ಅಂಗಡಿಗಳ ಮೇಲೆ ದಾಳಿ
ಪ್ಲಾಸ್ಟಿಕ್ ಬಳಕೆ-ತಂಬಾಕು ಮಾರಾಟ •18 ಪ್ರಕರಣ ದಾಖಲು-3600 ರೂ. ದಂಡ
Team Udayavani, Aug 2, 2019, 12:35 PM IST
ಯಾದಗಿರಿ: ಸ್ಟೇಷನ್ ಏರಿಯಾದಲ್ಲಿ ಕಿರಾಣಿ ಅಂಗಡಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್ ಬಳಕೆ ಹಾಗೂ ತಂಬಾಕು ಉತ್ಪನ್ನ ಮಾರಾಟಗಾರರಿಗೆ ದಂಡ ವಿಧಿಸಿದರು.
ಯಾದಗಿರಿ: ನಗರದ ರೈಲು ನಿಲ್ದಾಣ ಏರಿಯಾ, ಮಾರುಕಟ್ಟೆ ಪ್ರದೇಶ, ಸುಭಾಷ್ ವೃತ್ತ, ಮುದ್ನಾಳ ಪೆಟ್ರೋಲ್ ಪಂಪ್, ಹಳೆ ಬಸ್ ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣದ ಸುತ್ತಮುತ್ತಲಿನ ಸ್ಟಾಲ್, ಮಳಿಗೆ, ಅಂಗಡಿಗಳ ಮೇಲೆ ಬುಧವಾರ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್, ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
ಅನಿರೀಕ್ಷಿತ ದಾಳಿ, ತಪಾಸಣೆ ಸಂದರ್ಭದಲ್ಲಿ ಅಂಗಡಿಗಳ ಮಾಲೀಕರ ವಿರುದ್ಧ ಒಟ್ಟು 18 ಪ್ರಕರಣ ದಾಖಲಿಸಿಕೊಂಡಿದ್ದು, 3600 ರೂ. ದಂಡ ವಿಧಿಸಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಆದೇಶ ಪಡೆದು ದಾಳಿ ನಡೆಸಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸಿದಲ್ಲಿ 25000 ರೂ. ವರೆಗೆ ದಂಡ ವಿಧಿಸುವುದರ ಜತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ. ಬಾಲ ಕಾರ್ಮಿಕ ಪದ್ಧತಿ 1986ರ ಕಾಯ್ದೆಯಡಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂಬ ವಿಷಯದ ಕುರಿತು ಅರಿವು ಮೂಡಿಸಲಾಗಿದೆ ಎಂದು ಹೇಳಿದರು.
ಸಾಕಷ್ಟು ಬಾರಿ ಜಾಥಾ, ಆಟೋ ಪ್ರಚಾರ, ಕರಪತ್ರಗಳ ವಿತರಣೆ ಮೂಲಕ, ಕಾನೂನು ಅರಿವು- ನೆರವು ಕಾರ್ಯಕ್ರಮಗಳು ಮತ್ತು ಹಲವಾರು ಬಾರಿ ಅನಿರೀಕ್ಷಿತ ತಪಾಸಣೆ, ದಾಳಿ ಮಾಡಿ ಸಾರ್ವಜನಿಕರಿಗೆ ಹಾಗೂ ಸಬಂಧಿಸಿದ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಲಾಗಿದೆ. ಆದರೂ ಹಲವಾರು ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿರುವುದು, ಬಹಿರಂಗವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷ್ಮೀ ಸಜ್ಜನ ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿ ಸೆಕ್ಷನ್ 4, 5, 6, 6ಎ, 6ಬಿ ಮತ್ತು 7ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೋರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದನ್ನು ಕಾನೂನಿನ ಪ್ರಕಾರ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ಹೇಳಿದರು.
ಪರಿಸರ ಇಂಜಿನಿಯರ್ ಸಂಗಮೇಶ, ಎಎಸ್‌ಐ ಕಲ್ಯಾಣಿ, ವಾಯು ಮಾಲಿನ್ಯ ನಿಯಂತ್ರಣ ಸಹಾಯಕ ಪರಿಸರ ಅಧಿಕಾರಿಗಳಾದ ಬಸವರಾಜ ಮತ್ತು ನಗರಸಭೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.