ಬಸವನಾಡಲ್ಲೂ ನಡೆಯುತ್ತಾ ರಾಜಕೀಯ ಕ್ಷಿಪ್ರ ಕ್ರಾಂತಿ?

•ಬಿಜೆಪಿ ಸೇರಲು ಒತ್ತಡ ಇದೆ ಎನ್ನುತ್ತಿರುವ ದೇವಾನಂದ ಚವ್ಹಾಣ•ಸರ್ಕಾರ-ಸಚಿವರ ವಿರುದ್ಧ ಯಶವಂತರಾಯಗೌಡ ಅಸಮಾಧಾನ

Team Udayavani, Jul 8, 2019, 10:55 AM IST

Udayavani Kannada Newspaper

ಜಿ.ಎಸ್‌. ಕಮತರ
ವಿಜಯಪುರ:
ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ಪತನಕ್ಕೆ ಕ್ಷಿಪ್ರ ರಾಜಕೀಯ ಬೆಳವಣಿಗೆ ಆರಂಭಗೊಂಡಿದೆ. ಸೋಮವಾರ ಮೈತ್ರಿ ಪಕ್ಷಗಳ ಇನ್ನೂ ಕೆಲ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರು ನೀರು ಎರೆಯಲಿದ್ದಾರೆಯೇ ಎಂಬ ಗುಮಾನಿ ಮೂಡಿದೆ.

ಏನಿಲ್ಲ ಏನಿಲ್ಲ ಎನ್ನುತ್ತಲೇ ಮೈತ್ರಿ ಪಕ್ಷಗಳ ಜೆಡಿಎಸ್‌ ನಿರ್ಗಮಿತ ಅಧ್ಯಕ್ಷ ಎಚ್.ವಿಶ್ವನಾಥ, ಕಾಂಗ್ರೆಸ್‌ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸೇರಿದಂತೆ 14 ಶಾಸಕರು ರಾಜೀನಾಮೆ ನೀಡುವ ಮೂಲಕ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ದೊಡ್ಡ ಮಟ್ಟದ ಷಡ್ಯಂತ್ರ ಹೊರ ಹಾಕಿದ್ದಾರೆ. ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾದರಿಯಲ್ಲೇ ಜಿಲ್ಲೆಯ ಕೆಲವು ಶಾಸಕರ ನಡೆ ಕೂಡ ಇದೇ ಮಾದರಿಯಲ್ಲಿ ಸಾಗಲಿದೆಯೇ ಎಂಬ ಅನುಮಾನ ಮೂಡಿಸಿದೆ.

ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಹಂತದಿಂದಲೇ ಜಿಲ್ಲೆಯ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ನಾಗಠಾಣ ಕ್ಷೇತ್ರದಿಂದ ಅಯ್ಕೆಯಾಗಿರುವ ಜೆಡಿಎಸ್‌ ಶಾಸಕ ದೇವಾನಂದ ಚವ್ಹಾಣ ಅವರ ಹೆಸರು ಆಪರೇಷನ್‌ ಕಮಲದ ಕೇಳಿ ಬಂದಿತ್ತು. ಆ ನಂತರ ನಡೆದ ಹಲವು ಆಪರೇಷನ್‌ ಕಮಲ ಬೆಳವಣಿಗೆ ಸಂದರ್ಭದಲ್ಲೂ ದೇವಾನಂದ ಹೆಸರು ಚರ್ಚೆಯಲ್ಲಿತ್ತು. ಹಿಂದಿನ ಆಪರೇಷನ್‌ ಕಮಲ ವಿಫಲವಾದ ಕಾರಣ ನಾನು ಜೆಡಿಎಸ್‌ ತೊರೆಯಲ್ಲ, ಎಲ್ಲೂ ಹೋಗಲ್ಲ ಎಂದೇ ಸ್ಪಷ್ಟಪಡಿಸುತ್ತ ಬಂದಿದ್ದರು.

ಇದೀಗ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹಿರಿಯ ಶಾಸಕರೇ ರಾಜೀನಾಮೆ ನೀಡಿರುವುದರಿಂದ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನ ಖಚಿತ ಎಂಬ ವಾತಾವರಣ ಸೃಷ್ಟಿಯಾಗಿದೆ. ಈ ಹಂತದಲ್ಲಿ ಜಿಲ್ಲೆಯ ಮೈತ್ರಿ ಪಕ್ಷಗಳ ಪ್ರಭಾವಿ ರಾಜಕೀಯ ಮುಖಂಡರು ನನ್ನನ್ನು ರಾಜಕೀಯವಾಗಿ ತುಳಿಯುತ್ತಿದ್ದಾರೆ. ಮತ್ತೂಂದೆಡೆ ಬಿಜೆಪಿ ಸೇರಲು ನನಗೆ ಹಲವು ಮಾರ್ಗಗಳಿಂದ ಸಮುದಾಯದ ಸ್ವಾಮಿಗಳು, ದೊಡ್ಡ ಮಟ್ಟದ ನಾಯಕರು ನನ್ನನ್ನು ಸಂಪರ್ಕಿಸಿ, ಒತ್ತಡ ಹಾಕುತ್ತಿದ್ದಾರೆ ಎನ್ನುತ್ತಿದ್ದಾರೆ. ಈ ಮೂಲಕ ಮೈತ್ರಿ ಪಕ್ಷಗಳ ಇನ್ನಷ್ಟು ಶಾಸಕರು ಸೋಮವಾರ ರಾಜೀನಾಮೆ ನೀಡುವ ಪಟ್ಟಿಯಲ್ಲಿ ದೇವಾನಂದ ಕೂಡ ಸೇರಲಿದ್ದಾರೆ ಎಂಬ ಅನುಮಾನ ಹುಟ್ಟಿಸಿದೆ.

