ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ

ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದ ಕಾರ್ಮಿಕರು • ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗೆ ಮನವಿ

Team Udayavani, Aug 3, 2019, 10:27 AM IST

3-Agust-7

ವಿಜಯಪುರ: ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ನಗರದಲ್ಲಿ ಜಂಟಿ ಕಾರ್ಮಿಕ ಸಂಘಟನೆಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಮಿಕರು ಕೇಂದ್ರ ಸರ್ಕಾರದ ಕಾರ್ಮಿಕರ ವಿರೋಧಿ ನೀತಿ ವಿರುದ್ಧ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಭಿಮಶಿ ಕಲಾದಗಿ, ಕೇಂದ್ರ ಸರಕಾರ ಈಗಿರುವ ಕಾರ್ಮಿಕರ 44 ಕಾನೂನುಗಳನ್ನು ರದ್ದು ಮಾಡಿ ಕೇವಲ ನಾಲ್ಕು ಕೋಡಿಫಿಕೇಶನ್‌ ಜಾರಿಗೆ ತಂದಿದೆ. ಮತ್ತೂಂದೆಡೆ ನದಿ ನೀರು ಹಂಚಿಕೆ ವಿಷಯವಾಗಿ ಇದ್ದ ಪ್ರಾಧಿಕಾರಿಗಳನ್ನು ರದ್ದು ಮಾಡಿ ರಾಷ್ಟ್ರದಲ್ಲಿ ಏಕ ರೂಪದ ಪ್ರಾಧಿಕಾರಕ್ಕೆ ಮುಂದಾಗಿರುವುದು ಜನಹಿತದ ನಡೆಯಲ್ಲ. ಬದಲಾಗಿ ಸರ್ವಾಧಿಕಾರ ಧೋರಣೆಯ ವರ್ತನೆ ಆಗಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ಜು. 5ರಂದು ಬಜೆಟ್ ಭಾಷಣದಲ್ಲಿ ಇದರ ಪ್ರಸ್ತಾಪ ಮಾಡುವ ಮೂಲಕ, ಅತ್ಯಂತ ಅಪ್ರಜಾತಾಂತ್ರಿಕವಾಗಿ ಮತ್ತು ನಿಯಮಗಳನ್ನು ಗಾಳಿಗೆ ತೂರಿ, ರಾಜ್ಯಗಳ ವ್ಯಾಪ್ತಿಯಲ್ಲಿ ಬರುವ ಸಹವರ್ತಿ ಪಟ್ಟಿ ಕಡೆಗಣಿಸಿ ಕೋಡಿಫಿಕೇಶನ್‌ ಅನ್ನು ಕಾರ್ಮಿಕರ ಮೇಲೆ ಹೇರಲಾಗಿದೆ. ಈಗ ಜುಲೈ 23ರಂದು ವೇತನ ಮಸೂದೆ 2019 ಮತ್ತು ಔದ್ಯೋಗಿಕ ರಕ್ಷಣೆ, ಆರೋಗ್ಯ ಮತ್ತು ಕಾರ್ಯಸ್ಥಳದ ಸ್ಥಿತಿಗತಿ ಮಸೂದೆ 2019ಯನ್ನು ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಈ ಎರಡೂ ಮಸೂದೆಗಳು ವಿರೋಧ ಪಕ್ಷಗಳ ಆಕ್ಷೇಪ ಮತ್ತು ಹಲವಾರು ಕರಾರುಗಳನ್ನು ಕಡೆಗಣಿಸಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿವೆ ದೇಶದಲ್ಲಿ ಶೇ.70 ರೈತ ಕಾರ್ಮಿಕರು ಒಗ್ಗಟಾಗಿ ಹೋರಾಟ ಮಾಡಬೇಕಿ ಎಂದು ಕರೆ ನೀಡಿದರು.

ಎಐಯುಟಿಸಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಹಿಟ್ನಳ್ಳಿ ಮಾತನಾಡಿ, ಕಾರ್ಮಿಕರ ಮುಖಂಡರು ಕೇಂದ್ರ ಸರಕಾರಕ್ಕೆ ಹಲವಾರು ಬೇಡಿಕೆಗಳನ್ನು ಪ್ರಸ್ಥಾಪಿಸಿದ್ದು ಅದಕ್ಕೆ ಮನ್ನಣೆ ನೀಡದೆ ಕೇಂದ್ರ ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಪೂರ್ವಾಗ್ರಹಗಳಿಂದ ನೋಡಲಾಗಿದೆ. ಈ ಮಸೂದೆಗಳಲ್ಲಿ ಜನರ ಕಣ್ಣಿಗೆ ಸತ್ಯವೆನಿಸಿದರು ಅದರಲ್ಲಿರುವ ಬಹುತೆಕ ತಿದ್ದುಪಡಿ ಬಂಡವಾಳಿಗರ ಪರವಾಗಿವೆ. ಕಂಪನಿಗಳಲ್ಲಿ ಕಾರ್ಮಿಕರನ್ನು ಹೆಚ್ಚಿಸಿದ ತಕ್ಷಣ ಸಮಸ್ಯೆಗಳಿಗೆ ಪರಿಹರಿಸುವುದಕ್ಕೆ ಆಗಲ್ಲ ಅಲ್ಲಿರುವ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ ದುರುದ್ದೇಶದಿಂದ ಕೂಡಿದೆ ಎಂದು ದೂರಿದರು.

