ಬರ ನಿರ್ವಹಣೆಗೆ ನೆಪ ಹೇಳಬೇಡಿ
ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ತಾಕೀತು
Team Udayavani, May 5, 2019, 2:46 PM IST
ವಿಜಯಪುರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ಜಿಲ್ಲೆಯ ಬರ ಹಾಗೂ ಪ್ರಗತಿ ಪರಿಸ್ಥಿತಿ ಪರಿಶೀಸನೆ ನಡೆಸಿದರು.
ವಿಜಯಪುರ: ಬರಗಾಲ ಕಾಮಗಾರಿ ನಿರ್ವಹಣೆ ವಿಷಯದಲ್ಲಿ ಅಧಿಕಾರಿಗಳು ಕುಂಟು ನೆಪಗಳನ್ನು ಹೇಳದೇ ದಕ್ಷತೆಯಿಂದ ಕರ್ತವ್ಯ ನಿಭಾಯಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ವಿಳಂಬ ಇಲ್ಲದಂತೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ತಾಕೀತು ಮಾಡಿದ್ದಾರೆ.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಕುರಿತು ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಬರ ನಿರ್ವಹಣೆ ಹಾಗೂ ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಬರದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೇ ಬರಗಾಲ ಕಾಮಗಾರಿಗಳನ್ನು ಕೈಗೊಳ್ಳಬೇಕು. ನೀರಿನ ಅವಶ್ಯಕತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಹೇಳಿದರು.
ಬರ ಕಾಮಗಾರಿ ಸೇರಿದಂತೆ ಕುಡಿಯುವ ನೀರಿನ ಪೂರೈಕೆಯ ಬಿಲ್ಲುಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಳ್ಳಬಾರದು. ತಾಲೂಕಾವಾರು ಟ್ಯಾಂಕರ್‌ಗಳಿಂದ ನೀರು ಪೂರೈಕೆ ಬಿಲ್ ಪಾವತಿಸಬೇಕು. ಯಾವುದೇ ಬಿಲ್ ಪಾವತಿ ಬಾಕಿ ಉಳಿಸಿಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಬಿಲ್ಗಳನ್ನು 7 ದಿನಗಳೊಳಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಗ್ರಾಪಂವಾರು ಅಧ್ಯಕ್ಷರನ್ನು ಸಂಪರ್ಕಿಸಿ ಬೋರ್‌ವೆಲ್ಗಳ ಲಭ್ಯತೆ, ಬೋರ್‌ವೆಲ್ಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆಯಬೇಕು. ವಿಫಲವಾದ ಕೊಳವೆಗಳನ್ನು ಕ್ರಮ ಬದ್ಧವಾಗಿ ಮುಚ್ಚಿಸಲು ಕ್ರಮ ಕೈಗೊಂಡು ಅವಘಡಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ವಿಜಯಪುರ ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ಅಮೃತ್ ಯೋಜನೆಯಡಿ 24×7 ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಪ್ರದೇಶದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಈ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಅಗತ್ಯವಿಲ್ಲ. ಉಳಿದಂತೆ ನೀರಿನ ಅವಶ್ಯಕತೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯಲು ಯೋಗ್ಯವಾದ ಹಳ್ಳದ ನೀರನ್ನು ಕುಡಿಯಲು ಮಾತ್ರ ಬಳಸಬೇಕು. ಕೃಷಿ ಕೆಲಸಗಳಿಗೆ ಮಾತ್ರ ಉಪಯೋಗಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಮೇವು ಬ್ಯಾಂಕ್‌ಗಳಿಂದ ಜಾನುವಾರುಗಳಿಗೆ ಟಾಂಗಾ ಮಾಲೀಕರ ಕುದುರೆಗಳಿಗೂ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕು. ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಷ್ಟಿಸಿ ಜನರಿಗೆ ಉದ್ಯೋಗ ನೀಡಿ ನೆರವಾಗಬೇಕು. ವೇತನ ಬಾಕಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿಕೊಂಡು ಜನರ ನೆರವಿಗೆ ಧಾವಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿ, ವಸತಿ ಶಾಲೆಗಳ ನಿವೇಶನ, ಸ್ಮಶಾನ ಭೂಮಿ ಕುರಿತು ನ್ಯಾಯಾಲಯಗಳ ವ್ಯಾಜ್ಯಗಳನ್ನು 20 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದರು.
ಜಿಪಂ ಸಿಇಒ ವಿಕಾಸ್ ಸುರಳಕರ ಮಾತನಾಡಿ, ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಜನರಿಗೆ ಅನುಕೂಲ ಆಗುವಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಜಿಪಿಎಸ್ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶಧದಲ್ಲಿ ಭಾರಿ ಕುಸಿತವಾಸಗಿದೆ. ಹೀಗಾಗಿ ಫಲಿತಾಂಶ ಸುಧಾರಣೆಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮಾನದಂಡ, ನಿಯಮ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ವಿವಿಧ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಅಪರ್ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲೆಯ ಉಪ ವಿಭಾಗಾಧಿಕಾರಿಗಳು, ಆಯಾ ತಾಲೂಕು ತಹಶೀಲ್ದಾರ್‌ರು ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು.
ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಜನರಿಗೆ ಅನುಕೂಲ ಆಗುವಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಜಿಪಿಎಸ್ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ.
•ವಿಕಾಸ್ ಸುರಳಕರ,ಜಿಪಂ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.