ಮಾಸ್ಟರ್‌ಪ್ಲ್ರಾನ್ ಸಂತ್ರಸ್ತರಿಗೆ ಸೂಕ್ತ ಪರಿಹಾರ
Team Udayavani, Aug 26, 2019, 11:17 AM IST
ವಿಜಯಪುರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಚಾಲನೆ ನೀಡಿದರು.
ವಿಜಯಪುರ: ನಗರದಲ್ಲಿ ಮಾಸ್ಟರ್‌ಪ್ಲ್ರಾನ್ ಕಾಮಗಾರಿಯಲ್ಲಿ ಮನೆ, ನಿವೇಶನ, ಅಂಗಡಿ ಹಾಗೂ ಬಯಲು ಸ್ಥಳ ಕಳೆದುಕೊಳ್ಳುವ ಪ್ರತಿಯೊಬ್ಬ ಸಂತ್ರಸ್ತರಿಗೂ ಸರ್ಕಾರ ನಿಗದಿ ಮಾಡಿರುವ ಪರಿಹಾರ ವಿತರಿಸುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.
ನಗರದ ವಾರ್ಡ್ ನಂ. 8 ರಾಮಪ್ರಸಾದ ಗಲ್ಲಿಯ ಮರಗಮ್ಮ ದೇವಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ವಿಜಯಪುರ ನಗರದ ಶಿವಾಜಿ ಮಹಾರಾಜರ ವೃತ್ತದಿಂದ ಅಥಣಿ ರಿಂಗ್ ರಸ್ತೆವರೆಗೆ ಮಾಸ್ಟರ್‌ಪ್ಲ್ಯಾನ್ ಕಾಮಗಾರಿಗೆ ಈಗಾಗಲೇ ಸರ್ಕಾರ ಅನುಮೋದನೆ ನೀಡುವುದರ ಜೊತೆಗೆ ಅನುದಾನವನ್ನೂ ಒದಗಿಸಿದೆ. ಅಥಣಿ ರಿಂಗ್ ರಸ್ತೆಯಿಂದ ಸಿಂದಗಿ ನಾಕಾವರೆಗೆ ಮಾಸ್ಟ್‌ರ್‌ಪ್ಲ್ಯಾನ್ ಮಾಡಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗಿದೆ ಎಂದರು.
ಶೀಘ್ರವೇ ನಗರದಲ್ಲಿ ನಿರ್ಮಿಸುತ್ತಿರುವ ಆಶ್ರಯ ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುತ್ತದೆ. ಅಟಲ್ ಬಿಹಾರಿ ವಾಜಪೇಯಿ ವಸತಿ ಯೋಜನೆ ಅಡಿಯಲ್ಲಿ 1.80 ಲಕ್ಷ ರೂ.ನಲ್ಲಿ ಮನೆ ಹಂಚಿಕೆ ಮಾಡಲಾಗುತ್ತಿದೆ. ಸ್ವಂತ ನಿವೇಶನ ಹೊಂದಿದವರಿಗೆ ಕಟ್ಟಡ ನಿರ್ಮಿಸಲು ಹಣಕಾಸಿನ ನೆರವು ನೀಡುವ ಯೋಜನೆ ಸಹ ಚಾಲ್ತಿಯಲ್ಲಿದೆ. ಈಗಾಗಲೇ ಈ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ತಲುಪಿಸುವ ಉದ್ದೇಶದಿಂದ ಕಚೇರಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ. ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಅವಶ್ಯಕ ದಾಖಲೆ ಹಾಗೂ ಯೋಜನೆಯ ಸಮಗ್ರ ಮಾಹಿತಿ ಪಡೆಯಬೇಕು. ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಲು ಹಾಗೂ ಸೌಲಭ್ಯಗಳನ್ನು ತಲುಪಿಸಲು ನಗರ ಶಾಸಕರ ಕಾರ್ಯಾಲಯ ಸದಾ ಸೇವೆಗೆ ಸಿದ್ಧವಾಗಿದೆ ಎಂದರು.
ಇನ್ನೂ ರಾಮಪ್ರಸಾದ ಗಲ್ಲಿ ಸೇರಿದಂತೆ ಎಲ್ಲ ಬಡಾವಣೆಗಳ ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ನಗರದ ಸರ್ವತೋಮುಖ ಪ್ರಗತಿಯೇ ಆದ್ಯ ಗುರಿ ಎಂದರು. ಇದಲ್ಲದೇ ನಗರದ ಕಲಾಲ್ ಗಲ್ಲಿಯ ಸೂರ್ಯವಂಶಿಯ ಕ್ಷತ್ರಿಯ ಕಲಾಲ್ ಸಮಾಜದ ಅಂಬಾಭವಾನಿ ದೇವಾಲಯದಲ್ಲಿ ಶಾಸಕರ ನಿಧಿಯಲ್ಲಿ 5 ಲಕ್ಷ ರೂ. ಮೌಲ್ಯದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಮುಖಂಡರಾದ ಪರಶುರಾಮ ರಜಪೂತ, ಉಮೇಶ ವಂದಾಲ, ವಿಜಯಕುಮಾರ ಚವ್ಹಾಣ, ಘನಶ್ಯಾಮ್ ಪಾಂಡೆ, ಕಲಾಲ್ ಸಮಾಜದ ಅಧ್ಯಕ್ಷರಾದ ನಗರಸಭೆ ಮಾಜಿ ಅಧ್ಯಕ್ಷ ಗಜಾನನ ಚೌಧರಿ, ಶಿವು ಗುಡ್ಯಾಳ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.