ಮೈಸೂರು ದಸರಾದಲ್ಲಿ ಪ್ರವಾಹ ನಿಭಾಯಿಸಿದ ಸ್ಥಿ ತಿ ಅನಾವರಣ
Team Udayavani, Sep 23, 2019, 1:21 PM IST
ಅನೀಲ ಬಸೂದೆ
ಯಾದಗಿರಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಬರಗಾಲವಿದ್ದರೂ ನೆರೆಯ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಕೃಷ್ಣಾ ಮತ್ತು ಭೀಮೆಯ ರೌದ್ರ ನರ್ತನದಿಂದ ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ನಿಭಾಯಿಸಿರುವುದನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಗಳ ಮೂಲಕ ಮೈಸೂರು ದಸರಾ ಉತ್ಸವದಲ್ಲಿ ಪ್ರದರ್ಶಿಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.
ಜಿಲ್ಲೆಯ ನಾರಾಯಣಪುರ ಜಲಾಶಯ ಮತ್ತು ಸನ್ನತಿ ಬ್ಯಾರೇಜ್‌ಗೆ ಮಹಾರಾಷ್ಟ್ರದ ನೀರು ಹರಿಬಿಟ್ಟಿದ್ದರಿಂದ ನದಿ ಪಾತ್ರಕ್ಕೆ ನೀರು ಹರಿಸಿದ್ದು ಅವಾಂತರ ಸೃಷ್ಟಿಸಿತ್ತು. ಇದರಿಂದಾಗಿ ಜಿಲ್ಲೆಯ ವಡಗೇರಾ, ಶಹಾಪುರ, ಹುಣಸಗಿ ಹಾಗೂ ಸುರಪುರ ತಾಲೂಕಿನ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿ
ಸುಮಾರು 28ಕ್ಕೂ ಹೆಚ್ಚು ಗ್ರಾಮಗಳ 7260 ಜನರು ಸಂತ್ರಸ್ತರಾಗಿದ್ದರು. ಅಲ್ಲದೇ ಜಾನುವಾರುಗಳು ಪ್ರವಾಹದಲ್ಲಿ ಸಿಲುಕಿದ್ದನ್ನು ಪ್ರತ್ಯಕ್ಷವಾಗಿ ನೋಡದಿದ್ದರೂ ಕಷ್ಟದ ಸ್ಥಿತಿ ಎದುರಿಸಿ ರಕ್ಷಣಾ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಿದ್ದನ್ನು ಚಿತ್ರಗಳು ಕಣ್ಮುಂದೆ ಕಟ್ಟುವಂತಿವೆ.
ಜಿಲ್ಲಾ ಪಂಚಾಯಿತಿ ಸ್ತಬ್ಧಚಿತ್ರವು ಮುಂದೆ ಅಂಬಿಗರ ಚೌಡಯ್ಯನವರ ಮೂರ್ತಿ ಹೊಂದಿರಲಿದ್ದು, ಈಗಾಗಲೇ ಮೂರ್ತಿ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಈ ಸ್ತಬ್ಧಚಿತ್ರ ತುಮಕೂರ ಜಿಲ್ಲೆಯ ಕಲಾವಿದ ಯೋಗೇಶ ಎಂಬುವವರು ತಯಾರಿಸುತ್ತಿದ್ದಾರೆ.
ರಾಷ್ಟ್ರ ಮತ್ತು ರಾಜ್ಯದ ವಿಪತ್ತು ತಂಡಗಳು ಆಗಮಿಸುವುದಕ್ಕಿಂತ ಮುಂಚೆ ನದಿ ಪಾತ್ರದಲ್ಲಿರುವ ಅಂಬಿಗರು ಜನರನ್ನು ಸಂಕಷ್ಟದಿಂದ ಪಾರು ಮಾಡಲು ಸಾಕಷ್ಟು ಶ್ರಮಿಸಿದ್ದರು. ಹೀಗಾಗಿ ಅಂಬಿಗ ಕಾಯಕ ಮಾಡುತ್ತಿದ್ದ ಶೇಷ್ಠ ವಚನಕಾರ ಚೌಡಯ್ಯ ಅವರಿಗೆ ಗೌರವಿಸುವ ಕಾರ್ಯ ಇದಾಗಿದೆ.
ಪ್ರವಾಹಕ್ಕೆ ತುತ್ತಾದ ಜನರನ್ನು ವಿಪತ್ತು ನಿರ್ವಹಣಾ ಸಿಬ್ಬಂದಿ ರಕ್ಷಿಸುತ್ತಿರುವುದು, ಶಹಾಪುರ ತಾಲೂಕಿನ ಕೊಳ್ಳೂರು ಎಂ. ಸೇತುವೆ ಸಂಪೂರ್ಣ ಮುಳುಗಡೆ ಆಗಿರುವುದು, ನೀಲಕಂಠರಾಯನಗಡ್ಡಿ ಜನರು ಪ್ರವಾಹದಲ್ಲಿ ಈಜುವುದು, ಸಂತ್ರಸ್ತರಿಗಾಗಿ ಆರಂಭಿಸಿದ್ದ ಕಾಳಜಿ ಕೇಂದ್ರ,
ಜಾನುವಾರುಗಳಿಗೆ ಆರಂಭಿಸಿದ್ದ ಗೋ ಶಾಲೆ, ಕಾಳಜಿ ಕೇಂದ್ರಗಳಲ್ಲಿನ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರಂಭಿಸಿದ್ದ ಆರೋಗ್ಯ ತಪಾಸಣೆ ಕೇಂದ್ರಗಳನ್ನು ತೆರೆದು ಪ್ರವಾಹ ಪರಿಸ್ಥಿತಿ ನಿಭಾಯಿಸಿರುವ ಕುರಿತು ಸ್ತಬ್ಧಚಿತ್ರ ನೋಡುಗರ ಕಣ್ಮುಂದೆ ತೆರೆದಿಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.