ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ
Team Udayavani, May 7, 2019, 12:38 PM IST
ವಿಜಯಪುರ: ನಗರದ ಜ್ಞಾನಯೋಗಾಶ್ರಮದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾ ಸ್ಪರ್ಧೆಯಲ್ಲಿ ವರ್ಷದ ಗಂಡು ಮಕ್ಕಳ ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ಸ್ಪರ್ಧೆಯಲ್ಲಿ ಮೊದಲ ಎರಡು ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯಪುರ ಜಿಲ್ಲಾ ಯೋಗ ಅಸೋಸಿಯೇಷನ್ ಹಾಗೂ ಜ್ಞಾನಯೋಗ ಆಶ್ರಮದ ಸಹಯೋಗದಲ್ಲಿ ವಿಜಯಪುರ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಾಘವೇಂದ್ರ ದತ್ತಾತ್ರೇಯ ಹಿಪ್ಪರಗಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಘವೇಂದ್ರ ಕೇಂದ್ರಿಯ ವಿದ್ಯಾಲಯ ವಿಜಯಪುರದ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಇದೇ ಕೇಂದ್ರಿಯ ವಿದ್ಯಾಲಯ 9ನೇ ತರಗತಿಯಲ್ಲಿ ಓದುತ್ತಿರುವ ಶ್ರೀಗಿರಿ ದತ್ತಾತ್ತೇಯ ಹಿಪ್ಪರಗಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಈ ಇಬ್ಬರು ಯೋಗಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಜೂನ್ 7ರಂದು ಉತ್ತರಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ನಡೆಯುವ ರಾಜ್ಯಮಟ್ಟ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಮಂಗಳೂರು ಏರ್ಪೋರ್ಟ್ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.