ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ

ಗಂಡು ಹೆಣ್ಣೆಂಬ ಭೇದ ಸಲ್ಲಆಶಾ ಕಾರ್ಯಕರ್ತೆಯರಿಗೂ ಕುಟುಂಬ ಕಲ್ಯಾಣ ಯೋಜನೆ ತರಬೇತಿ

Team Udayavani, Oct 25, 2019, 4:13 PM IST

25-October–22

ಯಾದಗಿರಿ: ಜನಸಂಖ್ಯೆ ಹೆಚ್ಚಳದಿಂದ ಹಲವು ರೀತಿಯ ಸಮಸ್ಯೆ ಉಂಟಾಗುತ್ತವೆ. ದೇಶದ ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜವಾಬ್ದಾರಿಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ನಾವಿಬ್ಬರು ನಮಗೊಬ್ಬರು ಘೋಷಣೆ ಅನುಸರಿಸಲು ಜಾಗೃತಿ ಮೂಡಿಸಬೇಕಿದೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸೂರ್ಯಪ್ರಕಾಶ ಎಂ.ಕಂದಕೂರ ಹೇಳಿದರು.

ನಗರದ ಎನ್‌ವಿಎಂ ಹೋಟೆಲ್‌ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎನ್‌ಜೆಂಡರ್‌ ಹೆಲ್ತ್‌ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಮಟ್ಟದಲ್ಲಿ ಉತ್ತಮವಾಗಿ ಕುಟುಂಬ ಕಲ್ಯಾಣ ಸೇವೆ ಒದಗಿಸುತ್ತಿರುವ ವೈದ್ಯರು, ಶುಶ್ರೂಷಕರು ಮತ್ತು ಆರೋಗ್ಯ ಸಂಸ್ಥೆಗಳಿಗೆ ಪ್ರಶಸ್ತಿ ವಿತರಣೆ ಸಮಾರಂಭ ಹಾಗೂ ಮಾಧ್ಯಮದವರಿಗೆ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜನರಿಗೆ ತಿಳಿ ಹೇಳಿ: ಜನಸಂಖ್ಯೆ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಪಾತ್ರ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಗಂಡು-ಹೆಣ್ಣಿನ ನಡುವೆ ಭೇದ-ಭಾವ ಬೇಡ, ಬೇಟಿ ಬಚಾವೋ ಬೇಟಿ ಪಡಾವೋ ಆಂದೋಲನಕ್ಕೆ ಆದ್ಯತೆ ನೀಡಿ, ಮಗುವಿನ ಜನನದಲ್ಲಿ ಕನಿಷ್ಠ ಮೂರು ವರ್ಷಗಳ ಅಂತರವಿರಲಿ ಎಂದು ತಿಳಿಹೇಳಬೇಕು. ದೇಶದಲ್ಲಿ ಜನನ ಪ್ರಮಾಣ ಹೆಚ್ಚಾಗಿದ್ದು, ಇನ್ನು ಕೆಲವೇ ವರ್ಷಗಳಲ್ಲಿ ವಿಶ್ವದಲ್ಲಿ 2ನೇ ಸ್ಥಾನದಲ್ಲಿರುವ ನಾವು ಮೊದಲನೇ ಸ್ಥಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಯೋಜನೆ ಸದುಪಯೋಗಪಡಿಸಿಕೊಳ್ಳಿ: ಕುಟುಂಬ ಕಲ್ಯಾಣ ಯೋಜನೆ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕಾರ್ಯಗಳ ಕುರಿತು