದ ಮನೆಯ ಆವರಣದಲ್ಲಿ ಕಾರ್ಯಕರ್ತರೊಂದಿಗೆ ಪರಸ್ಪರ ಬಣ್ಣ ಎರಚಿಕೊಂಡು, ಸಿಹಿಸಿ ಹಂಚಿ ಸಂಭ್ರಮಿಸಿದರು.
ಮತ ಎಣಿಕೆ ಕೇಂದ್ರದಲ್ಲೂ ಏನೇನೋ ನೆಪ ಹೇಳಿಕೊಂಡು, ಕೊರಳಲ್ಲಿ ಯಾರ್ಯಾರದೋ ಪಾಸ್ ಹಾಕಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಹಾಗೂ ಮಾಧ್ಯಮ ಕೇಂದ್ರಕ್ಕೆ ನುಗ್ಗುತ್ತಿದ್ದ ರಾಜಕೀಯ ಕಾರ್ಯಕರ್ತರು ಈ ಬಾರಿ ಮತ ಎಣಿಕೆ ಕೇಂದ್ರದಲ್ಲೂ ಕಾಣಿಸಿಕೊಳ್ಳಲಿಲ್ಲ. ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿದ್ದ ನಾಯಕರು ಹಾಗೂ ಏಜೆಂಟರನ್ನು ಬಿಟ್ಟರೆ ಇಡಿ ಮತ ಎಣಿಕೆ ಕೇಂದ್ರ ನಿರುಮ್ಮಳ ಸ್ಥಿತಿಯಲ್ಲಿ ಪ್ರಶಾಂತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.