ಉತ್ತಮ ಬದುಕಿಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿ
ಸ್ವಚ್ಛತಾ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ•ವಿವಿಧ ಕಾಲೇಜಿನ 700 ವಿದ್ಯಾರ್ಥಿಗಳು ಭಾಗಿ
Team Udayavani, Jul 19, 2019, 11:03 AM IST
ವಿಜಯಪುರ: ನಗರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛಮೇವ ಜಯತೆ ಆಂದೋಲನಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಚಾಲನೆ ನೀಡಿದರು
ವಿಜಯಪುರ: ಇಂದಿನ ಯುವ ಸಮುದಾಯವು ಸ್ವಚ್ಛತೆಗೆ ವಿಶೇಷ ಗಮನ ನೀಡುವ ಮೂಲಕ ಪರಿಶುದ್ಧ ಬದುಕು ರೂಪಿಸಿಕೊಳ್ಳಲು ಮುಂದಾಗುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಕರೆ ನೀಡಿದರು.
ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛ ಮೇವ ಜಯತೆ ಆಂದೋಲನದ ಅಂಗವಾಗಿ ಸ್ವಚ್ಛತೆ, ಜಲಸಂರಕ್ಷಣೆ, ಪರಿಸರ ಸಂರಕ್ಷಣೆ ಕುರಿತ ಶಾಲಾ-ಕಾಲೇಜ್ ಮಕ್ಕಳಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಸ್ವಚ್ಛತಾ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸತ್ಯಮೇವ ಜಯತೆ ಘೋಷವಾಕ್ಯದಂತೆ ಸ್ವಚ್ಛ ಮೇವ ಜಯತೇಯ ಪರಿಕಲ್ಪನೆಯೊಂದಿಗೆ ಸ್ವಚ್ಛತೆಗೆ ವಿಶೇಷ ಗಮನ ನೀಡುವಂತೆ ಯುವ ಜನಾಂಗಕ್ಕೆ ಕರೆ ನೀಡಿದ ಅವರು, ದೇಶ ಕಟ್ಟುವಲ್ಲಿ ಯುವ ಜನಾಂಗದ ಪಾತ್ರ ಮುಖ್ಯವಾಗಿದೆ. ವಿದ್ಯಾರ್ಥಿ ಜೀವನದ ಹಂತದ ಮನಸ್ಸುಗಳು ಸ್ವಚ್ಛವಾಗಿದ್ದರೆ ಅವರ ಬಾಹ್ಯ ಚಿಂತನೆಗಳು ಕಾರ್ಯಾತ್ಮಕ ಚಟುವಟಿಕೆಗಳು ಸ್ವಚ್ಛವಾಗಿರುತ್ತವೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಂಡಿರುವ ಮೂಲ ಉದ್ದೇಶ ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದಾಗಿದೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಮ್ಮ ದೈನಂದಿನ ಚಟುವಟಿಕೆಯಲ್ಲಿ ಪರಿಶುದ್ಧತೆ ಕಾಪಾಡಿಕೊಂಡು ಹೋಗುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದ್ದರಿಂದ ಇಂತಹ ಉತ್ತಮ ಕಾರ್ಯಕ್ರಮಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಅದರ ಉದ್ದೇಶ ತಿಳಿದು ಸದೃಢ ಸ್ವಚ್ಛ ದೇಶ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಹೇಳಿದರು.
ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೂಜಾರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್.ರಾಠೊಡ, ಬೆಂಗಳೂರಿನಿಂದ ಆಗಮಿಸಿದ ಪ್ರೊಗ್ರಾಮರ್ ಅನಗಾ ಶ್ರೀಧರ, ಜಿಲ್ಲಾ ನೆರವು ಘಟಕದ ಅಧಿಕಾರಿ ಆಲಗೂರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಿದ್ದಣ್ಣ ನಿರೂಪಿಸಿದರು. ಎಸ್.ಆರ್.ಕಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.