ವಿದೇಶಿ ಹಾಲು ಉತ್ಪನ್ನ ಮುಕ್ತ ಪ್ರವೇಶಕ್ಕೆ ವಿರೋಧ

ಆಕಳುಗಳ ಸಮೇತ ಅವಳಿ ಜಿಲ್ಲೆ ರೈತರ ಬೃಹತ್‌ ಪ್ರತಿಭಟನಾ ರ್ಯಾಲಿಡೈರಿ ವ್ಯವಸ್ಥೆಗೆ ದೊಡ್ಡ ಹೊಡೆತ

Team Udayavani, Oct 13, 2019, 3:58 PM IST

13-October-14

ವಿಜಯಪುರ: ಮುಕ್ತ ವ್ಯಾಪಾರ ಒಪ್ಪಂದದ ವ್ಯಾಪ್ತಿಯಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳಿಗೆ ವಿನಾಯ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕರ ಒಕ್ಕೂಟದ ನೇತೃತ್ವದಲ್ಲಿ ಆಕಳುಗಳ ಸಮೇತ ರೈತರು ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ವಿಜಯಪುರ- ಬಾಗಲಕೋಟೆ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸಂಭಾಜಿ ಮಿಸಾಳೆ ಮಾತನಾಡಿ, ಮುಕ್ತ ವ್ಯಾಪಾರ ಒಪ್ಪಂದದ ವ್ಯಾಪ್ತಿಯಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳಿಗೆ ವಿನಾಯ್ತಿ ನೀಡದೇ ಹೋದರೆ ನಮ್ಮ ದೇಶದ ರೈತರಿಗೆ ದೊಡ್ಡ ಆಪತ್ತು ಎದುರಾಗುತ್ತದೆ. ಮುಕ್ತ ವ್ಯಾಪಾರ ಒಪ್ಪಂದದಡಿ ಡೈರಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.

ಸರ್ಕಾರದ ಈ ಚಿಂತನೆ ಕಾರ್ಯರೂಪಕ್ಕೆ ಬಂದರೆ ಸ್ಥಳೀಯ ಹಾಲು ಉತ್ಪಾದಕ ವರ್ಗಕ್ಕೆ ಹಾಗೂ ದೇಶದ ಡೈರಿ ವ್ಯವಸ್ಥೆಗೆ ಬಹುದೊಡ್ಡ ಹೊಡೆತ ಬೀಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಭಾರತದಲ್ಲಿ ಹೈನುಗಾರಿಕೆ ಬಹುದೊಡ್ಡ ವ್ಯವಸ್ಥೆಯಾಗಿದ್ದು, ಅನೇಕರು ಈ ಉದ್ಯಮ ನೆಚ್ಚಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮುಕ್ತ ವ್ಯಾಪಾರದಡಿ ಕಡಿಮೆ ದರದಲ್ಲಿ ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಸಾಧ್ಯತೆ ಇದೆ. ಹೀಗಾಗಿ ದೇಶಿಯ ಉತ್ಪನ್ನಗಳ ಬೇಡಿಕೆ ಕುಸಿಯುತ್ತಿದೆ. ಮುಖ್ಯವಾಗಿ ಪ್ರಾರಂಭದಲ್ಲಿ ವಿದೇಶಿ ಕಂಪನಿಗಳು ಕಡಿಮೆ ದರದಲ್ಲಿ ಹಾಲಿನ ಉತ್ಪನ್ನಗಳನ್ನು ಒದಗಿಸಿ, ಕಾಲಕ್ರಮೇಣ ದೇಶಿಯ ಉತ್ಪನ್ನಗಳನ್ನು ನಶಿಸಿ ಹೋಗುವ ಸಾಧ್ಯತೆ ಇದೆ. ಆಗ ವಿದೇಶಿ ಆಮದಿನ ಮೇಲೆ ಹೆಚ್ಚಿನ ಅವಲಂಬನೆಯಾಗುತ್ತದೆ. ಒಂದೆಡೆ ದರ ಹೆಚ್ಚಳದಿಂದ ಗ್ರಾಹಕರು ಹಾಗೂ ಉದ್ಯೋಗ ಕಳೆದುಕೊಂಡಿದ್ದರಿಂದಾಗಿ ರೈತರು ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ವಿದೇಶಿ ಕಂಪನಿಗಳು ದರವನ್ನು ಹೆಚ್ಚಿಗೆ ಮಾಡುತ್ತವೆ ಎಂದು ವಿದೇಶಿ ಹಾಲು ಉತ್ಪನ್ನಗಳ ಪ್ರವೇಶದಿಂದಾಗುವ ಅಪಾಯಗಳನ್ನು ವಿವರಿಸಿದರು.

ಮೇಕ್‌ ಇನ್‌ ಇಂಡಿಯಾ ಸಾರ್ಥಕವಾದರೆ ಮೊದಲು ದೇಶಿಯ ಹಾಲು ಉತ್ಪಾದನಾ ವ್ಯವಸ್ಥೆ ರಕ್ಷಣೆಯಾಗಬೇಕಿದೆ. ಮುಕ್ತ ಒಪ್ಪಂದಕ್ಕೆ ಅವಕಾಶ ನೀಡಿದಲ್ಲಿ ಹೈನುಗಾರರ ಆದಾಯ ಅರ್ಧಕ್ಕಿಳಿಯುವ ಅಪಾಯವಿದ್ದು, ಈ ವ್ಯವಸ್ಥೆ ಜಾರಿಗೊಂಡರೆ ಭಾರತೀಯ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯ ಸಾಧ್ಯವೇ ಆಗುವುದಿಲ್ಲ ಎಂದರು.

ಕೂಡಲೇ ಹಾಲು ಉತ್ಪನ್ನಗಳಿಗೆ ಮುಕ್ತ ವ್ಯಾಪಾರದಡಿ ವಿನಾಯ್ತಿ ನೀಡಿ ಹೈನುಗಾರರ ಸ್ವಾವಲಂಬನೆ, ಉದ್ಯೋಗ ಭದ್ರತೆಗೆ ಆದ್ಯತೆ ಮಾಡಲು ಒತ್ತಾಯಿಸಿದರು. ಕೆಂಎಎಫ್ ನಿರ್ದೇಶಕ ಶ್ರೀಶೈಲಗೌಡ ಪಾಟೀಲ ನಿಡೋಣಿ, ಎಸ್‌.ಜೆ. ಹಂಡಿ, ಜಿ.ಎಸ್‌.ಚಲವಾದಿ, ಎಸ್‌.ಎ. ಕರಪಟ್ಟಿ, ಜಿ.ಎಂ. ಆದಬಸಪ್ಪಗೋಳ, ಎ.ಕೆ. ಹಳ್ಳೂರ, ಐ.ಎಸ್‌. ಕರಿಗೌಡರ, ಎಂ.ಆರ್‌. ಹನಗಂಡಿ, ಎಸ್‌.ಎಲ್‌. ತಳೇವಾಡ ಸೇರಿದಂತೆ ಅವಳಿ ಜಿಲ್ಲೆಗಳ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.