ವಿವರಿಸಿದ ಅವರು, ಪರಿಣಾಮಕಾರಿಯಾದ ಆಪ್ತ ಸಮಾಲೋಚನೆ ಮೂಲಕ ಮಹಿಳೆ ತನ್ನ ಸಂತಾನೋತ್ಪತ್ತಿ ಆರೋಗ್ಯ ಹಕ್ಕು ಚಲಾಯಿಸಲು ಸಮರ್ಥಳು. ಸರಕಾರವು ಇತ್ತೀಚೆಗೆ ಹಲವಾರು ನೂತನ ಗರ್ಭ ನಿರೋಧಕ ಕುಟುಂಬ ಯೋಜನೆ ಜಾರಿಗೆ ತಂದಿದ್ದು, ಅವುಗಳಲ್ಲಿ ಮೂರು ತಿಂಗಳಿಗೊಮ್ಮೆ ಇಂಜೆಕ್ಷನ್‌ ರೂಪದಲ್ಲಿ ತೆಗೆದುಕೊಳ್ಳುವ ಅಂತರ ಎಂಪಿಎ, ನುಂಗುವ ಗುಳಿಗೆಗಳಾದ ಛಾಯಾ ಮುಂತಾದವುಗಳಿವೆ. ಇವುಗಳಲ್ಲಿ ಸೂಕ್ತ ಗರ್ಭ ನಿರೋಧಕ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಈ ಎಲ್ಲ ಕುಟುಂಬ ಗರ್ಭ ನಿರೋಧಕ ಯೋಜನೆಗಳನ್ನು ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಎನ್‌ಜೆಂಡರ್‌ ಸಂಸ್ಥೆ ವತಿಯಿಂದ ಆಯ್ಕೆಯಾದ ಆರೋಗ್ಯ ಸಂಸ್ಥೆಗಳಲ್ಲಿ ಕುಟುಂಬ ಕಲ್ಯಾಣ ಸೇವೆ ಒದಗಿಸುತ್ತಿರುವ ವೈದ್ಯರು ಮತ್ತು ಶುಶ್ರೂಷಕರಿಗೆ ತರಬೇತಿ ನೀಡಲಾಗಿದೆ. ಈ ಆರೋಗ್ಯ ಸಂಸ್ಥೆಗಳು ದಂಪತಿಗಳ ಅಗತ್ಯ ಪೂರೈಸುವ ನಿಟ್ಟಿನಲ್ಲಿ ಸಜ್ಜುಗೊಂಡಿವೆ. ಆಶಾ ಕಾರ್ಯಕರ್ತೆಯರಿಗೂ ಸಹ ಕುಟುಂಬ ಕಲ್ಯಾಣ ಯೋಜನೆ ತರಬೇತಿ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎನ್‌ಜೆಂಡರ್‌ ಹೆಲ್ತ್‌ ಸಂಸ್ಥೆಯ ಹಿರಿಯ ವೈದ್ಯಕೀಯ ತರಬೇತುದಾರರಾದ ಡಾ| ಶಾಂತಿ ಪಿಪಿಟಿ ಮೂಲಕ ದೇಶದ ಜನಸಂಖ್ಯಾ ನಿಯಂತ್ರಣದಲ್ಲಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಕುಟುಂಬ ಕಲ್ಯಾಣಾಧಿ ಕಾರಿ ಡಾ| ಎಸ್‌.ಬಿ. ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ನಾರಾಯಣಪ್ಪ ಹಾಗೂ ಎನ್‌ಜೆಂಡರ್‌ ಹೆಲ್ತ್‌ ಸಂಸ್ಥೆ ಯೋಜನಾ ಸಂಯೋಜನಾಧಿಕಾರಿ ಡಾ| ಡೆಬಾಸಿಸ್‌ ಉಪಸ್ಥಿತರಿದ್ದರು.

ಎನ್‌ಜೆಂಡರ್‌ ಹೆಲ್ತ್‌ ಸಂಸ್ಥೆಯ ಹಿರಿಯ ವೈದ್ಯಕೀಯ ತರಬೇತುದಾರರಾದ ಶೈಲಜಾ, ಯೋಜನಾ ಸಹಾಯಕ ಯಲ್ಲಪ್ಪ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿ ಬಿರಾದರ ಶಂಕರ ನಿರೂಪಿಸಿದರು. ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್‌ ವಂದಿಸಿದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.