ಅಂಗವಿಕಲರ ಅನುದಾನ ಸಮರ್ಪಕ ಬಳಸಿ
ಉದ್ಯೋಗ ಖಾತ್ರಿಯಲ್ಲಿ ಅಂಗವಿಕಲರಿಗೆ ಕನಿಷ್ಠ 100 ದಿನ ಕೆಲಸ ದೊರೆಯಲಿ
Team Udayavani, Jul 4, 2019, 10:42 AM IST
ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ವಿಜಯಪುರ: ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂಗವಿಕಲ ಫಲಾನುಭವಿಗಳಿಗಾಗಿ ಮೀಸಲಿಡಲಾದ ಶೇ. 5ರ ಅನುದಾನವನ್ನು ಕ್ರಿಯಾಯೋಜನೆ ಅನ್ವಯ ಸಮರ್ಪಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ವೈ.ಎಸ್ .ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಉದ್ದೇಶ ಮತ್ತು ಕಾರ್ಯಸೂಚಿ ಹಾಗೂ ಅಂಗವಿಕಲರಿಗೆ ನೀಡಿದ ಸೌಲಭ್ಯ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಸರ್ಕಾರದ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ಲಭ್ಯವಿರುವ ಶೇ. 5ರ ಅನುದಾನ ಶೇ. ನೂರರಷ್ಟು ಬಳಕೆಯಾಗುವಂತೆ ನೋಡಿಕೊಳ್ಳುವ ಅವಶ್ಯಕತೆ ಇದೆ. ಆಯಾ ಇಲಾಖೆಗಳ ಅಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಈ ಅನುದಾನ ಸಮರ್ಪಕವಾಗಿ ಬಳಸುವ ಜೊತೆಗೆ ಅಂಗವಿಕಲ ಪುನರ್ವಸತಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.
ಜಿಲ್ಲೆಯ ವಿವಿಧ ಶಾಲಾ-ಕಾಲೇಜಗಳು, ಆಸ್ಪತ್ರೆಗಳು, ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ್‍ಯಾಂಪ್‌ಗ್ಳು ವೈಜ್ಞಾನಿಕ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. 6 ವರ್ಷದೊಳಗಿನ ಅಂಗವಿಕಲ ಮಕ್ಕಳಿಗೆ ಜಿಲ್ಲಾ ಆಸ್ಪತ್ರೆಯಿಂದ ನೀಡಲಾಗುವ ಗುರುತಿನ ಚೀಟಿಯನ್ನು ತಾತ್ಕಾಲಿಕವಾಗಿ ನೀಡದೇ ಶಾಶ್ವತವಾಗಿ ನೀಡುವ ಕುರಿತು ಆರೋಗ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ 2018-19ನೇ ಸಾಲಿನ ಸಾಧನ-ಸಲಕರಣೆಗಳನ್ನು ಅರ್ಹ ಅಂಗವಿಕಲ ಫಲಾನುಭವಿಗಳಿಗೆ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಅದರಂತೆ ಜಿಲ್ಲೆಯ ಎಲ್ಲ ತಾಪಂ, ತಹಶೀಲ್ದಾರ್‌ರು ತ್ತೈ ಮಾಸಿಕ ಸಭೆಗಳನ್ನು ತಪ್ಪದೇ ನಡೆಸುವ ಮೂಲಕ ಅಂಗವಿಕಲರ ಕುಂದು-ಕೊರತೆಗಳನ್ನು ನಡೆಸುವಂತೆ ಸೂಚಿಲಾಗುವುದು ಎಂದು ಹೇಳಿದರು.
ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿರುವ ಅಂಗವಿಕಲ ಫಲಾನುಭವಿಗಳಿಗೆ ಅವರ ಅಂಗವಿಕಲತೆ ಪ್ರಮಾಣಕ್ಕೆ ತಕ್ಕಂತೆ ಕನಿಷ್ಠ 100 ದಿನಗಳಿಗೆ ಕೆಲಸ ದೊರೆಯುವಂತೆ ನೋಡಿಕೊಳ್ಳಬೇಕು. ಎಲ್ಲ ಪ್ರಮಾಣದ ಅಂಗವಿಕಲರ ಅನುಕೂಲಕ್ಕಾಗಿ ಫಿಜಿಯೋಥೆರಫಿ ಸಂಸ್ಥೆ ಲಭ್ಯವಿದ್ದು, ಮೆದುಳುವಾತ ಮಕ್ಕಳಿಗೆ ಹಾಗೂ ಬುದ್ಧಿಮಾಂಧ್ಯ ಮಕ್ಕಳ ನೆರವಿಗಾಗಿ ಈಗಾಗಲೇ ನಿವೇಶನ ಲಭ್ಯವಿದ್ದು ಸುಸಜ್ಜಿತ ಫಿಜಿಯೋಥೆರಪಿ ಕೇಂದ್ರದ ಜೊತೆಗೆ ಅವಶ್ಯಕ ಸಾಧನ-ಸಲಕರಣೆಗಳನ್ನು ಪೂರೈಕೆಗೆ ಕಳೆದ ಸಾಲಿನ ಮೂರು ಲಕ್ಷ ರೂ. ಬಳಸುವಂತೆ ತಿಳಿಸಿದರು.
ಅಂಗವಿಕಲ ಮಕ್ಕಳ ಅನುಕೂಲಕ್ಕಾಗಿ ಸಮನ್ವಯ ಶಿಕ್ಷಣ ದೊರಕಿಸಲಾಗುತ್ತಿದ್ದು, ಸರ್ಕಾರದ ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಸರ್ಕಾರದ ನಿರ್ದೇಶನದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವ ಜವಾಬ್ದಾರಿ ಜಿಲ್ಲಾ ಸಮಿತಿ ಹೊಂದಿದ್ದು, ಸರ್ಕಾರದ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ದೊರಕಿಸುವ ಜೊತೆಗೆ ಗುಣಮಟ್ಟದ ಸಾಧನಾ ಸಲಕರಣೆಗಳು ದೊರಕಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಸಿ.ಬಿ. ಕುಂಬಾರ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಡಾ| ಎಂ.ಸಿ. ಯಡವಣ್ಣವರ, ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಅಧಿಕಾರಿ ವಿ.ಜಿ. ಉಪಾಧ್ಯೆ, ಎಪಿಡಿ ಸಂಚಾಲಕ ಗುರುಶಾಂತ ಹಿರೇಮಠ, ಅಂಗವಿಕಲರ ಪ್ರತಿನಿಧಿ ಮಲ್ಲಿಕಾರ್ಜುನ ಉಮರಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ| ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.