ನೆರೆ ಪರಿಹಾರಕ್ಕೆ ಆಗ್ರಹಿಸಿ ಧರಣಿ

ತ್ವರಿತವಾಗಿ 5 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕಾಂಗ್ರೆಸ್‌ ಕಾರ್ಯಕರ್ತರ ಒತ್ತಾಯ

Team Udayavani, Sep 13, 2019, 1:30 PM IST

13-Sepctember-9

ಯಾದಗಿರಿ: ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧರಣಿ ಸತ್ಯಾಗ್ರಹ ನಡೆಸಿದರು.

ಯಾದಗಿರಿ: ರಾಜ್ಯದಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಕೇಂದ್ರ ಸರ್ಕಾರ 5 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮರಿಗೌಡ ಪಾಟೀಲ ಹುಲ್ಕಲ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ 22 ಜಿಲ್ಲೆಗಳ 103 ತಾಲೂಕಗಳಲ್ಲಿ ನೆರೆ ಬಂದು ಬೆಳೆ ನಷ್ಟ, ವಿದ್ಯುತ್‌ ಸಂಪರ್ಕ ಕಡಿತವಾಗಿ ಜನರ ಬದುಕು ಕತ್ತಲೆಯಲ್ಲಿ ಕಳೆಯುವಂತಾಗಿದೆ. ನೆರೆ ಹಾನಿಯಿಂದ 88 ಜನರು ಜೀವ ಕಳೆದುಕೊಂಡಿದ್ದಾರೆ. 10 ಜನರು ನಾಪತ್ತೆಯಾಗಿದ್ದಾರೆ ಎಂದರು.

7.90 ಲಕ್ಷ ಹೆಕ್ಟೇರ್‌ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ. 2,37 ಲಕ್ಷ ಮನೆ ಹಾನಿ, 1.70 ಲಕ್ಷ ಮನೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. 35,000 ಕಿಮೀ ರಸ್ತೆಗಳು, 2828 ಬ್ರಿಜ್‌ ಕಂ ಬ್ಯಾರೆಜ್‌ಗಳಿಗೆ ಹಾನಿಯಾಗಿದೆ. 57000 ಸಾವಿರ ವಿದ್ಯುತ್‌ ಕಂಬಗಳು ಮತ್ತು 14076 ವಿದ್ಯುತ್‌ ಪರಿವರ್ತಕಗಳು 3724 ವಿದ್ಯುತ್‌ ಲೈನ್‌ಗಳು ನಾಶವಾಗಿವೆ. ಸಾವಿರಕ್ಕಿಂತ ಅಧಿಕ ಕಾಫಿ ಎಸ್ಟೇಟ್‌ಗಳು ನಾಶವಾಗಿವೆ. ತ್ವರಿತಗತಿಯಲ್ಲಿ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ತು ಮಾಜಿ ಸದಸ್ಯ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ರಾಜ್ಯದಲ್ಲಿ ಕಂಡು ಕೆಳರಿಯದ ಭೀಕರ ನೆರೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕೇಂದ್ರ ರಾಜ್ಯ ಸರ್ಕಾರ ಯಾವುದೇ ರೀತಿಯ ಪರಿಹಾರ ನೀಡದೇ ಕಾಲ ಕಳೆಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ನಿರ್ಮಲ್ ಸೀತಾರಾಮನ್‌ ಬಂದು ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿ ಹೋಗಿದ್ದಾರೆ. ಆದರೆ ಇಲ್ಲಿಯವರೆಗೆ ಪರಿಹಾರ ಹಣ ಘೊಷಣೆ ಮಾಡಿಲ್ಲ ಎಂದು ಆರೋಪಿಸಿದರು.

ಬಿಜೆಪಿ ದೇಶದ ಜನರಿಗೆ ಸುಳ್ಳು ಅಶ್ವಾಸನೆ ಕೊಟ್ಟು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಈಗ ಸುಳ್ಳು ಭರವಸೆ ಕೊಟ್ಟು ಕಾಲ ಕಳೆಯುತ್ತಿದೆ. ದೇಶಕ್ಕೆ ಬೇಕಾಗಿರುವುದು ಸಳ್ಳು ಅಶಾಸ್ವನೆಗಳಲ್ಲ. ಬೇಕಾಗಿರುವುದು ಬಲಿಷ್ಠವಾದ ಅರ್ಥ ವ್ಯವಸ್ಥೆ ರೂಪಿಸುವ ಯೋಜನೆಗಳು ಎಂದು ಹೇಳಿದರು.

ಶರಣಗೌಡ ಮಲಾØರ, ಬಾಷುಮೀಯಾ ವಡಿಗೇರಾ, ಶ್ರೀನಿವಾಸರೆಡ್ಡಿ ಕಂದಕೂರ, ಮಲ್ಲಣ್ಣ ದಾಸನಕೇರಿ, ಲಾಯಕ್‌ ಹುಸೇನ್‌ ಬಾದಲ್, ವಿಶ್ವನಾಥ ನೀಲಹಳ್ಳಿ, ಭೀಮರಾಯ ಠಾಣಗುಂದಿ, ಮಂಜೂಳ ಗೂಳಿ, ಮಾಣಿಕರೆಡ್ಡಿ ಕುರಕುಂದಾ, ಮಹಿಪಾಲರೆಡ್ಡಿ ಹತ್ತಿಕುಣಿ, ಜಿಪಂ ಮಾಜಿ ಅಧ್ಯಕ್ಷ ಬಸರೆಡ್ಡಿ ಮಾಲಿಪಾಟೀಲ, ಸಂಜಯ ಮುಂಡರಗಿ ಮಾತನಾಡಿದರು.

ಸುದರ್ಶನ ನಾಯಕ, ಚನ್ನಕೇಶವಗೌಡ ಬಾಣತಿಹಾಳ, ಶರಣಪ್ಪ ಕೂಲುರ, ಹಣಮಂತ ಅಚ್ಚೋಲಾ, ರಾಘವೇಂದ್ರ ಮಾನಸಗಲ್, ಭೀಮರೆಡ್ಡಿ ಚಟ್ಟನಳ್ಳಿ, ಶಿವರಾಜ ಸಾಹು, ಮರೆಪ್ಪ ಬಿಳ್ಹಾರ, ಲಕ್ಷ್ಮಣ ರಾಠೊಡ ಸೇರಿದಂತೆ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.