1ರಲ್ಲಿ ಕೈಗೆ ಅಧಿಕಾರ, 2ರಲ್ಲಿ ಅತಂತ್ರ
ಕಾಂಗ್ರೆಸ್ ಮೇಲುಗೈ, ಪಕ್ಷೇತರರಿಗೆ ದ್ವಿತೀಯ-ಬಿಜೆಪಿಗೆ 3ನೇ ಸ್ಥಾನ 69 ವಾರ್ಡ್- ಕಾಂಗ್ರೆಸ್ 24, ಪಕ್ಷೇತರರು 22, ಬಿಜೆಪಿ 20, ಜೆಡಿಎಸ್ 3
Team Udayavani, Jun 1, 2019, 10:40 AM IST
•ಜಿ.ಎಸ್. ಕಮತರ
ವಿಜಯಪುರ: ಜಿಲ್ಲೆಯ 3 ಪುರಸಭೆಗಳಿಗೆ ಮೇ 29ರಂದು ಚುನಾವಣೆ ನಡೆದಿದ್ದು ಶುಕ್ರವಾರ ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಮೂರರಲ್ಲಿ ಒಂದು ಪುರಸಭೆಯಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಏರಲು ಸನ್ನದ್ಧವಾಗಿದೆ. ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಮತ್ತೂಂದರಲ್ಲಿ ಕಾಂಗ್ರೆಸ್-ಬಿಜೆಪಿ ಅಧಿಕಾರಕ್ಕೆ ಬರಲು ಜೆಡಿಎಸ್ ಹಾಗೂ ಪಕ್ಷೇತರ ಸಹಕಾರ ಪಡೆಯಲೇಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹಿಂದಿನಂತೆ ಒಂದು ಪುರಸಭೆಯಲ್ಲಿ ಪಕ್ಷೇತರರು ತಮ್ಮ ಪ್ರಾಬಲ್ಯ ಮುಂದುವರಿಸಿದ್ದು, ಇಲ್ಲಿಯೂ ಅತಂತ್ರ ಪರಿಸ್ಥಿತಿ ಎದುರಾಗಿದೆ.
3 ಪುರಸಭೆಗಳ 69 ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನ ಗಳಿಸಿದ್ದರೆ, ಬಿಜೆಪಿ 20 ಸ್ಥಾನ ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. 22 ಸ್ಥಾನ ಪಡೆದಿರುವ ಪಕ್ಷೇತರರ ಹಿಂದಿನಂತೆ ತಮ್ಮ ಪ್ರಾಬಲ್ಯ ಮುಂದುವರಿಸಿದ್ದು, ರಾಜಕೀಯ ಪಕ್ಷಗಳನ್ನು ಹಿಂದಿಕ್ಕಿ ಸಂಖ್ಯಾ ಬಲದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಜೆಡಿಎಸ್ ಕೇವಲ 3 ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ಮಾತ್ರ ತೃಪ್ತಿ ಪಟ್ಟಿದೆ.
