ಧೂಳು.. ಜನರ ಗೋಳು..!
ಬೇಸತ್ತ ವ್ಯಾಪಾರಸ್ಥರು•ಆರೋಗ್ಯದ ಮೇಲೆ ದುಷ್ಪರಿಣಾಮ: ಆಕ್ರೋಶ
Team Udayavani, May 19, 2019, 11:47 AM IST
ಯಾದಗರಿ: ನಗರದ ಗಂಜ ಪ್ರದೇಶದಿಂದ ಸಂಚರಿಸುವ ವಾಹನದ ಹಿಂದೆ ಧೂಳು ಎದ್ದಿರುವುದು.
ಯಾದಗಿರಿ: ನಗರದ ಮುಖ್ಯರಸ್ತೆಗಳಲ್ಲೆಲ್ಲಾ ವಾಹನ ದಟ್ಟಣೆ ಹೆಚ್ಚುತ್ತಿರುವ ಜೊತೆ ಜೊತೆಗೆ ಧೂಳಿನ ಪ್ರಮಾಣವೂ ಹೆಚ್ಚಾಗುತ್ತಿದ್ದು, ಇದರಿಂದ ಧೂಳು ನಗರವೆಂಬ ಖ್ಯಾತಿಗೆ ಜಿಲ್ಲಾ ಕೇಂದ್ರ ಪಾತ್ರವಾಗುತ್ತಿದೆ.
ನಗರದ ಗಂಜ್ ಪ್ರದೇಶದಿಂದ ಬಸ್ ನಿಲ್ದಾಣದ ಮಾರ್ಗದಲ್ಲಿ ಹಳೆದ ಬಸ್ ನಿಲ್ದಾಣದವರೆಗೆ ರಸ್ತೆ ಅಕ್ಕಪಕ್ಕ ಸಾಕಷ್ಟು ಪ್ರಮಾಣದಲ್ಲಿ ಧೂಳು ಸಂಗ್ರಹಗೊಂಡಿದ್ದು, ಬಸ್ ಇನ್ನಿತರ ದೊಡ್ಡ ವಾಹನಗಳು ಸಂಚರಿಸಿದರೆ ಅದರ ಹಿಂದೆಯೇ ಧೂಳು ಹಿಂಬದಿ ಸವಾರರ ಕಣ್ಣಿಗೆ ಬೀಳುತ್ತಿದ್ದು ಇದರಿಂದ ಅನಾಹುತಗಳಾಗುವ ಸಂಭವವಿದೆ ಎಂದು ದ್ವಿಚಕ್ರ ವಾಹನ ಸವಾರರು ಭೀತಿ ಎದುರಿಸುವಂತಾಗಿದೆ.
ಮುದ್ನಾಳ ಪೆಟ್ರೋಲ್ ಪಂಪ್ ಮಾರ್ಗವಾಗಿ ತಹಸೀಲ್ದಾರ್ ಕಚೇರಿ ಮಾರ್ಗದಲ್ಲಿಯೂ ವ್ಯಾಪಕ ಧೂಳಿನಿಂದ ಜನ ತೊಂದರೆ ಅನುಭವಿಸುವಂತಾಗಿದೆ. ಧೂಳಿನಿಂದ ಶ್ವಾಸಕೋಶ, ಉಸಿರಾಟ ಹಾಗೂ ಚರ್ಮ ರೋಗಗಳು ಬರುವ ಸಾಧ್ಯತೆಗಳಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಿತ್ಯ ರಸ್ತೆ ಪಕ್ಕದಲ್ಲಿ ನೀರು ಸಿಂಪಡಿಸುವ ಕಾರ್ಯವನ್ನು ಮಾಡಲು ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಸ್ತೆ ಪಕ್ಕದ ಮಳಿಗೆ ವ್ಯಾಪಾರಸ್ಥರು ಧೂಳಿನಿಂದ ಬೇಸತ್ತು ಹೋಗಿದ್ದು, ಅಳಲನ್ನು ಯಾರಿಗೆ ಹೇಳಬೇಕು ಎನ್ನುವುದು ತೋಚದೆ ತೊಂದರೆಯಲ್ಲಿಯೇ ಅನಿವಾರ್ಯವಾಗಿ ಕಾಲ ಕಳೆಯುವಂತಾಗಿದೆ. ಭಯದಿಂದ ಬೆಳಗ್ಗೆಯಿಂದ ರಾತ್ರಿಯವರೆಗೆ ಮೂಗಿಗೆ ಬಟ್ಟೆ ಕಟ್ಟಿಕೊಂಡೇ ವ್ಯಾಪಾರ ಮಾಡುವ ಪರಿಸ್ಥಿತಿ ಎದುರಾಗಿದೆ ಎನ್ನುತ್ತಾರೆ ವ್ಯಾಪಾರಸ್ಥರು.
ಸಂಚಾರ ದಟ್ಟಣೆಯ ರಸ್ತೆಗಳಲ್ಲಿ ಧೂಳು ವ್ಯಾಪಕವಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದರೆ ನಗರಸಭೆ ಅಧಿಕಾರಿಗಳು ಮಾತ್ರ ತನಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹೆಚ್ಚು ಧೂಳಿನಿಂದ ಮನುಷ್ಯ ಸಾಕಷ್ಟು ತೊಂದರೆಗಳಿಗೆ ಸಿಲುಕಿಕೊಳ್ಳುತ್ತಾನೆ. ಮೊದಲಿಗೆ ಕೆಮ್ಮು-ದಮ್ಮು ಪ್ರಾರಂಭಗೊಂಡು ಉಸಿರಾಟ ತೊಂದರೆಯಾಗುತ್ತದೆ. ದಿನ ಕಳೆದಂತೆ ಅಲರ್ಜಿಕ್ ಬ್ರ್ಯಾಂಕೈಟೀಸ್ ಆಗುವ ಸಾಧ್ಯತೆಗು ಇವೆ. ಅಲ್ಲದೇ ಡರ್ಮಾಟೈಟಿಸ್‌ನಂತಹ ಚರ್ಮ ವ್ಯಾಧಿಯೂ ಆಗಬಹುದು ಎನ್ನುತ್ತಾರೆ ವೈದ್ಯರು.
ನಗರದ ಮುಖ್ಯಬೀದಿಗಳಲ್ಲಿ ಧೂಳು ಹೆಚ್ಚಾಗಿದ್ದು, ಬೃಹತ್ ಗಾತ್ರದ ವಾಹನಗಳು ಸಂಚರಿಸಿದರೆ ರಸ್ತೆಯಲ್ಲಿರುವ ಎಲ್ಲರ ಮುಖಕ್ಕೆ ಧೂಳು ಆವರಿಸುತ್ತದೆ.ದೊಡ್ಡ ವಾಹನಗಳ ಹಿಂದೆ ಬರುವ ದ್ವಿಚಕ್ರ ವಾಹನ ಸವಾರರು ಧೂಳಿನಿಂದ ತೀರಾ ತೊಂದರೆ ಅನುಭವಿಸುವಂತಾಗಿದೆ. ಕಣ್ಣುಗಳಲ್ಲಿ ಧೂಳು ಹೋಗಿ ಅಪಾಯಕ್ಕೆ ಎಡೆಮಾಡುವ ಸಾಧ್ಯತೆಗಳಿದ್ದು ಅಧಿಕಾರಿಗಳು ಇತ್ತ ಗಮನಹರಿಸಬೇಕು.
•ಸುನೀಲ್, ಸ್ಥಳೀಯರು
ಅನೀಲ ಬಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.