ಅಂಬೇಡ್ಕರ್ ನಾಮಫಲಕ ತೆರವಿಗೆ ಆಕ್ರೋಶ
ದಲಿತ ಸಂಘಟನೆಯಿಂದ ಧರಣಿ •ಸ್ಥಳಕ್ಕೆ ತಹಶೀಲ್ದಾರ್ ಸಂತೋಷಿರಾಣಿ ಭೇಟಿ
Team Udayavani, Jun 14, 2019, 5:13 PM IST
ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಜಮಾಯಿಸಿದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಯಾದಗಿರಿ: ಜಿಲ್ಲೆಯ ವಡಗೇರಾ ಹಳೆ ಪೊಲೀಸ್ ಠಾಣೆ ಹಿಂಭಾಗದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ನಾಮಫಲಕವನ್ನು ಗ್ರಾಮ ಪಂಚಾಯಿತಿ ಅಧಿಕಾರಿ, ಪೊಲೀಸ್ ಅಧಿಕಾರಿ ತೆರವುಗೊಳಿಸಿದ್ದರಿಂದ ಗ್ರಾಮಸ್ಥರು ರಸ್ತೆ ತಡೆದು ಧರಣಿ ನಡೆಸಿದ್ದಾರೆ.
ಸುಮಾರು 4-5 ದಿನದ ಹಿಂದೆ ಅಂಬೇಡ್ಕರ್ ನಾಮಫಲಕ ಹಾಕಲಾಗಿತ್ತು, ಸ್ಥಳ ಪೊಲೀಸ್ ಇಲಾಖೆಗೆ ಸಂಬಂಧಿಸಿದೆ ಇಲ್ಲಿ ನಾಮಫಲಕ ಹಾಕಲು ಬರುವುದಿಲ್ಲ ಎಂದು ತಿಳಿಸಲಾಗಿತ್ತು. ಆದರೆ ಖಾಸಗಿ ವ್ಯಕ್ತಿಗಳ ಸ್ಥಳದಲ್ಲಿ ನಾಮಫಲಕ ಹಾಕುವುದಾಗಿ ಹೇಳಿ ಹಳೆಯ ಪೊಲೀಸ್ ಠಾಣೆ ಆವರಣದಲ್ಲಿ ಫಲಕ ಹಾಕಿದ್ದರಿಂದ ಪೊಲೀಸರು ತೆರವುಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ದಲಿತ ಸಂಘಟನೆಯ ಪ್ರಮುಖರು ಪೋಲಿಸರು ನಾಮಫಲಕ ತೆರವುಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ದೂರಿ ಗುರುವಾರವೇ ಜಿಲ್ಲಾಧಿಕಾರಿಗಳಿಗೂ ದೂರು ನೀಡಿದ್ದರು. ದೂರು ನೀಡಿ ಪಟ್ಟಣಕ್ಕೆ ತೆರಳುವಷ್ಟು ವೇಳೆಗೆ ನಾಮಫಲಕ ತೆರವುಗೊಳಿಸಿದ್ದರಿಂದ ಆಕ್ರೋಶಗೊಂಡು ಏಕಾಏಕಿ ಧರಣಿ ಆರಂಭಿಸಿದ್ದಾರೆ.
ಧರಣಿ ಸ್ಥಳಕ್ಕೆ ವಡಗೇರಾ ತಹಶೀಲ್ದಾರ್ ಸಂತೋಷಿರಾಣಿ ಭೇಟಿ ನೀಡಿ ನಿಯಮದ ಪ್ರಕಾರ ಗ್ರಾಮಸಭೆ ನಡೆಸಿ ಬಳಿಕ ನಾಮಫಲಕ ಹಾಕುವುದರ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಧರಣಿ ನಿರತರಿಗೆ ಸಮಜಾಯಿಷಿ ನೀಡಿ ಧರಣಿ ಕೈ ಬಿಡುವಂತೆ ಮನವಿ ಮಾಡಿದ್ದಾರೆ.
ಸದ್ಯ ನಾಮಫಲಕ ಹಾಕಿ ಆ ಬಳಿಕ ಸರ್ವೇ ನಡೆಸಿ ಆಗ ಸ್ಥಳ ಪೊಲೀಸ್ ಠಾಣೆಗೆ ಸಂಬಂಧಿಸಿದ್ದು ಎಂದಾದರೆ ನಾವಾಗಿಯೇ ನಾಮಫಲಕ ತೆರವು ಮಾಡುತ್ತೇವೆ ಎಂದು ಧರಣಿ ನಿರತರು ಪಟ್ಟು ಹಿಡಿದಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗ್ರಾಮಕ್ಕೆ ಯಾದಗಿರಿ ಡಿವೈಎಸ್ಪಿ ಯು. ಶರಣಪ್ಪ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.