ಕಳೆದ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 4 ಸ್ಥಾನ ಹೆಚ್ಚಿಸಿಕೊಂಡಿದ್ದರೆ, 18 ಸ್ಥಾನ ತನ್ನದಾಗಿಸಿಕೊಂಡಿದ್ದ ಬಿಜೆಪಿ ಈ ಬಾರಿ 1 ಸ್ಥಾನ ಮಾತ್ರ ಹೆಚ್ಚು ಗೆಲ್ಲಲು ಸಾಧ್ಯವಾಗಿದೆ. ಕಳೆದ ಬಾರಿ 4 ಸ್ಥಾನ ಗೆದ್ದಿದ್ದ ಜೆಡಿಎಸ್ 1 ಸ್ಥಾನ ಕಳೆದುಕೊಳ್ಳುವ ಮೂಲಕ ಈ ಬಾರಿ ತನ್ನ ಶಕ್ತಿ ಕಳೆದುಕೊಂಡಿದೆ. ಹಿಂದಿನ ಚುನಾವಣೆಯಲ್ಲಿ ಈ ಮೂರು ಪುರಸಭೆ ವ್ಯಾಪ್ತಿಯಲ್ಲಿ 25 ಸ್ಥಾನ ಗೆದ್ದಿದ್ದ ಪಕ್ಷೇತರರು, ಈ ಬಾರಿ 3 ಸ್ಥಾನ ಕಳೆದುಕೊಂಡು 22 ಸ್ಥಾನ ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
ತಾಳಿಕೋಟೆ ಪುರಸಭೆಯ 23 ಸ್ಥಾನಗಳಲ್ಲಿ 16ರಲ್ಲಿ ವಿಜಯ ಸಾಧಿಸಿರುವ ಪಕ್ಷೇತರರು, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ತಲಾ 3 ಸ್ಥಾನ ಬಿಟ್ಟುಕೊಟ್ಟಿದ್ದರೆ, ಜೆಡಿಎಸ್ ಈ ಬಾರಿ 1 ಕ್ಷೇತ್ರದಲ್ಲಿ ಖಾತೆ ತೆರೆದಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪಕ್ಷೇತರರು 3 ಸ್ಥಾನ ಕಳೆದುಕೊಂಡಿದ್ದಾರೆ. ಬಿಜೆಪಿ 2 ಸ್ಥಾನ ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ತನ್ನ ಸ್ಥಾನಗಳನ್ನು ಉಳಿಸಿಕೊಂಡಿದೆ.
ತಾಳಿಕೋಟೆ ಪುರಸಭೆ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹಾಗೂ ಕಾಂಗ್ರೆಸ್ ಮಾಜಿ ಸಚಿವ ಸಿ.ಎಸ್. ನಾಡಗೌಡ ಇವರ ಪ್ರತಿಷ್ಠೆಯನ್ನು ಒರೆಗೆ ಹಚ್ಚಿದ್ದರೂ ಇಬ್ಬರಿಗೂ ಇಲ್ಲಿ ಪಕ್ಷೇತರರು ಮತ್ತೂಮ್ಮೆ ನೆಲೆ ಇಲ್ಲದಂತೆ ಮಾಡಿದ್ದಾರೆ.
23 ಸದಸ್ಯ ಬಲದ ಬಸವನಬಾಗೇವಾಡಿ ಪುರಸಭೆಯಲ್ಲಿ ಕಾಂಗ್ರೆಸ್ 13 ಸ್ಥಾನಗಳಲ್ಲಿ ವಿಜಯ ಸಾಧಿಸಿದ್ದು, ಕಳೆದ ಬಾರಿಗಿಂತ 3 ಸ್ಥಾನ ಹೆಚ್ಚಿಗೆ ಗೆಲ್ಲುವ ಮೂಲಕ ಸರಳ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲು ಸನ್ನದ್ಧವಾಗಿದೆ. ಬಿಜೆಪಿ 6 ಸ್ಥಾನಗಳನ್ನು ಮಾತ್ರ ಗೆಲ್ಲಲು ಶಕ್ತವಾಗಿದ್ದು, ಹಿಂದಿಗಿಂತ 3 ಸ್ಥಾನಗಳನ್ನು ಕಳೆದುಕೊಂಡಿದೆ. ಪಕ್ಷೇತರರು ಹಿಂದಿನಂತೆ 4 ಸ್ಥಾನಗಳಲ್ಲಿ ವಿಜಯ ಸಾಧಿಸಿ ತಮ್ಮ ಶಕ್ತಿಯನ್ನು ಮತ್ತೆ ಉಳಿಸಿಕೊಂಡಿದ್ದಾರೆ.
