ಜನತಾ ದರ್ಶನ ಯಶಸ್ಸಿಗೆ ಸಿದ್ಧತೆ ಕೈಗೊಳ್ಳಿ
ಸಿಎಂ ವಾಸ್ತವ್ಯ ಕೊಠಡಿ, ಮೂಲಭೂತ ಸೌಕರ್ಯ ವೀಕ್ಷಿಸಿದ ಶಾಸಕ ನಾಗನಗೌಡ ಕಂದಕೂರ
Team Udayavani, Jun 13, 2019, 11:24 AM IST
ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ ಮಾಡಲಿರುವ ಶಾಲೆಗೆ ಭೇಟಿ ನೀಡಿ ಶಾಸಕ ನಾಗನಗೌಡ ಕಂದಕೂರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಯಾದಗಿರಿ: ಜೂನ್ 21ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದ ಶಾಲೆಯಲ್ಲಿ ವಾಸ್ತವ್ಯ ಮಾಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಶಾಸಕ ನಾಗನಗೌಡ ಕಂದಕೂರ ಅಧಿಕಾರಿಗಳಿಗೆ ಸೂಚಿಸಿದರು.
ಚಂಡರಕಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಸಿಎಂ ವಾಸ್ತವ್ಯ ಹೂಡುವ ಶಾಲೆಯ ಆವರಣವನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಶಾಲೆಯಲ್ಲಿಯೇ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.
ಗ್ರಾಮ ವಾಸ್ತವ್ಯದಲ್ಲಿ ಪ್ರಮುಖವಾಗಿ ಜನತಾ ದರ್ಶನ ಇದ್ದು, ಹಾಗಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲು ಸಲ್ಲಿಸಲು ಬರುವುದರಿಂದ ಅದಕ್ಕೆ ತೊಂದರೆಯಾಗದಂತೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮಕ್ಕೆ ಹಾಕಲಾಗುವ ಬೃಹತ್ ಪೆಂಡಾಲ್, ವಾಹನ ನಿಲುಗಡೆ, ಸಿಎಂ ವಾಸ್ತವ್ಯ ಮಾಡುವ ಕೊಠಡಿ ಹೀಗೆ ಶಾಲೆ ಆವರಣದಲ್ಲಿ ಮೂಲ ಸೌಕರ್ಯಗಳ ಒದಗಿಸುವ ಕುರಿತು ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮಾತನಾಡಿ, ಬೆಳಗ್ಗೆಯಿಂದ ಸಂಜೆ 6:30ರ ವರೆಗೆ ಜನತಾ ದರ್ಶನ ನಡೆಯಲಿದ್ದು, ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಸಾರ್ವಜನಿಕರು ಸಾಲಾಗಿ ಬಂದು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದರು. ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ ನಡೆಸಿ, 15 ಸಮಿತಿಗಳನ್ನು ರಚಿಸಲಾಗಿದ್ದು, ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಗಮನಕ್ಕೆ ತಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಣೆ ಭಗವಾನ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಪಂ ಪ್ರಭಾರಿ ಉಪ ಕಾರ್ಯದರ್ಶಿ ಮುನಿಸ್ವಾಮಿ, ಲೋಕೋಪಯೋಗಿ ಇಲಾಖೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚನ್ನಬಸ್ಸಪ್ಪ ಮೆಕಾಲೆ, ಡಿವೈಎಸ್ಪಿ ಯು. ಶರಣಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಯ್ಯ ಸ್ವಾಮಿ, ತಹಶೀಲ್ದಾರ್ ಶಶಿಧರಾಚಾರ್ಯ ಸೇರಿದಂತೆ ಪ್ರಮುಖರಾದ ಜಿ. ತಮ್ಮಣ್ಣ, ಪ್ರಕಾಶ ನೀರೆಟಿ, ಬಾಲಪ್ಪ ನೀರೆಟಿ, ವೀರಪ್ಪ ಪ್ಯಾಟಿ, ಮಲ್ಲಿಕಾರ್ಜುನ ಅರುಣಿ, ನಾಗೇಂದ್ರಪ್ಪ ಚಂಡರಕಿ, ಜನದೀಶ ಕಲಾಲ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.