ನಗುವಿನಿಂದ ಜಿಗುಪ್ಸೆ ದೂರ
ಒತ್ತಡ ಮೀರಿ ನಿಲ್ಲಲು ಸಲಹೆ ಕಷ್ಟ-ಸುಖ ಒಂದೇ ನಾಣ್ಯದ ಎರಡು ಮುಖಗಳು
Team Udayavani, Apr 14, 2019, 3:21 PM IST
ವಿಜಯಪುರ: ಎಸ್‌ಬಿಎಸ್ ಕಲಾ-ವಾಣಿಜ್ಯ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಮಾತನಾಡಿದರು.
ವಿಜಯಪುರ: ತಾನು ನಕ್ಕು, ಅನ್ಯರನ್ನು ನಗಿಸುವ ಗುಣ ಇರುವ ವ್ಯಕ್ತಿಗೆ ತನ್ನ ಜೀವನದಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳು, ಬದುಕಿನಲ್ಲಿ ಜಿಗುಪ್ಸೆ ಇದ್ದರೂ ದೂರವಾಗಿ ನೆಮ್ಮದಿ ಜೀವನ ಸಾಧ್ಯ. ಆದರೆ ಪ್ರಸಕ್ತ ಶಿಕ್ಷಣ ಪ್ರತಿಭಾಂವತರನ್ನು ರೂಪಿಸಿದರೂ ಹೃದಯವಂತರು ವಿರಳವಾಗಿರುತ್ತಾರೆ ಎಂದು ಖ್ಯಾತ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಅಭಿಪ್ರಾಯಪಟ್ಟರು.
ನಗರದ ಬಿಎಲ್‌ಡಿಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ-ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಮೊಬೈಲ್ ಬಳಸುವುದರಿಂದ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳು ಮರೀಚಿಕೆಯಾಗುತ್ತವೆ. ಜೀವನದಲ್ಲಿ ಎದುರಾಗುವ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಕುಂದುತ್ತಿದೆ. ಕಷ್ಟಗಳು ಕಡಲ ತೀರದ ತೆರೆಗಳಂತೆ ಅಪ್ಪಳಿಸಿದರೂ ಬಂಡೆಗಲ್ಲಿನಂತೆ ತೆರೆಗಳನ್ನು ಸ್ವೀಕರಿಸುವ ಎದೆಗಾರಿಕೆ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹಿಳೆಯರು ಅದರಲ್ಲೂ ವಿದ್ಯಾರ್ಥಿನಿಯರು ಜೀವನದಲ್ಲಿ ಬರುವ ಯಾವುದೇ ರೀತಿಯ ಸಂಕಷ್ಟಗಳಿಗೆ ಅಂಜದೇ
ಸಮರ್ಥವಾಗಿ ಎದುರಿಸುವಲ್ಲಿ ಮುಂದಾಗಬೇಕು. ಪುರುಷ ಪ್ರಧಾನ
ಸಮಾಜದಲ್ಲಿ ಒಳ್ಳೆ ಸ್ಥಾನ ಮಾನಗಳು ದೊರೆಯಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ| ಆರ್.ಎಂ. ಮಿರ್ಧೆ ಮಾತನಾಡಿ, 21ನೇ ಶತಮಾನದಲ್ಲಿ ಒತ್ತಡದ ಜೀವನ ಸೃಷ್ಟಿಸಿದ್ದು,
ಇಂಥ ಒತ್ತಡಗಳನ್ನೆಲ್ಲ ಮೀರಿ ವಿದ್ಯಾರ್ಥಿನಿಯರು ಛಲದಿಂದ ಮುನ್ನೆಡೆಯಬೇಕು. ಜೀವನದಲ್ಲಿ ಕಷ್ಟ ಮತ್ತು ಸುಖ ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಕಷ್ಟ ಬಂದಾಗ ಕುಗ್ಗದೆ ಸುಖ
ಬಂದಾಗ ಹಿಗ್ಗದೆ ಜೀವನದಲ್ಲಿ ಸಮಾನವಾಗಿ ಸ್ವೀಕರಿಸಬೇಕೆಂದರು.
ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಸವಿತಾ ಅಣ್ಣೆಪ್ಪನವರ ಇದ್ದರು.
ವಿದ್ಯಾರ್ಥಿನಿ ಆಶಾ ಬಿರಾದಾರ ಪ್ರಾರ್ಥಿಸಿದರು. ಪಿ.ಎಚ್. ಹೂಗಾರ ಸ್ವಾಗತಿಸಿದರು. ಡಾ| ಪಿ.ಎಂ. ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಬಿ.ಬಿ. ಹಚಡದ ವಾರ್ಷಿಕ ವರದಿ ವಾಚಿಸಿದರು. ರೂಪಾ ಮೋಟಗಿ. ಡಾ| ಆರ್.ಜಿ. ಕಮತರ, ವಿ.ಎಸ್. ಮೆಳ್ಳಿಗೇರಿ ನಿರೂಪಿಸಿದರು. ವಿದ್ಯಾರ್ಥಿನಿಯರ ಪ್ರತಿನಿಧಿ ಕವಿತಾ ಬೀರಕಬ್ಬಿ
ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.