ಅರೋಗ್ಯ ಸಚಿವ ಶಿವಾನಂದ ಪಾಟೀಲ ಅವರ ಪ್ರಭಾವದಲ್ಲಿರುವ ಬಸವಜನ್ಮಭೂಮಿ ಬಸವನಬಾಗೇವಾಡಿ ಮತದಾರರು ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡುವ ಮೂಲಕ ಹಿಂದಿನ ಆತಂತ್ರ ಸ್ಥಿತಿಗೆ ತೆರೆ ಎಳೆದಿದ್ದಾರೆ. ವಿಧಾನಸಭೆ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿದ್ದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಲೋಕಸಭೆ ಚುನಾವಣೆ ಹಂತದಲ್ಲಿ ಮಾತೃ ಪಕ್ಷ ಬಿಜೆಪಿಗೆ ಮರಳಿದರೂ ಬಿಜೆಪಿಗೆ ಗೆಲುವು ತಂದುಕೊಡಲು ಸಾಧ್ಯವಾಗಿಲ್ಲ. ಶಿವಾನಂದ ಪಾಟೀಲ ಅವರ ರಾಜಕೀಯ ಎದುರಾಳಿ ಜೆಡಿಎಸ್‌ನ ಆಪ್ಪುಗೌಡ ಪಾಟೀಲ ಅವರಿಗೂ ಈ ಪುರಸಭೆಯಲ್ಲಿ ಒಂದೇ ಒಂದು ಸ್ಥಾನದಲ್ಲಿ ಖಾತೆ ತೆರೆಯಲು ಆಗಿಲ್ಲ.
ಇಂಡಿ ಪುರಸಭೆಯಲ್ಲಿ 23 ಸದಸ್ಯ ಬಲ ಇದ್ದು, ಬಿಜೆಪಿ 11 ಸ್ಥಾನ ಗೆದ್ದು ಬೀಗಿದರೂ ಆಧಿಕಾರಕ್ಕೇರಲು ಬೇಕಾದ ಸಂಖ್ಯಾ ಬಲ ಪಡೆಯಲು ಸಾಧ್ಯವಾಗಿಲ್ಲ. ಕಳೆದ ಬಾರಿಗಿಂತ 3 ಸ್ಥಾನ ಹೆಚ್ಚು ಗೆದ್ದಿದ್ದೇ ಹೆಚ್ಚುಗಾರಿಕೆ ಎನ್ನುವಂತಾಗಿದೆ. ಹಿಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದ ಕೆಜೆಪಿ 3 ಸದಸ್ಯರು ಈ ಪುರಸಭೆಯಲ್ಲಿ ಗೆದ್ದಿದ್ದರು ಎಂಬುದು ಗಮನೀಯ. ಇನ್ನು 8 ಸ್ಥಾನ ಗೆದ್ದಿರುವ ಕಾಂಗ್ರೆಸ್, ಈ ಬಾರಿ 1 ಸ್ಥಾನ ಹೆಚ್ಚಿಗೆ ಮಾಡಿಕೊಂಡಿದೆ. ಕಳೆದ ಬಾರಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ ಈ ಬಾರಿ 2ಕ್ಕೆ ಕುಸಿದಿದೆ. ಪಕ್ಷೇತರರು ಹಿಂದಿನಂತೆ 2 ವಾರ್ಡ್‌ಗಳಲ್ಲಿ ವಿಜಯ ಸಾಧಿಸಿ ತಮ್ಮ ಸಂಖ್ಯೆ ಉಳಿಸಿಕೊಂಡಿದ್ದಾರೆ.
ಇಂಡಿ ವಿಧಾನಸಭೆಯಿಂದ ಎರಡು ಬಾರಿ ಗೆದ್ದಿರುವ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಪ್ರತಿಷ್ಠೆ ಪ್ರಶ್ನೆಯಾಗಿದ್ದ ಈ ಪುರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರಾಜ್ಯದ ಮೈತ್ರಿ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್‌ನ ಇಬ್ಬರು ಹಾಗೂ ಇಬ್ಬರು ಪಕ್ಷೇತರರ ಬಲದೊಂದಿಗೆ ಅಧಿಕಾರಕ್ಕೇರಲು ಸಿದ್ಧತೆ ನಡೆಸಿದೆ. ಆದರೆ ಸರಳ ಬಹುಮತಕ್ಕೆ ಕೇವಲ 2 ಸದಸ್ಯರ ಬಲ ಬೇಕಿದ್ದು, ಇಬ್ಬರು ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಲು ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.