ಶೈಕ್ಷಣಿಕ ಕ್ಷೇತ್ರಕ್ಕೆ ಮಠಾಧೀಶರ ಕೊಡುಗೆ ಅಪಾರ
Team Udayavani, Oct 21, 2019, 6:32 PM IST
ವಿಜಯಪುರ: ಉತ್ತಮ ಸಮಾಜ ನಿರ್ಮಿಸುವಲ್ಲಿ ಮಠಗಳ ಪಾತ್ರ ಬಹಳ ಮುಖ್ಯವಾದುದು. ಸರ್ಕಾರ ಮಾಡುವ ಕೆಲಸವನ್ನು ಮೀರಿ ಮಠಗಳು ಮಾಡಿವೆ. ಕರ್ನಾಟಕವು ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರಲು ಮಠಾಧೀಶರ ಕೊಡುಗೆ ಅಪಾರ. ಮಠ ಹಾಗೂ ಮಠಾಧೀಶರಿಗೆ ನಾವು ಋಣಿಯಾಗಿರಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.
ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾಜ ಪರಿವರ್ತನೆಯಲ್ಲಿ ಮಠಗಳ ಪಾತ್ರ ವಿಷಯದ ಕುರಿತ ವಿಚಾರ ಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರಿಗೆ, ಹಾಸ್ಟೆಲ್, ಶಾಲೆಗಳು ಇಲ್ಲದ ಅಂದಿನ ದಿನಗಳಲ್ಲಿ ಮಠಗಳು ನಿರ್ವಹಿಸಿರುವ ಕಾರ್ಯ ಅನುಪಮವಾದುದು. ಕನ್ನಡಪರ, ರೈತ ಪರ, ನೀರಾವರಿ ಹೋರಾಟಗಳಲ್ಲಿ ಮಠಾಧಿಧೀಶರು ಸಕ್ರೀಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಕರ್ನಾಟಕದ ಮಠಗಳು ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿವೆ.
ಮಠಾಧಿ ಶರೆಂದರೇ ಸರ್ವಜನಾಂಗದ ತಾಯಿ ಇದ್ದಂತೆ ಎಂದರು. ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಮಾತನಾಡಿದರು.ಸಾನ್ನಿಧ್ಯ ವಹಿಸಿದ್ದ ಬಬಲೇಶ್ವರ ಬೃಹನ್ಮಠದ ಡಾ| ಮಹಾದೇವ ಶ್ರೀಗಳು ಮಾತನಾಡಿ, ಅಂದು ಸ್ವಾತಂತ್ರ್ಯ ಹೋರಾಟದಲ್ಲಿ ಮಠಾಧೀಶರೂ ಕೂಡಾ ಪಾಲ್ಗೊಂಡು ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ರಾಜ ಮಹಾರಾಜರಿಗೆ ಗುರು ಉಪದೇಶ ನೀಡಿ ಉತ್ತಮ ಸಮಾಜ ಕಟ್ಟಲು ಪ್ರಯತ್ನಿಸಿದ್ದಾರೆ ಎಂದರು.
ತೆಲಸಂಗ ಹಿರೇಮಠ ಸಂಸ್ಥಾನದ ವೀರೇಶ್ವರ ದೇವರು, ಹಂಗಡಗೇರಿ ಪವಾಡ ಬಸವೇಶ್ವರ ಆಶ್ರಮದ ಗುರುಬಸವ ಸ್ವಾಮೀಜಿ, ಸಿಂದಗಿ ಗುರುದೇವ ಆಶ್ರಮದ ಶಾಂತಗಂಗಾಧರ ಶ್ರೀಗಳು, ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಡಾ| ಫಕೀರ ಸಿದ್ದರಾಮ ಶ್ರೀಗಳು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.