ಸದರಿ ವೇತನ ಮಸೂದೆ 15ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಅಂಗೀಕೃತವಾಗಿದ್ದ ವೇತನ ನಿರ್ಧಾರ ಪ್ರಕ್ರಿಯೆ ಮತ್ತು ರಾಪ್ಟಕೋಸ್‌ ಕೇಸ್‌ನಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿದ್ದ ಹಾಗೂ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಅಂಗೀಕೃತವಾಗಿದ್ದ ಶೇ. 25 ಹೆಚ್ಚುವರಿ ವೇತನವನ್ನು ನಿರಾಕರಿಸುತ್ತದೆ. ಟ್ರೇಡ್‌ ಯೂನಿಯನ್ನುಗಳ ಒಬ್ಬ ಪ್ರತಿನಿಧಿಯನ್ನೂ ನೇಮಕ ಮಾಡಿಕೊಳ್ಳದೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಕನಿಷ್ಠ ವೇತನ ನಿಗದಿ ಪಡಿಸಲು ರೂಪಿಸಿದ್ದ ತಜ್ಞರ ಸಮಿತಿಯೂ ಈ ಶಿಫಾರಸುಗಳ ವಿರುದ್ಧವಾಗಿ ಮುಂದುವರಿಯಿತು. ಸರಕಾರ ಕಾರ್ಮಿಕರ ಹಕ್ಕುಗಳನ್ನು ತಿಲಾಂಜಲಿ ಹಾಡುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ಎಐಯುಟಿಯುಸಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಮಾತನಾಡಿ, ಕೇಂದ್ರ ಸರಕಾರ ಜನ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನೇ ಅನುಸರಿಸುತ್ತ ಬರುತ್ತಿವೆ. ಕೇವಲ ದೇಶದ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಪ್ರತಿನಿಧಿಗಳಂತೆ ವರ್ತಿಸುತ್ತಿವೆ. ದೇಶದ ಆದಾಯಕ್ಕೆ ಮೂಲ ಕಾರಣವಾದ ಕಾರ್ಮಿಕರ ದುಡಿಮೆ ಯನ್ನು ಕಡೆಗಗಣಿಸಿ ಕಾರ್ಮಿಕರ ಕೂಲಿ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫ‌ಲವಾಗಿದೆ ಎಂದು ಕಿಡಿ ಕಾರಿದರು.

7ನೇ ವೇತನ ಆಯೋಗವು 2016 ಜನವರಿ 1ರಿಂದ ಜಾರಿಗೆ ಬರುವಂತೆ ಕನಿಷ್ಠ ವೇತನವನ್ನು 18 ಸಾವಿರ ಎಂದು ಘೋಷಿಸಿದ್ದರೂ ಕೇಂದ್ರ ಕಾರ್ಮಿಕ ಸಚಿವರು ಜು. 10ರಂದು ರಾಷ್ಟ್ರೀಯ ಕನಿಷ್ಠ ವೇತನವನ್ನು ಕೇವಲ ಮಾಸಿಕ 4,628 ರೂ. ಎಂದು ಘೋಷಿಸಿದ್ದಾರೆ. ಔದ್ಯೋಗಿಕ ರಕ್ಷಣೆ, ಆರೋಗ್ಯ ಮತ್ತು ಕಾರ್ಯಸ್ಥಳದ ಸ್ಥಿತಿಗತಿ ಮಸೂದೆ 2019 ಈಗಿರುವ 13 ಪ್ರತ್ಯೇಕ ಕಾರ್ಮಿಕ ಕಾನೂನುಗಳ ಬದಲಾಗಿ ಜಾರಿಗೆ ತರಲಾಗಿದೆ. ಇದು 10ಕ್ಕಿಂತ ಹೆಚ್ಚು ಕೆಲಸಗಾರರಿರುವ ಉದ್ದಿಮೆಗಳಿಗೆ ಮಾತ್ರ ಅನ್ವಯವಾಗುವುದರಿಂದ, ಅಸಂಘಟಿತ ವಲಯ, ಹೊರಗುತ್ತಿಗೆ ಮತ್ತು ಗುಡಿ ಕೈಗಾರಿಕೆಗಳಲ್ಲಿ ದುಡಿಯುವ ದೇಶದ ಶೇ. 90ಕ್ಕೂ ಹೆಚ್ಚು ಕಾರ್ಮಿಕರು ಈ ಮಸೂದೆಯ ಸೌಲಭ್ಯಗಳಿಂದ ವಂಚಿತರಾಗುತ್ತಾರೆ ಎಂದು ಅಸಮಾಧಾನಕ್ಕೆ ಕಾರಣವನ್ನು ವಿವರಿಸಿದರು.

ಅಂಗನವಾಡಿ ರಾಜ್ಯ ಉಪಾಧ್ಯಕ್ಷೆ ಭಾರತಿ ವಾಲಿ ಮಾತನಾಡಿದರು. ಕಾರ್ಮಿಕ ಮುಖಂಡರಾದ ಗಂಟೆಪ್ಪಗೋಳ ಬ್ಯಾಂಕ್‌ನ ದ್ಯಾಮಣ್ಣ ಬಿರಾದಾರ, ಅಂಬಿಕಾ ವಳಸಂಗ, ಅನಿತಾ ರಾಠೊಡ, ಅಕಲಕಬಾನು, ಶಾರಾದ, ಸಂತೋಷ, ಅಖಂಡೇಶ, ಮಲ್ಲಿಕಾರ್ಜುನ ಮಾದರ, ಎಂ.ಕೆ.ಚಳ್ಳಗಿ, ಮಲಿಕಸಾಬ ಟಕ್ಕಳಕಿ, ಸುಮಿತ್ರಾ ಗೊಣಸಗಿ ಈರಾಬಾಯಿ ಹಜೇರಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.