ಕನಸುಗಳ ಸಾಕಾರಕ್ಕೆ ಶ್ರಮಿಸಿ: ಡಾ| ಸಬಿಹಾ
ಮಹಿಳಾ ವಿವಿಯಲ್ಲಿ ಇತಿಹಾಸ ಕ್ಲಬ್‌ಗ ಚಾಲನೆ
Team Udayavani, May 4, 2019, 5:21 PM IST
ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಕ್ಲಬ್ ಸಂಗ್ರಹಿಸಿರುವ ಪುರಾತನ ವಸ್ತುಗಳನ್ನು ಕುಲಪತಿ ಪ್ರೊ| ಸಬಿಹಾ ವೀಕ್ಷಿಸಿದರು.
ವಿಜಯಪುರ: ವಿದ್ಯಾರ್ಥಿನಿಯರು ಕನಸುಗಾರ ರಾಗಿರಬೇಕು. ಕಂಡ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಪರಿಶ್ರಮದಿಂದ ಗುರಿ ಸಾಧನೆಗೆ ಮುಂದಾಗಬೇಕು. ಇದಕ್ಕಾಗಿ ದಿಟ್ಟ ಹೆಜ್ಜೆಯನ್ನಿಡಲು ಇಂದಿನಿಂದಲೇ ಸನ್ನದ್ಧರಾಗಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕುಲಪತಿ ಪ್ರೊ|ಸಬಿಹಾ ಸಲಹೆ ನೀಡಿದರು.
ಶುಕ್ರವಾರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇತಿಹಾಸ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ್ದ ಇತಿಹಾಸ ಕ್ಲಬ್‌ಗ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸಕ್ತ ಸಂದರ್ಭದಲ್ಲಿ ಮಕ್ಕಳಲ್ಲಿ ನವೀನ ಕೌಶಲ್ಯಗಳು ಮನೆ ಮಾಡಬೇಕು. ಪಠ್ಯೇತರ ಹಾಗೂ ಪಠ್ಯಪೂರಕ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಾಹಿತ್ಯದ ಓದು, ಬರಹದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ಸಕಾರಾತ್ಮಕ ಚಿಂತನೆಗೆ ನಮ್ಮ ಚೈತನ್ಯ ಉದ್ದೀಪನಗೊಳ್ಳಲು ಸಹಕಾರಿ ಅಗಲಿದೆ ಎಂದರು.
ನಾವು ಸಣ್ಣ ಮನಸ್ಸಿನವರಾಗದೇ, ನಮ್ಮಲ್ಲಿನ ಕುಬ್ಜ ವಿಚಾರಗಳನ್ನು ಬಿಟ್ಟು ಜಗತ್ತಿನ ಆಗು ಹೋಗುಗಳ ಕಡೆಗೆ ಗಮನ ಕೊಟ್ಟು ನಮ್ಮ ಜ್ಞಾನವನ್ನು ಇಮ್ಮಡಿಗೊಳಿಸಿಕೊಳ್ಳಬೇಕು. ಪ್ರಮುಖ ವ್ಯಕ್ತಿಗಳ ಸಂದರ್ಶನ, ಹೊಸದಾದ ವಿಚಾರಗಳನ್ನು ಕರಗñ ಮಾಡಿಕೊಂಡು ಬುದ್ಧಿಮತ್ತೆ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕ ಮಾತನಾಡಿದ ಸಮಾಜ ವಿಜ್ಞಾನ ನಿಕಾಯದ ಡೀನ್ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಓಂಕಾರ ಕಾಕಡೆ, ನಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ನವೀನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಕಲಿಕೆ ಮಟ್ಟ ಹೆಚ್ಚಾದಂತೆ ನಮ್ಮ ಅಭಿವೃದ್ಧಿ ಹೆಚ್ಚುತ್ತದೆ ಎಂದು ಹೇಳಿದರು.
ಇತಿಹಾಸ ವಿಭಾಗದ ಉಪನ್ಯಾಸಕ ಡಾ| ಆನಂದ ಕುಲಕರ್ಣಿ ನಿರೂಪಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಡಾ| ಎಂ.ಎಸ್. ಮುಜಾವರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.