ಜಿಲ್ಲೆಯಲ್ಲಿ ಹೆಚ್ಚಿದ ಡೆಂಘೀ ಭೀತಿ

ಜಿಲ್ಲಾ ಕೇಂದ್ರದಲ್ಲಿಲ್ಲ ಸ್ವಚ್ಛತೆಗೆ ಆದ್ಯತೆ•ಬಡಾವಣೆಗಳಲ್ಲಿ ಚರಂಡಿ ನೀರು ಸಂಗ್ರಹ

Team Udayavani, May 23, 2019, 11:12 AM IST

23-May-7

ಯಾದಗಿರಿ: ನಗರದ ಸ್ಟೇಷನ್‌ ಏರಿಯಾದ ಜನವಸತಿ ಪ್ರದೇಶದಲ್ಲಿ ಸಂಗ್ರಹವಾಗಿರುವ ಕೊಳಚೆ ನೀರು.

ಯಾದಗಿರಿ: ಜಿಲ್ಲಾ ಕೇಂದ್ರದ ಬಹುತೇಕ ಬಡಾವಣೆಗಳಲ್ಲಿ ಚರಂಡಿಗಳ ಅವ್ಯವಸ್ಥೆಯಿಂದ ತಗ್ಗು ಪ್ರದೇಶದಲ್ಲಿ ಕೊಳಚೆ ನೀರು ಸಂಗ್ರಹಗೊಂಡು ನಿರುಪಯುಕ್ತ ತ್ಯಾಜ್ಯಗಳಲ್ಲಾ ಸೇರಿ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಈವರೆಗೆ 57 ಡೆಂಘೀ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ ಯಾದಗಿರಿ 34, ಶಹಾಪುರ 16 ಹಾಗೂ ಸುರಪುರದಲ್ಲಿ 7 ಪ್ರಕರಣ ಖಚಿತ ಪಟ್ಟಿರುವ ಕುರಿತು ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಡೆಂಘೀ ವೈರಾಣುವಿನಿಂದ ಬರುವ ರೋಗವಾಗಿದ್ದು, ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಅಥವಾ ಲಸಿಕೆ ಇಲ್ಲ. ಹಾಗಾಗಿ, ತೀವ್ರ ಜ್ವರ ಕಂಡು ಬಂದಲ್ಲಿ ಕೂಡಲೇ ರಕ್ತ ಪರೀಕ್ಷೆ ಮಾಡಿಸಿ, ಚಿಕಿತ್ಸೆ ನೀಡಿದಲ್ಲಿ ರೋಗದಿಂದಾಗುವ ಅನಾಹುತ ತಪ್ಪಿಸಬಹುದು, ಜಿಲ್ಲೆಯಲ್ಲಿ ಡೆಂಘೀ ಜ್ವರದ ತಾಂಡವದಿಂದ ಸಾರ್ವಜನಿಕರಲ್ಲಿ ಹೆಚ್ಚಿನ ಭೀತಿ ಆವರಿಸಿದ್ದು, ಆರೋಗ್ಯ ಇಲಾಖೆ ಡೆಂಘೀನಂತಹ ರೋಗದ ಕುರಿತು ಜಾಗೃತಿ ಮೂಡಿಸಿ ಕೈ ತೊಳೆದುಕೊಂಡರೆ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಜವಾಬ್ದಾರಿ ಹೊಂದಿರುವ ನಗರಸಭೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ ಎನ್ನುವ ಅಸಮಾಧಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಮಳೆಗಾಲ ಹೆಚ್ಚಿಸಿದೆ ಇನ್ನಷ್ಟು ಆತಂಕ: ಜಿಲ್ಲೆಯಲ್ಲಿ ಕೆಂಡದಂತ ಬಿಸಿಲಿದೆ. ಅದರಲ್ಲಿಯೂ ಭಯಾನಕ ಸೊಳ್ಳೆಕಾಟದಿಂದ ರೋಗಗಳು ಹರಡುತ್ತಿದ್ದು, ಈಗಷ್ಟೇ ಮಳೆಗಾಲ ಆರಂಭವಾಗಲಿದೆ. ಹಾಗಾಗಿ ಮಳೆ ನೀರು ಹೆಚ್ಚಿನ ಪ್ರಮಾಣದಲ್ಲಿ ಬಡವಣೆಗಳ ತೆಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಗಂಭೀರ ಸಮಸ್ಯೆ ಆಗುವ ಸಾಧ್ಯತೆಯಿದೆ. ಹಾಗಾಗಿ ಮಳೆಗಾಲ ಆರಂಭಕ್ಕೂ ಮುನ್ನ ನಗರಸಭೆ ಎಚ್ಚೆತ್ತು ಕೊಳಚೆ ವಿಲೇವಾರಿ ಮಾಡಬೇಕಿದೆ.

ಮುನ್ನೆಚ್ಚರಿಕೆ ವಹಿಸಿ
ಹೂಕುಂಡ, ಮೇಲ್ಚಾವಣಿಯ ನೀರಿನ ಟ್ಯಾಂಕ್‌ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನಃ ನೀರು ತುಂಬಬೇಕು. ಮನೆಯ ಸುತ್ತಲೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿ ಪರಿಸರವನ್ನು ಸ್ವಚ್ಛವಾಗಿಡಬೇಕು. ಸ್ವಚ್ಛತೆ ಎಲ್ಲರ ಜವಾಬ್ದಾರಿಯಾಗಿದ್ದು, ತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ, ಪ್ಲಾಸ್ಟಿಕ್‌ ಕಪ್‌, ಪ್ಲಾಸ್ಟಿಕ್‌ ಗ್ಲಾಸ್‌ಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್‌ ಕಪ್‌ ಮತ್ತು ಗ್ಲಾಸ್‌ಗಳನ್ನು ಬಳಸಬೇಡಿ. ಅನುಪಯುಕ್ತ ಟೈರ್‌ಗಳನ್ನು ಮನೆಯ ಮೇಲ್ಚಾವಣಿಯಲ್ಲಿ ಎಸೆಯದೇ ಎಚ್ಚರವಹಿಸಬೇಕು.

ಡೆಂಘೀ ರೋಗಕ್ಕೆ ಕೇವಲ ಪ್ಯಾರಾಸಿಟಮಲ್ ಮಾತ್ರೆಗಳನ್ನು ಉಪಯೋಗಿಸಬೇಕು. ಯಾವುದೇ ಕಾರಣಕ್ಕೂ ಅಸಪ್ರಿನ್‌, ಬ್ರೊಪ್ರೀನ್‌ ಮಾತ್ರೆಗಳನ್ನು ಬಳಸಬಾರದು. ಡೆಂಘೀ ರೋಗದ ನಿಯಂತ್ರಣವು ಎಲ್ಲರ ಜವಾಬ್ದಾರಿಯಾಗಿದೆ. ಸಂಬಂಧಪಟ್ಟ ಇಲಾಖೆಗಳು ಸಹಕರಿಸಬೇಕು.
•ಡಾ| ಸೂರ್ಯಪ್ರಕಾಶ ಕಂದಕೂರ,
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಜಿಲ್ಲಾ ಕೇಂದ್ರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಸಂಗ್ರಹವಾಗಿ ರೋಗಗಳ ಭೀತಿ ಎದುರಾಗಿದೆ. ಮಳೆಗಾಲ ಆರಂಭದಲ್ಲಿ ಸಾಂಕ್ರಾಮಿಕ ರೋಗಗಳು ಆವರಿಸುವ ಆತಂಕ ಎದುರಾಗಿದ್ದು, ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು.
ಅಂಬರೀಷ್‌, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.