ಇನ್ನು ಸತತ ಎರಡು ಬಾರಿ ಇಂಡಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಯಶವಂತರಾಯಗೌಡ ಪಾಟೀಲ ಗಡಿ ಭಾಗದ ತಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿಕೊಂಡು, ಅನುಷ್ಠಾನಕ್ಕೆ ಹೆಣಗುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಆಡಳಿತ ಪಕ್ಷದ ಶಾಸಕರಾಗಿದ್ದ ತಮಗೆ ಯಾವ ಅಧಿಕಾರ ಬೇಡ, ಕ್ಷೇತ್ರಕ್ಕೆ ಬೇಕಾದ ಕೆಲಸ ಮಾಡಿಕೊಡಿ ಸಾಕು ಎಂದಿದ್ದರು.

ಅದೇ ರೀತಿ ಅಧಿಕಾರದಿಂದ ದೂರ ಇದ್ದು ತಮ್ಮ ಕ್ಷೇತ್ರದಲ್ಲಿ ಅರ್ಧ ಶತಮಾನದಿಂದ ಮುಕ್ತಿಗೆ ಕಾಯುತ್ತಿದ್ದ ಭೀಮಾಶಂಕರ ಸಕ್ಕರೆ ಕಾರ್ಖಾನೆ ಸಕ್ಕರೆ ಉತ್ಪಾದಿಸುವಂತೆ ಮಾಡಿದ್ದರು. ರಾಜ್ಯದಲ್ಲೇ ಹೆಚ್ಚು ಲಿಂಬೆ ಬೆಳೆಯುವ ವಿಜಯಪುರ ಜಿಲ್ಲೆಯ ರೈತರ ಹಿತ ರಕ್ಷಣೆಗೆ ಕರ್ನಾಟಕ ರಾಜ್ಯ ಲಿಂಬೆ ಆಭಿವೃದ್ಧಿ ಮಂಡಳಿ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಲದಕ್ಕೆ ಸದರಿ ಮಂಡಳಿಯ ಕೇಂದ್ರ ಕಚೇರಿಯನ್ನು ಇಂಡಿ ಪಟ್ಟಣಕ್ಕೆ ತರುವಲ್ಲೂ ಯಶಸ್ವಿಯಾಗಿದ್ದರು.

ಆದರೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಹಂತದಲ್ಲಿ ತಮ್ಮ ಕ್ಷೇತ್ರದ ಆಭಿವೃದ್ಧಿಗೆ ರೂಪಿಸಿರುವ ಕೆಲಸಗಳು ಆಗದಿರುವುದಕ್ಕೆ ಅತೃಪ್ತಿ ಹೊರ ಹಾಕುತ್ತಲೇ ಇದ್ದಾರೆ. ಬೇಸಿಗೆಯಲ್ಲಿ ಲಿಂಬೆ ಬೆಳೆಗಾರರು ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ ಮೂಲಕ ನೀರು ಹಾಕಲು ಲಕ್ಷಾಂತರ ಖರ್ಚು ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ಮಹಾರಾಷ್ಟ್ರ ಮಾದರಿಯಲ್ಲಿ ಪ್ಯಾಕೇಜ್‌ ಕೊಡಿ ಎಂದು ಬೇಡಿಕೆ ಇರಿಸಿದ್ದಾರೆ. ಸಿದ್ಧರಾಮಯ್ಯ ಸರ್ಕಾರ ಇದ್ದಾಗಿನಿಂದಲೇ ಈ ವಿಷಯದಲ್ಲಿ ಕೂಗು ಎಬ್ಬಿಸಿದ್ದು, ಮೈತ್ರಿ ಸರ್ಕಾರದಲ್ಲಿ ಜಿಲ್ಲೆಯವರೇ ಎಂ.ಸಿ.ಮನಗೂಳಿ ತೋಟಗಾರಿಕೆ ಸಚಿವರಾಗಿದ್ದ ತಮ್ಮ ಬೇಡಿಕೆ ಕೈಗೂಡುತ್ತೆ ಎಂದು ನಂಬಿದ್ದರು. ಆದರೆ ಮನಗೂಳಿ ಅವರು ಸ್ಪಂದಿಸಿಲ್ಲ. ಇದರಿಂದ ಕುಪಿತರಾಗಿರುವ ಯಶವಂತರಾಯಗೌಡ ಅವರು ವಾರದ ಹಿಂದಷ್ಟೇ ಜರುಗಿದ ಕೆಡಿಪಿ ಸಭೆಯಲ್ಲಿ ಬಹಿರಂಗವಾಗಿ ತೋಟಗಾರಿಕೆ ಸಚಿವರು ನಮ್ಮ ಜಿಲ್ಲೆಯವರೇ ಆಗಿರುವುದು ನಮ್ಮ ದುರ್ದೈವ ಎಂದು ಮನಗೂಳಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದೇ ಸಭೆಯಲ್ಲಿ ತನ್ನ ಕ್ಷೇತ್ರದ ಜನರಿಗೆ ಕುಡಿಯಲು ನೀರಿಲ್ಲದಿದ್ದರೂ ಆಲಮಟ್ಟಿಯ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಿಂದ ಜಿಲ್ಲೆಯ ಇತರೆ ತಾಲೂಕಿಗೆ ಕಾಲುವೆ ಮೂಲಕ ಕೃಷಿಗಾಗಿ ನೀರು ಹರಿಸಲಾಗಿದೆ. ನೀರಾವರಿ ಸಲಹಾ ಸಮಿತಿ ನಿರ್ಣಯಗಳಿಗೆ ವಿರುದ್ಧವಾಗಿ ನೀರು ಬಳಸಿದ್ದೀರಿ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ್ದರು.

