ವೃಂದಾವನ ಧ್ವಂಸ-ವಿಪ್ರರಿಂದ ಪ್ರತಿಭಟನೆ

ದುಷ್ಕರ್ಮಿಗಳನ್ನು ಬಂಧಿಸಲು ಬ್ರಾಹ್ಮಣ ಸಮುದಾಯದಿಂದ ಕೊಪ್ಪಳ ಜಿಲ್ಲಾಡಳಿತಕ್ಕೆ ಒಕ್ಕೊರಲ ಆಗ್ರಹ

Team Udayavani, Jul 21, 2019, 10:18 AM IST

21-July-7

ಬಸವನಬಾಗೇವಾಡಿ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವ ವೃಂದಾವನ ಧ್ವಂಸಗೊಳಿಸಿದ್ದನ್ನು ಖಂಡಿಸಿ ವಿಪ್ರ ಬಾಂಧವರು ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ಗೆ ಮನವಿ ಸಲ್ಲಿಸಿದರು.

ವಿಜಯಪುರ: ಕೊಪ್ಪಳ ಜಿಲ್ಲೆಯ ಆನೆಗೊಂದಿ ಬಳಿ ತುಂಗಭದ್ರಾ ನವ ವೃಂದಾವನ ನಡುಗಡ್ಡೆಯಲ್ಲಿನ ವ್ಯಾಸರಾಜ ತೀರ್ಥರ ಮೂಲ ವೃಂದಾವನ ಧ್ವಂಸ ಕೃತ್ಯದ ದುಷ್ಕರ್ಮಿಗಳನ್ನು ಕೂಡಲೇ ಬಂಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬ್ರಾಹ್ಮಣ ಸಂಘಟನೆಗಳ ಒಕ್ಕೂಟಗಳು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆದವು.

ನಗರದ ಲಕ್ಷ್ಮೀ ದೇವಾಲಯದಿಂದ ಆರಂಭಗೊಂಡ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸರ್ವಜ್ಞ ವಿದ್ಯಾವಿಹಾರ ಪೀಠದ ಕುಲಪತಿ ಪಂ| ಮಧ್ವಾಚಾರ್ಯ ಮೊಕಾಶಿ, 800 ವರ್ಷಗಳಷ್ಟು ಹಳೆಯದಾದ ವ್ಯಾಸರಾಜ ತೀರ್ಥರ ಪವಿತ್ರ ವೃಂದಾವನದ ಧ್ವಂಸ ಮಾಡಿರುವ ಕ್ರಮ ಖಂಡನಾರ್ಹ. ಸದರಿ ಕೃತ್ಯದಿಂದ ಸಮಸ್ತ ಬ್ರಾಹ್ಮಣ ಸಮಾಜದವರ ಧಾರ್ಮಿಕ ಭಾವನೆಗಳಿಗೆ ಅತ್ಯಂತ ನೋವುಂಟು ಮಾಡಿದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು, ಮುಂದೆ ಈ ರೀತಿ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವೃಂದಾವನ ಧ್ವಂಸಗೊಳಿಸಿರುವುದು ಒಂದು ಕರಾಳ ದಿನ. ವ್ಯಾಸ ರಾಜತೀರ್ಥರು ಅಗಾಧವಾದ ಪಾಂಡಿತ್ಯವುಳ್ಳವರಾಗಿದ್ದರು. ದಾಸ ಸಾಹಿತ್ಯದ ಕೀರ್ತನೆ ರಚನೆ ಮಾಡಿದವರು, ಅದರಂತೆ ಪುರಂದರದಾಸರು ಹಾಗೂ ಕನಕದಾಸರ ಗುರುಗಳಾಗಿ ಕನ್ನಡ ದಾಸ ಸಾಹಿತ್ಯವನ್ನು ಉಣಬಡಿಸಿದ ಮಹಾನ್‌ ವೈರಾಗ್ಯ ಶಿಖಾಮಣಿ ವ್ಯಾಸರಾಜ ತೀರ್ಥರು. ಇಂತಹ ಪುಣ್ಯ ಪುರುಷನ ವೃಂದಾವನವನ್ನು ನಿಧಿ ಆಸೆಗಾಗಿ ಹಾಳು ಮಾಡಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಮಹಾಪುಣ್ಯ ಕ್ಷೇತ್ರವಾದ ನವ ವೃಂದಾವನದಲ್ಲಿ ಒಟ್ಟು ಒಂಭತ್ತು ಮಹಾನ್‌ ಯತಿಗಳ ವೃಂದಾವನಗಳಿವೆ. ಈ ಯತಿವರೇಣ್ಯರ ವೃಂದಾವನಗಳಿಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಂಡು ಸುರಕ್ಷತಾ ಕ್ರಮ ಕೈಗೊಳ್ಳಬೇಕು, ನವ ವೃಂದಾವನದ ಆಸ್ತಿಯ ಮಾಲೀಕತ್ವ ಹೊಂದಿದವರಿಗೆ ಸಮಸ್ತ ವೃಂದಾವನಗಳನ್ನು ರಕ್ಷಣೆ ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ನಿರ್ದೇಶನ ನೀಡಬೇಕು ಎಂದು ಬ್ರಾಹ್ಮಣ ಸಮಾಜ ಒತ್ತಾಯಿಸಿತು.

ಪಂ| ಸಂಜೀವಾಚಾರ್ಯ ಮದಭಾವಿ, ಪಂ| ಪ್ರದ್ಯುಮ್ನಾಚಾರ್ಯ ಪೂಜಾರ, ಬ್ರಾಹ್ಮಣ ಸಮಾಜದ ಮುಖಂಡರಾದ ಆನಂದ ಜೋಶಿ, ಪ್ರಕಾಶ ಅಕ್ಕಲಕೋಟ, ಶ್ರೀನಿವಾಸ ಬೇಟಗೇರಿ, ಗೋವಿಂದರಾವ್‌ ದೇಶಪಾಂಡೆ, ಶ್ರೀಹರಿ ಗೊಳಸಂಗಿ, ವಿಜಯ ಜೋಶಿ, ಕೃಷ್ಣಾ ಗುನ್ನಾಳಕರ, ವಿವೇಕ ತಾವರಗೇರಿ, ರವೀಂದ್ರ ಕುಲಕರ್ಣಿ, ಕೆ.ಜಿ. ಕುಲಕರ್ಣಿ, ಅನುಪಮ ಕೊರ್ತಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.