ಬಿಜೆಪಿ ಗೆಲುವಿಗೆ ಕಾರ್ಯಕರ್ತರ ಶ್ರಮ
Team Udayavani, Mar 25, 2019, 1:19 PM IST
ತಿ.ನರಸೀಪುರ: ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವುದು ಖಚಿತ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಎಚ್.ಎಂ.ಪರಶಿವಮೂರ್ತಿ ಹೇಳಿದರು.
ಪಟ್ಟಣದ ಬಸವಶ್ರೀ ಸ್ಟುಡಿಯೋದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೌಲ್ಯಯುತ ರಾಜಕಾರಣದೊಂದಿಗೆ ಜನಪರ ಹೋರಾಟ ಮಾಡಿಕೊಂಡು ಐದು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದೆ.
ಶ್ರೀನಿವಾಸ್ ಅವರು ಈ ಹಿಂದಿನ ಎನ್‌ಡಿಎ ಸರ್ಕಾರದ ಅವಧಿಯಲ್ಲೇ ಸಚಿವರಾಗಿ ಬಡವರ ಮತ್ತು ರೈತಪರ ಕೆಲಸ ಮಾಡಿದ್ದರು. ಕ್ಷೇತ್ರದ ಜನರಿಗೆ ಚಿರಪರಿಚಿತರಾಗಿರುವುದರಿಂದ ಈ ಬಾರಿ ಮತ್ತೆ ಲೋಕಸಭೆಗೆ ಆಯ್ಕೆಗೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದರು.
ಬದ್ಧತೆಯಿಂದ ದುಡಿಯುತ್ತೇವೆ: ಲೋಕಸಭಾ ಚುನಾವಣೆ ಕೇಂದ್ರ ಹಾಗೂ ರಾಜ್ಯ ರಾಜಕಾರಣಕ್ಕೆ ಪ್ರತಿಷ್ಠೆಯಾಗಿರುವುದರಿಂದ ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿನ ಪ್ರತಿಯೊಬ್ಬ ಮುಖಂಡ, ಕಾರ್ಯಕರ್ತರೂ ಹೆಚ್ಚಿನ ಕಾಳಜಿ ವಹಿಸಿ, ಸಂಘಟಿತರಾಗಿ ದುಡಿಯಲಿದ್ದಾರೆ.
ಕ್ಷೇತ್ರದಿಂದ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಆಗಿದ್ದಂತಹ ಕಹಿ ಘಟನೆ ಮರೆತು ಎಲ್ಲರೂ ಒಂದಾಗಿ ಲೋಕ ಸಮರದಲ್ಲಿ ಬಿಜೆಪಿ ಗೆಲ್ಲಿಸಲಿಕ್ಕೆ ಬದ್ಧತೆಯಿಂದ ದುಡಿಯುತ್ತೇವೆಂದರು.
ಸಜ್ಜಾಗಿದ್ದಾರೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕರೋಹಟ್ಟಿ ಮಹದೇವಯ್ಯ ಮಾತನಾಡಿ, ದಲಿತರ ಹಿರಿಯ ನಾಯಕರಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಬಿಜೆಪಿಗೆ ದಲಿತ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಲಿವೆ. ಶ್ರೀನಿವಾಸ್ ಪ್ರಸಾದ್ ಅವರು ಅಭ್ಯರ್ಥಿ ಎಂದು ಘೋಷಣೆಯಾದ ಕೂಡಲೇ ಬೂತ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸೋಸಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಪರಶಿವಮೂರ್ತಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಬಸವರಾಜು, ಸಾಮಾಜಿಕ ಜಾಲತಾಣ ಸಂಚಾಲಕ ದಯಾನಂದ ಪಟೇಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.