ಆರೇಳು ತಿಂಗಳ ಹಿಂದೆ ಬರ ಆಧ್ಯಯನಕ್ಕೆ ಬಂದಿದ್ದ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಅವರ ವರ್ತನೆಗೂ ಹರಿಹಾಯ್ದಿದ್ದರು. ಸದಾ ಭೀಕರ ಬರ ಎದುರಿಸುವ ಜಿಲ್ಲೆಯಲ್ಲಿ ಲಿಂಬೆ ಬೆಳೆಗಾರರು ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ ನೀರು ಹಾಕುತ್ತಾರೆ. ಇದಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡಿಕೊಳ್ಳುವ ನಮ್ಮ ರೈತರಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಪ್ಯಾಕೇಜ್‌ ವಿಷಯ ಪ್ರಸ್ತಾಪಿಸಿದ್ದರು. ಇದಕ್ಕೆ ಸಚಿವ ದೇಶಪಾಂಡೆ ವರದಿ ತರಿಸಿಕೊಳ್ಳುತ್ತೇವೆ ಎಂದು ಹೇಳಿದಾಗ, ಹಲವು ವರ್ಷಗಳಿಂದ ವರದಿ ತರಿಸಿಕೊಳ್ಳುವ ಮಾತಿನಲ್ಲೇ ಕಾಲ ಹರಣ ಮಾಡುತ್ತಿದ್ದೀರಿ. ನಿಮ್ಮಿಂದ ಆಗದಿದ್ದರೆ ಹೇಳಿ ಬಿಡಿ, ಆದರೆ ಸಮೀಕ್ಷೆ, ವರದಿ, ಪ್ರಸ್ತಾವನೆ ಅಂತೆಲ್ಲ ರೈತರನ್ನು ಮೋಸಗೊಳಿಸುವ ಕೆಲಸ ಮಾಡಬೇಡಿ ಎಂದು ಗುಡುಗಿದ್ದರು.

ಆದರೆ ರಾಜ್ಯದಲ್ಲಿ ಪ್ರಸ್ತುತ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉರುಳುವ ಹಂತಕ್ಕೆ ತಂದು ನಿಲ್ಲಿಸಿರುವ ಶಾಸಕರಲ್ಲಿ ಬಹುತೇಕರು ಕೂಡ ಇದೇ ರೀತಿ ಹೇಳಿಕೆ ನೀಡಿದ್ದರು. ಅತೃಪ್ತಿ ಇದೆ, ಪಕ್ಷ ತೊರೆಯಲ್ಲ ಎನ್ನುತ್ತಿದ್ದರು. ಎಲ್ಲೂ ಹೋಗಲ್ಲ ಎನ್ನುತ್ತಲೇ ಇದೀಗ ಸದ್ದಿಲ್ಲದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮೈತ್ರಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರಕ್ಕೆ ಕೈಕೊಟ್ಟು ಕಮಲ ಕೋಟೆಯಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಮುಂದಾಗಿದ್ದಾರೆ. ಹೀಗಾಗಿ ಯಶಂವತರಾಯಗೌಡ ಆವರ ರಾಜಕೀಯ ನಡೆಯ ಕುರಿತು ಜಿಲ್ಲೆಯಲ್ಲಿ ಕುತೂಹಲ ಮೂಡುವಂತೆ ಮಾಡಿದೆ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.