ಕಾಯಕ ತತ್ವದಿಂದ ನೆಮ್ಮದಿ ಜೀವನ ಸಾಧ್ಯ

ಬಸವಣ್ಣನವರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲ: ಪ್ರಕಾಶ ರಜಪೂತ

Team Udayavani, May 8, 2019, 3:56 PM IST

8-May-27

ಯಾದಗಿರಿ: ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ತ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಯಾದಗಿರಿ: ಜಗಜ್ಯೋತಿ ಬಸವೇಶ್ವರರ ಕಾಯಕ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ ಕರೆ ನೀಡಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನೆಂದರೆ ನ್ಯಾಯ, ಸರಳತೆ, ಪಾರದರ್ಶಕತೆ, ಸಮಭಾವ, ಸಮಬಾಳು, ಪರಿಶುದ್ಧತೆ, ಹಿರಿತನ, ಸಮೃದ್ಧಿ, ಸಂತೃಪ್ತಿ, ಅರಿವು, ಆಚರಣೆ, ನೀತಿ ಮುಂತಾದ ಶಬ್ದಗಳಿಂದ ಹೆಸರಿಸಬಹುದು. ಆದರೆ, ಬಸವೇಶ್ವರರನ್ನು ಎಷ್ಟು ವರ್ಣಿಸಿದರೂ ಅವರ ಸರಳ ಜೀವನಕ್ಕೆ ಸಾಟಿಯಾಗಲಾರದು ಎಂದು ಹೇಳಿದರು.

ಬಸವಣ್ಣನವರದ್ದು ಯಾವುದೇ ಒಂದು ವಿಷಯ ಅಥವಾ ಜಾತಿಗೆ ಸೀಮಿತಗೊಳಿಸಿ ಮಾತನಾಡುವಂತಹ ವ್ಯಕ್ತಿತ್ವ ಅಲ್ಲ. 12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಕಲ್ಪಿಸಿದ ಮಹಾನ್‌ ಮಾನವತಾವಾದಿ. ಕಾಯಕವೇ ಕೈಲಾಸ ಎಂದು ಸಾರಿ ಆರ್ಥಿಕ ತಜ್ಞರಾಗಿ, ಸಾಮಾಜಿಕ ಚಿಂತಕರಾಗಿ, ಅಧ್ಯಾತ್ಮ ಗುರುವಾಗಿ ಸಕಲರನ್ನೂ ಉದ್ಧರಿಸಿದ್ದಾರೆ. ವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾಯಕ ಮಾಡಿದ್ದಾರೆ ಎಂದು ತಿಳಿಸಿದರು.

ಉಪನ್ಯಾಸಕಿ ಡಾ| ಜ್ಯೋತಿಲತಾ ತಡಿಬಿಡಿಮಠ ಉಪನ್ಯಾಸ ನೀಡಿ, ಜಗಜ್ಯೋತಿ ಬಸವಣ್ಣನವರು ಬಸವನಬಾಗೇವಾಡಿಯಲ್ಲಿ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗೆ 1134ರಲ್ಲಿ ಜನಿಸಿದರು. 12ನೇ ಶತಮಾನವನ್ನು ಭರತಖಂಡದ ಧಾರ್ಮಿಕ ಪರಂಪರೆಯಲ್ಲಿ ಚಿರಸ್ಮರಣೀಯ ಘಟ್ಟವನ್ನಾಗಿಸಿದ ಮಹಾನ್‌ ವ್ಯಕ್ತಿ ಜಗಜ್ಯೋತಿ ಶ್ರೀ ಬಸವೇಶ್ವರರು. ಅವರು ಅನೇಕ ವಚನಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರವನ್ನು ಅತ್ಯಂತ ಶ್ರೀಮಂತಗೊಳಿಸಿದ್ದಾರೆ ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ವೀರಶೈವ ಸಮಾಜದ ನಗರ ಘಟಕ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ ಉಪಸ್ಥಿತರಿದ್ದರು. ಸಮಾಜದ ಮುಖಂಡರಾದ ಮಹಾದೇವಪ್ಪ ಆರ್‌. ಅಬ್ಬೆತುಮಕೂರು, ಸಿದ್ದಪ್ಪ ಹೊಟ್ಟಿ, ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ, ಚನ್ನಪ್ಪ ಠಾಣಗುಂದಿ, ಸಾಹಿತಿ ನೂರಂದಪ್ಪ ಲೇವಡಿ, ಚನ್ನಾರೆಡ್ಡಿ ಬಿಳಾØರ, ಶಶಿಕಾಂತ ಕಶೆಟ್ಟಿ, ಶರಣಗೌಡ ಬಾಡಿಯಾಳ, ನೀಲಕಂಠ ಶೀಲವಂತ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಲಿಂಗೇರಿ ಸ್ಟೇಷನ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ಸಂಗಡಿಗರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಸುಬಮ್‌ ಪದವಿ ಕಾಲೇಜಿನ ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.

ಟಾಪ್ ನ್ಯೂಸ್

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.